ಬೆಂಗಳೂರು: ರಾಜ್ಯದ ಹಲವೆಡೆ ಜೋರು ಮಳೆ ಶುರುವಾಗಿದೆ. ಇದೀಗ ವ್ಯವಸಾಯ ಮಾಡುವವರು ಭಿತ್ತನೆ ಕಡೆಗೆ ಗಮನ ಕೊಡುತ್ತಿದ್ದಾರೆ. ಈ ವೇಳೆ ಬಿತ್ತನೆ ಬೀಜ ಮತ್ತು ರಸಗೊಬ್ಬರದ ಅಗತ್ಯತೆ ಹೆಚ್ಚಾಗಿರುತ್ತದೆ. ಆದರೆ ಕೆಲವೊಂದು ಜಿಲ್ಲಾ ಕೇಂದ್ರದಲ್ಲಿ ಗೊಬ್ಬರ ಮತ್ತು ಬಿತ್ತನೆ ಬೀಜದ ಕೊರತೆಯ ಆರೋಪಗಳು ಕೇಳಿ ಬಂದಿವೆ. ಈ ಬಗ್ಗೆ ಎಚ್ಚರಿಕೆ ನೀಡಿರುವ ಸಚಿವ ಬಿ ಸಿ ಪಾಟೀಲ್, ಕೃತಕ ಅಭಾವ ಸೃಷ್ಟಿಸಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.
ರಾಜ್ಯದಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಕ್ಕೆ ಯಾವುದೇ ರೀತಿಯ ಕೊರತೆ ಇಲ್ಲ. 2022-23ರಲ್ಲಿ 82.67ಲಕ್ಷ ಎಕ್ಟೇರ್ ಪ್ರದೇಶದಲ್ಲಿ ಬಿತ್ತನೆಯ ಗುರಿ ಹೊಂದಲಾಗಿದೆ. ಇದುವರೆಗೂ 1.30 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಪೂರ್ವ ಮುಂಗಾರು ಬಿತ್ತನೆಯಾಗಿದೆ.
ರಾಜ್ಯದಲ್ಲಿ 5.30 ಲಕ್ಷ ಕ್ವಿಂಟಲ್ ಬಿತ್ತನೆ ಬೀಜದ ಬೇಡಿಕೆ ಇದೆ. 8.65 ಲಕ್ಷ ಕ್ವಿಂಟಲ್ ಬಿತ್ತನೆ ಬೀಜ ಲಭ್ಯವಿದೆ. ರಾಜ್ಯಾದ್ಯಂತ ಕೃಚಿ ಇಲಾಖೆಯ ರೈತ ಸಂಪರ್ಕ ಕೇಂದ್ರದಿಂದ ಬಿತ್ತನೆ ಬೀಜ ವಿತರಣೆ ಮಾಡಲಾಗುವುದು. ರಾಜ್ಯದಲ್ಲಿ ಯಾವುದೇ ಕೊರತೆ ಇಲ್ಲ. ಆದರೆ ಕೃತಕ ಅಭಾವ ಸೃಷ್ಟಿಸಿದರೆ ಅಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಬಿ ಸಿ ಪಾಟೀಲ್ ತಿಳಿಸಿದ್ದಾರೆ.