Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆರೋಗ್ಯ ಸಂಜೀವಿನಿಗೆ ಸಹಕಾರ ತೋರದ ಆಸ್ಪತ್ರೆಗಳ ವಿರುದ್ಧ ಕ್ರಮವಹಿಸಿ : ಮಾಲತೇಶ್ ಮುದ್ದಜ್ಜಿ ಮನವಿ

---Advertisement---

ಸುದ್ದಿಒನ್, ಚಿತ್ರದುರ್ಗ, ಜನವರಿ. 13 :ರಾಜ್ಯ ಸರ್ಕಾರಿ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಸೌಲಭ್ಯ ನೀಡುವಂತಹ “ಕರ್ನಾಟಕ ಆರೊಗ್ಯ ಸಂಜೀವಿನಿ” ಯೋಜನೆಯ ಬಗ್ಗೆ ಅಸಹಕಾರ ತೋರುವ ಖಾಸಗಿ ಆಸ್ಪತ್ರೆಗಳ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ನೌಕರರ ಸಂಘದ ಅಧ್ಯಕ್ಷ ಮಾಲತೇಶ್ ಮುದ್ದಜ್ಜಿ ಮನವಿ ಮಾಡಿದರು.


ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ
ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರ
ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಜಂಟಿ ಸಮಾಲೋಚನಾ ಸಮಿತಿ ಸಭೆಯಲ್ಲಿ ಅವರು ಭಾಗವಹಿಸಿ ಮಾತನಾಡಿದರು.

ಯೋಜನೆಯನ್ನು ಈಗಾಗಲೆ ಜಾರಿಗೊಳಿಸಲಾಗಿದ್ದು, ಯೋಜನೆಯಡಿ ಈಗಾಗಲೆ ನೋಂದಾಯಿತವಾಗಿರುವ ಖಾಸಗಿ ಆಸ್ಪತ್ರೆಗಳು ಸಿಜಿಹೆಚ್‍ಎಸ್ ಚಿಕಿತ್ಸಾ ದರ ಕಡಿಮೆ ಇದೆ ಎಂಬ ಸಬೂಬು ಹೇಳಿ, ಚಿಕಿತ್ಸೆ ನೀಡಲು ನಿರಾಕರಿಸುತ್ತಿದ್ದಾರೆ, ಅಲ್ಲದೆ ಯೋಜನೆಗೆ ಅಸಹಕಾರ ತೋರುತ್ತಿದ್ದಾರೆ.  ನೌಕರರು ಪ್ರತಿ ತಿಂಗಳು ಈ ಯೋಜನೆಗೆ ವಂತಿಗೆಯನ್ನು ಪಾವತಿಸುತ್ತಿದ್ದಾರೆ, ಆದರೆ ನೋಂದಾಯಿತ ಆಸ್ಪತ್ರೆಗಳಿಂದ ನೌಕರರಿಗೆ ನಿರೀಕ್ಷಿತ ಮಟ್ಟದಲ್ಲಿ ಸಹಕಾರ ಸಿಗುತ್ತಿಲ್ಲ.  ಈ ಕುರಿತಂತೆ ಸಂಬಂಧಿಸಿದ ಖಾಸಗಿ ಆಸ್ಪತ್ರೆಗಳಿಗೆ ಸ್ಪಷ್ಟ ಸೂಚನೆ ನೀಡಬೇಕು ಎಂದು ಅವರು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅಪರ ಜಿಲ್ಲಾಧಿಕಾರಿಗಳು, ಈ ಯೋಜನೆ ಅನುಷ್ಠಾನಕ್ಕೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಕುಷ್ಟರೋಗ ನಿವಾರಣಾ ಅಧಿಕಾರಿಗಳನ್ನು ಸದಸ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.  ಈ ಅಧಿಕಾರಿಗಳು ನೌಕರರಿಗೆ ಸಹಾಯವಾಣಿ ಹಾಗೂ, ನಿರ್ದಿಷ್ಟ ದೂರುಗಳಿದ್ದಲ್ಲಿ ಸ್ವೀಕರಿಸಿ, ಪರಿಹರಿಸುವ ಕಾರ್ಯ ಮಾಡಬೇಕು.  ಈ ಕುರಿತಂತೆ ಸೂಚನೆ ನೀಡಲಾಗುವುದು ಹಾಗೂ ಅಸಹಕಾರ ತೋರುವ ಆಸ್ಪತ್ರೆಗಳ ವಿರುದ್ಧ ನಿರ್ದಿಷ್ಟ ಪ್ರಕರಣಗಳು ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು.  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಆಸ್ಪತ್ರೆಗಳಿಗೆ ಸೂಚನೆ ನೀಡಬೇಕು ಎಂದು ತಾಕೀತು ಮಾಡಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now