ದೇವದಾಸಿ ಪದ್ಧತಿ ನಡೆದದ್ದು ಗಮನಕ್ಕೆ ಬಂದರೆ SP-DC ವಿರುದ್ಧ ಮುಲಾಜಿಲ್ಲದೆ ಕ್ರಮ: ಸಿಎಂ ಎಚ್ಚರಿಕೆ

 

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆದಿದೆ. ಈ ಸಭೆಯಲ್ಲಿ ಹಲವು ವಿಚಾರಗಳನ್ನು ಚರ್ಚೆ ಮಾಡಲಾಗಿದೆ. ಸಿಎಂ ಸಭೆಯಲ್ಲಿ ಚರ್ಚೆಯಾದ ಬಹಳ ಮುಖ್ಯವಾದ ಅಂಶಗಳು ಇಲ್ಲಿವೆ.

ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಬೇಲ್ ಸಿಕ್ಕರೆ ಅದು ನಿಮ್ಮ ದೌರ್ಬಲ್ಯ. ಹೀಗಾದರೆ ಜಾತಿ ದೌರ್ಜನ್ಯ ತಡೆಗಟ್ಟುವುದು ಸಾಧ್ಯವಿಲ್ಲ. ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಜಾಮೀನು ಸಿಕ್ಕರೆ, ಮೇಲ್ಮನವಿ ಹೋಗಿ ಜಾಮೀನು ರದ್ದುಪಡಿಸಿ ಆರೋಪಿಗೆ ಶಿಕ್ಷೆ ಕೊಡಿಸಿದ ಪ್ರಕರಣಗಳು ಎಷ್ಟಿವೆ ? ಈ ಬಗ್ಗೆ ವಿವರ ಕೊಡಿ ಎಂದು ಅಧಿಕಾರಿಗಳಿಗೆ ಸಿಎಂ ಪ್ರಶ್ನೆ ಮಾಡಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಸೀನಿಯರಿಟಿ ಲೀಸ್ಟ್ ಉಲ್ಲಂಘನೆ ಆಗಿ ಪರಿಶಿಷ್ಠರಿಗೆ ಅನ್ಯಾಯ ಆಗುತ್ತಿದೆ. ಸಮಿತಿ ಮುಂದೆ ದೂರು ಬಂದು ನಾವು ಹಿರಿಯ ಅಧಿಕಾರಿಗಳ ಗಮನಕ್ಕೂ ತಂದರೂ ಸಮಸ್ಯೆ ಬಗೆಹರಿಸುತ್ತಿಲ್ಲ ಏಕೆ ? ADGP ಅಡ್ಮಿನ್ ಅವರು ಸರಿಯಾಗಿ ನಡೆದುಕೊಳ್ಳುತ್ತಿಲ್ಲ ಎಂದು ಸಂಸದ ಈ.ತುಕಾರಾಮ್ ಮತ್ತು ಶಾಸಕ ನರೇಂದ್ರಸ್ವಾಮಿ ಅವರು ಸಭೆಯ ಗಮನಕ್ಕೆ ತಂದರು. ಇದರಿಂದ ಅಸಮಾಧಾನಗೊಂಡ ಸಿಎಂ ಈ ವಿಚಾರವನ್ನು ಮುಂದಿನ ಕ್ಯಾಬಿನೆಟ್ ಗೆ ತರಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸಿಎಂ ಸೂಚಿಸಿದರು.

ಬ್ಯಾಕ್ ಲಾಗ್ ಮತ್ತು ಬಡ್ತಿ ವಿಚಾರದಲ್ಲಿ ಆಗುತ್ತಿರುವ ಅನ್ಯಾಯಗಳನ್ನು ಸಬ್ ಕಮಿಟಿ ಪತ್ತೆ ಹಚ್ಚಿ ಸಮಸ್ಯೆಗಳನ್ನು ನಿಮ್ಮ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿಸದೆ ನಿರ್ಲಕ್ಷ್ಯ ತೋರಿಸುತ್ತಿದ್ದೀರಿ. ಹಾಗಾದರೆ ಸಬ್ ಕಮಿಟಿ ಕೊಡುವ ವರದಿಗಳಿಗೆ ಬೆಲೆ ಇಲ್ಲವೇ ಎಂದು ವಿಧಾನ ಪರಿಷತ್ ಸದಸ್ಯ ಸುಧಾಮ್ ದಾಸ್ ಅವರು ಸಭೆಯ ಗಮನಕ್ಕೆ ತಂದರು.

