ACID ATTACK | ಯುವಕನ ಮೇಲೆ ಆಸಿಡ್ ದಾಳಿ

1 Min Read

 

 

ಸುದ್ದಿಒನ್, ಹಿರಿಯೂರು, ಜನವರಿ.16 : ನಗರದ ವಿಎಂಪಿ ಮಹಲ್ ಹೋಟೆಲ್ ಬಳಿ ಶೌಚಕ್ಕೆ ಹೋಗಿ ಬರುತ್ತಿದ್ದ ಯುವಕನ ಮೇಲೆ ಇಬ್ಬರು ಅಪರಿಚಿತ ವ್ಯಕ್ತಿಗಳು ಆಸಿಡ್ ಎರಚಿ ಪರಾರಿಯಾದ ಘಟನೆ ಮಂಗಳವಾರ ಸಂಜೆ ನಡೆದಿದೆ.

ಗಾಯಾಳುವನ್ನು ಹೊಳಲ್ಕೆರೆ ಮೂಲದ ಅರುಣ್ ಕುಮಾರ್ (29) ಎಂದು ಗುರುತಿಸಲಾಗಿದೆ. ಆತನನ್ನು ತಕ್ಷಣವೇ ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಲೆ, ಮುಖ ಹಾಗೂ ಇನ್ನಿತರ ಭಾಗಗಳಿಗೆ ಆಸಿಡ್ ಎರಚಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅರುಣ್ ಕುಮಾರ್ ರವರನ್ನು ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಕಾರಣವೇನೆಂಬುದು ತಿಳಿದು ಬಂದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿರಿಯೂರು ನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *