ಮಂಗಳೂರು: ಮೂವರು ಕಾಲೇಜು ವಿಧ್ಯಾರ್ಥಿಗಳ ಮೇಲರ ಆ್ಯಸಿಡ್ ದಾಳಿ ನಡೆದಿರುವ ಘಟನೆ ಮಂಗಳೂರಿನ ಕಡಬದಲ್ಲಿ ನಡೆದಿದೆ. ಮುಖ ಮುಚ್ಚಿಕೊಂಡು ಬಂದಾತ ಮೂವರು ವಿದ್ಯಾರ್ಥಿಗಳಿಗೆ ಆ್ಯಸಿಡ್ ಎರಚಿ ಪರಾರಿಯಾಗಿದ್ದಾನೆ. ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಕಡಬ ಸರ್ಕಾರಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದರು ಎಂಬುದು ತಿಳಿದು ಬಂದಿದೆ. ಕಾಲೇಜಿಗೆ ತೆರಳುತ್ತಿದ್ದಂತ ಅಲೀನಾ, ಅರ್ಚನಾ, ಅಮೃತಾ ಅವರ ಮೇಲೆ ಆ್ಯಸಿಡ್ ದಾಳಿ ನಡೆಸಲಾಗಿದೆ. ಗಂಭೀರ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆ್ಯಸಿಡ್ ದಾಳಿ ಮಾಡಿದವ ಕೇರಳ ಮೂಲದವನು ಎಂಬುದಾಗಿ ಪ್ರಾಥಮಿಕ ತನಿಖೆಯಲ್ಲಿ ಹೊರಬಿದ್ದಿದೆ. ಅಬೀನ್ ಎಂದು ಹೇಳಲಾಗಿದ್ದು, ಮುಖಕ್ಕೆ ಮಾಸ್ಕ್ ಹಾಕಿಕೊಂಡು ಬಂದು ದಾಳಿ ನಡೆಸಿದ್ದಾನೆ. ಸದ್ಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಈ ರೀತಿಯ ಕೃತ್ಯ ಮಾಡುವುದಕ್ಕೆ ಕಾರಣ ಏನು ಎಂಬುದು ಮಾತ್ರ ಇನ್ನು ತಿಳಿದು ಬಂದಿಲ್ಲ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