ಜಾತಿ ದೌರ್ಜನ್ಯ ದೂರು ಬಂದಾಗ ಪೊಲೀಸರೇ ಕೌಂಟರ್ ದೂರು ಪಡೆದು ಪ್ರಕರಣ ದುರ್ಬಲಗೊಳಿಸುವ ಬಗ್ಗೆ ದೂರುಗಳು ಬಂದರೆ ಅದನ್ನು ಸಹಿಸಲ್ಲ. ನಮ್ಮ ಗಮನಕ್ಕೆ ಬಂದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ತಗೊತೀವಿ. ಎಲ್ಲಾ ಇಲಾಖೆಗಳೂ ಬಡ್ತಿಯಲ್ಲಿ ಮೀಸಲಾತಿಯನ್ನು ಚಾಚೂ ತಪ್ಪದೆ ಪಾಲಿಸಬೇಕು. ಪರಿಶಿಷ್ಢ ಸಮುದಾಯದವರಿಗೆ ಅವಕಾಶ ತಪ್ಪಿಸಲು ಅಧಿಕಾರಿಗಳು ಕುಟಿಲ ನೀತಿ ಅನುಸರಿಸಿದರೆ ಸಹಿಸಲ್ಲ. ಇಲಾಖಾವಾರು ಮುಂಬಡ್ತಿಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಪರಿಶೀಲಿಸಲು ಪ್ರತ್ಯೇಕ Review ಮೀಟಿಂಗ್ ಕರೆಯುವಂತೆ ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದರು.

ಪ್ರತೀ ಆರು ತಿಂಗಳಿಗೊಮ್ಮೆ ಉಸ್ತುವಾರಿ ಸಮಿತಿ ಸಭೆಯನ್ನು ಕಡ್ಡಾಯವಾಗಿ ಕರೆಯುತ್ತೇವೆ. ಈ ಸಭೆಗಳಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಕಂಡು ಬಂದರೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಸಿಎಂ ಎಚ್ಚರಿಸಿದರು. ಅಷ್ಟೇ ಅಲ್ಲ ಈಗಾಗಲೇ ದೇವದಾಸಿ ಪದ್ಧತಿ ನಿಷೇಧವಾಗಿದ್ದು, ಎಲ್ಲಿಯಾದರೂ ದೇವದಾಸಿ ಪದ್ಧತಿ ನಡೆದದ್ದು ಗಮನಕ್ಕೆ ಬಂದರೆ SP-DC ವಿರುದ್ಧ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಿ ಎಂದರು.

 

ರಾಯಚೂರಿನ‌ ಅಂಬೇಡ್ಕರ್ ವೃತ್ತದಲ್ಲಿ ಪ್ರಗತಿಪರ ಸಂಘಟನೆಗಳ ಕ್ರಿಯಾ ಸಮಿತಿ ಅಡಿಯಲ್ಲಿ ನಡೆಯುತ್ತಿರುವ ಮಹಿಳೆಯರ ಅಹೋರಾತ್ರಿ ಧರಣಿ ವಿಚಾರವನ್ನು ಮುಖ್ಯಮಂತ್ರಿಗಳು ಈ ಸಭೆಯಲ್ಲಿ ಪ್ರಸ್ತಾಪಿಸಿದರು.

ದೇವದಾಸಿ ಮಹಿಳೆಯರಿಗೆ ಪುನರ್ವಸತಿ ಕಲ್ಪಿಸಬೇಕು, ವೈಜ್ಞಾನಿಕವಾಗಿ ದೇವದಾಸಿ ಮಹಿಳೆಯರ ಸ್ಥಿತಿ ಗತಿ ಬಗ್ಗೆ ಸಮೀಕ್ಷೆ ನಡೆಸಬೇಕು ಎನ್ನುವುದು ಪ್ರತಿಭಟನಾ ನಿರತರ ಬೇಡಿಕೆಯಾಗಿದೆ ಎಂದು ಉಲ್ಲೇಖಿಸಿದ ಮುಖ್ಯಮಂತ್ರಿಗಳು ದೇವದಾಸಿಯರ ಪುನರ್ವಸತಿ ಸಮಸ್ಯೆ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಕೇಳಿದರು.

