Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚೌಡಗೊಂಡನಹಳ್ಳಿಗೆ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಕ್ರಮ : ಶಾಸಕ ಎಂ.ಚಂದ್ರಪ್ಪ ಹೇಳಿಕೆ

Facebook
Twitter
Telegram
WhatsApp

ಚಿತ್ರದುರ್ಗ, (ಮಾರ್ಚ್.19) : ಚೌಡಗೊಂಡನಹಳ್ಳಿ ಗ್ರಾಮಕ್ಕೆ ಅಗತ್ಯವಾಗಿ ಬೇಕಾದ ಎರಡು ಶಾಲಾಕೊಠಡಿಗಳು ಹಾಗೂ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ತಕ್ಷಣವೇ ಕ್ರಮಕೈಗೊಳ್ಳಲಾಗುವುದು ಎಂದು ಹೊಳಲ್ಕೆರೆ ಶಾಸಕರು ಹಾಗೂ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಎಂ.ಚಂದ್ರಪ್ಪ ಭರವಸೆ ನೀಡಿದರು.

ಜಿಲ್ಲಾಡಳಿತ, ಹೊಳಲ್ಕೆರೆ ತಾಲ್ಲೂಕು ಆಡಳಿತ, ಜಿಲ್ಲಾಮಟ್ಟದ ಅಧಿಕಾರಿಗಳು, ತಾಲ್ಲೂಕುಮಟ್ಟದ ಅಧಿಕಾರಿಗಳು ಹಾಗೂ ಕಂದಾಯ ಅಧಿಕಾರಿಗಳು ಶನಿವಾರ ಹೊಳಲ್ಕೆರೆ ತಾಲ್ಲೂಕಿನ ತೇಕಲವಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೌಡಗೊಂಡನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಜನರ ಮನೆ ಬಾಗಿಲಿಗೆ ನೇರವಾಗಿ ಸೌಲಭ್ಯವನ್ನು ನೀಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ. ಅಧಿಕಾರಿಗಳು ಜನರ ಮನೆ ಬಾಗಿಲಿಗೆ ಹೋಗಿ ಜನರ ಕಷ್ಟಗಳನ್ನು ಆಲಿಸಲು ಸಹಕಾರಿಯಾಗಿದೆ.

ಚೌಡಗೊಂಡನಹಳ್ಳಿ ಗ್ರಾಮಕ್ಕೆ ಅಗತ್ಯವಾಗಿ ಬೇಕಾದ ಎಲ್ಲ ಮೂಲಭೂತ ಸೌಲಭ್ಯಗಳ ಕಲ್ಪಿಸಲು ಅಧಿಕಾರಿಗಳು ಒಟ್ಟಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಹೇಳಿದರು.

ಜಿಲ್ಲೆಯ ಪ್ರತಿಯೊಂದು ಕುಗ್ರಾಮಗಳಿಗೂ ಸಹ ಅಧಿಕಾರಿಗಳು ಭೇಟಿ ನೀಡಿ ಜನರ ಸಮಸ್ಯೆ ಪರಿಹರಿಸುವುದರ ಮೂಲಕ ಸರ್ಕಾರಿ ಕಚೇರಿಗಳಿಗೆ ಜನರನ್ನು ಅಲೆದಾಡುವುದನ್ನು ತಪ್ಪಿಸಿ, ಸರ್ಕಾರಿ ಯೋಜನೆಗಳು ಜನರಿಗೆ ತಲುಪಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮಾತನಾಡಿ, ಜಿಲ್ಲಾಧಿಕಾರಿಗಳ ನಡೆ ಹಳ್ಳ್ಳಿ ಕಡೆ ಕಾರ್ಯಕ್ರಮದ ಚಿಂತನೆ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರ ಆಶಯವಾಗಿದೆ. ಜನರು ಕಚೇರಿಯಿಂದ ಕಚೇರಿಗೆ ಅಲೆದಾಡಬಾರದು. ತಮ್ಮ ಮನೆ ಬಾಗಿಲಿಗೆ ತಮಗೆ ಬೇಕಾಗಿರುವ ಸೌಲಭ್ಯಗಳನ್ನು  ತಲುಪಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು.

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಅಂಗವಾಗಿ ಪೌತಿಖಾತೆಗೆ ಸಂಬಂಧಿಸಿದ 4 ಅರ್ಜಿಗಳು, ಸಾಗುವಳಿ ಚೀಟಿ ಕೋರಿ 2 ಅರ್ಜಿ, ಪಿಂಚಣಿ ಕೋರಿ 1 ಅರ್ಜಿ ಹಾಗೂ ಪಹಣಿ ತಿದ್ದುಪಡಿಗಾಗಿ 2 ಅರ್ಜಿಗಳು ಸಲ್ಲಿಕೆಯಾಗಿವೆ. ಗ್ರಾಮಕ್ಕೆ ಅಗತ್ಯವಾಗಿ ಬೇಕಾಗಿರುವ ಸೌಲಭ್ಯಗಳು ಕುರಿತು ಅರ್ಜಿ ನೀಡಿದರೆ ಸೌಲಭ್ಯ ಒದಗಿಸಲು ಕ್ರಮವಹಿಸಲಾಗುವುದು ಎಂದು ಹೇಳಿದರು.

ಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿ ಇಲ್ಲದೇ ಇರುವುದು ಗಮನಕ್ಕೆ ಬಂದಿದ್ದು, ನ್ಯಾಯಬೆಲೆ ಅಂಗಡಿ ಸ್ಥಾಪನೆಗೆ ಆಹಾರ ಇಲಾಖೆ ಜಂಟಿನಿರ್ದೇಶಕರೊಂದಿಗೆ ಚರ್ಚಿಸಿ ಮಾನದಂಡ ಪ್ರಕಾರ ಅರ್ಹತೆ ಹೊಂದಿದ್ದರೆ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅನುಮತಿ ನೀಡಲು ಅಗತ್ಯಕ್ರಮವಹಿಸಲಾಗುವುದು. ಒಂದು ವೇಳೆ ಮಾನದಂಡಗಳ ಪ್ರಕಾರ ನ್ಯಾಯಬೆಲೆ ಅಂಗಡಿ ಮಂಜೂರಾತಿ ಸಾಧ್ಯವಾಗದಿದ್ದರೆ ತಿಂಗಳಿಗೊಮ್ಮೆ ಈ ಗ್ರಾಮದಲ್ಲಿಯೇ ಬಂದು ಪಡಿತರ ವಿತರಣೆಗೆ ಕ್ರಮವಹಿಸಲಾಗುವುದು ಎಂದರು.

ಹೆಚ್.ಡಿ.ಪುರದಲ್ಲಿ ಸರ್ಕಾರಿ ಜಾಗ ಹೊಂದಿದ್ದರೆ ಆ ಸರ್ಕಾರಿ ಜಾಗವನ್ನು ಅಗ್ನಿಶಾಮಕ ಠಾಣೆಗೆ ಸ್ಥಳ ಗುರುತಿಸಿ ಪ್ರಸ್ತಾವನೆ ಸಲ್ಲಿಸಿದರೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಗ್ರಾಮ ವಾಸ್ತವ್ಯದ ಅಂಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಗುತ್ತಿದ್ದು, ಸ್ತ್ರೀತಜ್ಞರು ತಪಾಸಣೆಯಲ್ಲಿ ಭಾಗವಹಿಸಿದ್ದು, ಮಹಿಳೆಯರು ಇದರ ಸದುಪಯೋಗ ಪಡೆಯಬೇಕು ಎಂದು ಮನವಿ ಮಾಡಿದರು.

ತಹಶೀಲ್ದಾರ್ ರಮೇಶಾಚಾರಿ ಮಾತನಾಡಿ, ಎಲ್ಲ ಇಲಾಖೆಯ ಸೇವೆಗಳನ್ನು ನಿಮ್ಮಗಳ ಮನೆ ಬಾಗಿಲಿಗೆ ಬಂದು ಮನವಿ ಪಡೆದು ಅವುಗಳನ್ನು ಕಾನೂನಿನ ಪ್ರಕಾರ ಖುದ್ದಾಗಿ ನಿಮ್ಮಗಳ ಸಮಸ್ಯೆ ಬಗೆಹರಿಸುವುದು ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಉದ್ದೇಶವಾಗಿದೆ. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸುಮಾರು 11 ಅರ್ಜಿಗಳು ಬಂದಿದ್ದು, ಅವುಗಳನ್ನು ಇತ್ಯರ್ಥಗೊಳಿಸಲು ಕ್ರಮವಹಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ತೇಕಲವಟ್ಟಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಗದೀಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಡಿ.ಕೆ.ಶಿವಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ವೆಂಕಟೇಶಯ್ಯ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಎಡಿಎಲ್‍ಆರ್ ಸುಮಾನಾಯ್ಕ್, ಕ್ಷೇತ್ರ ಶಿಕ್ಷಣಾಧಿಕಾರಿ ತಿಪ್ಪೇಸ್ವಾಮಿ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಡಿಸೆಂಬರ್ 01 ರಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

  ಚಿತ್ರದುರ್ಗ. ನ.22: ಪ್ರಸಕ್ತ ಮುಂಗಾರು ಹಂಗಾಮಿನ ರಾಗಿ ಬೆಳೆಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಕಾರ್ಯ ಪ್ರಾರಂಭಿಸಲಾಗುವುದು. ಡಿ.31 ರವರೆಗೆ ನೋಂದಣಿ ನಡೆಯಲಿದೆ. ಪ್ರತಿ ಕ್ವಿಂಟಾಲ್

ಸತತ ಏರಿಕೆಯತ್ತ ಸಾಗುತ್ತಿದೆ ಚಿನ್ನದ ಬೆಲೆ : ಇಂದಿನ ದರ ಹೀಗಿದೆ..!

ಚಿನ್ನದ ಬೆಲೆ ಇಳಿಕೆಯಾಯ್ತು ಎಂದು ಖುಷಿ ಪಡುತ್ತಿರುವಾಗಲೇ ಇದೇನಿದು ಒಂದೇ ಸಮನೇ ಏರುತ್ತಲೇ ಇದೆ. ಅದರಲ್ಲೂ 70-80 ರೂಪಾಯಿ ಏರುತ್ತಿದೆ. ಇಂದು ಕೂಡ ಚಿನ್ನದ ದರ ಏರಿಕೆಯಾಗಿದ್ದು, 70 ರೂಪಾಯಿ ಗ್ರಾಂಗೆ ಜಾಸ್ತಿಯಾಗಿದೆ. ಈ

ಚಿತ್ರದುರ್ಗ | ಯೋಗೀಶ್ ಸಹ್ಯಾದ್ರಿ ಬಿಜೆಪಿ ಸೇರ್ಪಡೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ನ. 22 : ಉಪನ್ಯಾಸಕರು ಹಾಗೂ ಸಹ್ಯಾದ್ರಿ ಇಂಗ್ಲಿಷ್ ಅಕಾಡೆಮಿ, ಅಧ್ಯಕ್ಷರಾದ ಯೋಗೀಶ್ ಸಹ್ಯಾದ್ರಿಯವರು ಬಿಜೆಪಿ

error: Content is protected !!