ಈ ಬಗ್ಗೆ ಕೆಲ ಹೊತ್ತು ಚರ್ಚೆ ನಡೆದ ಬಳಿಕ ದೇವದಾಸಿ ಸಮಸ್ಯೆ ಮತ್ತು ಪುನರ್ವಸತಿ ಬಗ್ಗೆ ಸಮಗ್ರ ವರದಿ ಸಿದ್ದಪಡಿಸಲು ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದರು.

ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಹಕ್ಕು ಪತ್ರ ಸಮರ್ಪಕವಾಗಿ ನೀಡಬೇಕು. ಯಾವುದೇ ಕಾರಣಕ್ಕೂ ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು ಎಂದು ಸೂಚಿಸಿದರು.

ಸಭೆಗೆ ಅಧಿಕಾರಿಗಳು ನೀಡಿರುವ ಅನುಪಾಲನಾ ವರದಿಯಲ್ಲಿ ಮುಂದಿನ ಬಾರಿ ಜಿಲ್ಲಾವಾರು ಅಂಕಿ ಅಂಶ ನಮೂದಿಸಲು ಸೂಚಿಸಲಾಯಿತು.

ದೌರ್ಜನ್ಯ ಪ್ರಕತಣಗಳಲ್ಲಿ 60 ದಿನಗಳ ಒಳಗೆ ಆರೋಪಪಟ್ಟಿ ದಾಖಲಿಸಲೇಬೇಕು. ಯಾರಾದರೂ ನ್ಯಾಯಾಲಯದಿಂದ ತಡೆಯಾಜ್ಞೆ ತಂದರೆ ಅಡ್ವೊಕೇಟ್ ಜನರಲ್ ಜೊತೆ ಚರ್ಚಿಸಿ ತಡೆಯಾಜ್ಞೆ ತೆರವುಗೊಳಿಸಬೇಕು ಎಂದು ಸಿಎಂ ಸ್ಪಷ್ಟ ಸೂಚನೆ ನೀಡಿದರು*

ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಹಲವು ದಶಕಗಳಿಂದ 3℅ ಗಿಂತ ಹೆಚ್ಚಾಗಿಲ್ಲ. ಈ ಕಾರಣಕ್ಕೂ ನಾನು DCRE ಸೆಲ್ ಗಳಿಗೆ ಪೊಲೀಸ್ ಠಾಣೆ ಶಕ್ತಿ ನೀಡಿದ್ದಾಗಿದೆ. ಇನ್ನೂ ಶಿಕ್ಷೆ ಪ್ರಮಾಣ ಹೆಚ್ಚಾಗದಿದ್ದರೆ ಹೇಗೆ? ಪ್ರಕರಣಗಳ ತನಿಖೆಯ ಗುಣಮಟ್ಟದ ಬಗ್ಗೆ ಗಮನ ಹರಿಸಲು ಸಿಎಂ ಸೂಚಿಸಿದರು.

ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣ ಕಡಿಮೆ ಇದೆ, ಕೌಂಟರ್ ಕೇಸ್ ಗಳಲ್ಲಿ ಶಿಕ್ಷೆ ಪ್ರಮಾಣ ಹೆಚ್ಚಾಗಿದೆಯೇ ಎಂದು ವಿಧಾನ ಪರಿಷತ್ ಸದಸ್ಯ ಸುಧಾಮ್ ದಾಸ್ ಅವರು ಅಸಮಾಧಾನದಿಂದ ಸಭೆಯಲ್ಲಿ ಪ್ರಶ್ನಿಸಿದರು. 3 ವಿಶೇಷ ನ್ಯಾಯಾಲಯಗಳಿಗೆ ಮಾತ್ರ ಅನುಮತಿ ಸಿಕ್ಕಿದೆ. ಇನ್ನೂ 24 ವಿಶೇಷ ನ್ಯಾಯಾಲಯಗಳಿಗೆ ಅನುಮತಿ ದೊರೆತಿಲ್ಲ ಎಂದು ಮುಖ್ಯಮಂತ್ರಿಗಳ ಗಮನ ಸೆಳೆದರು. ಬಳಿಕ ಈ ಬಗ್ಗೆ ತಾವು ತೀವ್ರವಾಗಿ ಗಮನಿಸಿ ಬಾಕಿ ನ್ಯಾಯಾಲಯಗಳಿಗೆ ಬೇಗ ಅನುಮತಿ ಸಿಗುವ ದಿಕ್ಕಿನಲ್ಲಿ ಗಮನ ಹರಿಸುವುದಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ತಿಳಿಸಿದರು.

ಪರಿಶಿಷ್ಠರ ಕೊಲೆ ಮತ್ತು ಅತ್ಯಾಚಾರ ಪ್ರಕರಣಗಳಲ್ಲಿ ತನಿಖೆ ತಡ ಆದಷ್ಟೂ, ನ್ಯಾಯಾಲಯಗಳಲ್ಲಿ ವಿಚಾರಣೆ ತಡೆ ಆದಷ್ಟೂ ಸಾಕ್ಷಿ ನಾಶ ಆಗುತ್ತದೆ. ಈ ಪ್ರಕರಣಗಳಲ್ಲಿ Burden of proof ಆರೋಪಿಗಳ ಮೇಲಿರುತ್ತದೆ. ಆದ್ದರಿಂದ ಶಿಕ್ಷೆ ಪ್ರಮಾಣ ಹೆಚ್ಚಾಗಲೇ ಬೇಕು. ಯಾಕೆ ಆಗುತ್ತಿಲ್ಲ ಎಂದು ಪ್ರಶ್ನಿಸಿದ ಸಿಎಂ, ಆರೋಪ ಪಟ್ಟಿ ಶೀರ್ಘವಾಗಿ ಸಲ್ಲಿಸಿ ಸಾಕ್ಷ್ಯಗಳನ್ನು ಪರಿಣಾಮಕಾರಿಯಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಎಂದು ಸಿಎಂ ಸೂಚಿಸಿದರು.

ಪೋಕ್ಸೋ ಪ್ರಕರಣಗಳು ನ್ಯಾಯಾಲಯಗಳಲ್ಲಿ ದೀರ್ಘ ಕಾಲದಿಂದ ಬಾಕಿ ಇದ್ದರೆ ಪ್ರಾಸಿಕ್ಯೂಷನ್ ಜೊತೆ ಚರ್ಚಿಸಿ ಬೇಗ ಇತ್ಯರ್ಥ ಪಡಿಸಲು, ಶೀರ್ಘ್ರ ನ್ಯಾಯದಾನಕ್ಕೆ ಕ್ರಮ ವಹಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

 

suddionenews

Recent Posts

ಫೈನಾನ್ಸ್ ಕಿರುಕುಳಕ್ಕೆ ದಾವಣಗೆರೆಯ ಶಿಕ್ಷಕಿ ಆತ್ಮಹತ್ಯೆ ಕೇಸ್ : ಉಲ್ಟಾ ಹೊಡೆದ ಪತಿ..!

ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…

2 hours ago

ಹುತಾತ್ಮರ ದಿನ : ಗಾಂಧೀಜಿಯವರಿಗೆ ಪುಷ್ಪ ನಮನ

ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…

2 hours ago

ಸರ್ಕಾರಿ ಶಾಲೆಗೆ ಭೇಟಿ ನೀಡಿ ಮಕ್ಕಳೊಂದಿಗೆ ಬಿಸಿಯೂಟ ಸವಿದ ಜಿ.ಪಂ ಸಿಇಒ

ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…

2 hours ago

ಮೈಕ್ರೋ ಫೈನಾನ್ಸ್ ಕಿರುಕುಳ ನೀಡಿದಲ್ಲಿ ಎಫ್.ಐ.ಆರ್ ದಾಖಲಿಸಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು  ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್‌ಐಆರ್…

2 hours ago

ವಾಹನ ಚಾಲನೆ ವೇಳೆ ತಾಳ್ಮೆ ಅಗತ್ಯ : ಮಹಾಂತೇಶ್

ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ವಾಹನ ಚಲಾವಣೆ ಮಾಡುವ ಸಂದರ್ಭ ಬಹಳಷ್ಟು ತಾಳ್ಮೆ ಅಗತ್ಯ. ಇಲ್ಲದಿದ್ದರೆ ಅಪಘಾತಗಳು ಹೆಚ್ಚು…

3 hours ago

ಮಹೇಶ್ ಮೋಟಾರ್ಸ್ ನಲ್ಲಿ ಹೊಸ ಹೀರೋ ಡೆಸ್ಟಿನಿ 125 ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ಪ್ರತಿಷ್ಠಿತ ದ್ವಿಚಕ್ರ ವಾಹನ ಕಂಪನಿಯಾದ ಹೀರೊ ಮೋಟೋಕಾರ್ಪ್ ನ ಹೊಸ ಮಾದರಿಯ ದ್ವಿಚಕ್ರ…

3 hours ago