ರೈತ ವಿರೋಧಿ ನೀತಿ ಕಾನೂನು ತಿದ್ದುಪಡಿಗೆ ಕ್ರಮ ರೈತರ ಮನೆ, ಆಸ್ತಿಪಾಸ್ತಿಗಳ ಜಫ್ತಿ ನಿಷೇಧ: ಸಿಎಂ ಬೊಮ್ಮಾಯಿ

ಚಿತ್ರದುರ್ಗ,( ಸೆ.24) :  ರೈತ ವಿರೋಧಿ ನೀತಿಗಳಿಗೆ ಕಾನೂನು ತಿದ್ದುಪಡಿ ಮಾಡುವುದರ ಮೂಲಕ ರೈತರಿಗೆ ಸಾಲ ತೀರಿಸುವ ಅವಕಾಶ ಮಾಡಿಕೊಟ್ಟು, ರೈತರ ಮನೆ, ಆಸ್ತಿ-ಪಾಸ್ತಿ ಜಪ್ತಿ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆ ಗ್ರಾಮದಲ್ಲಿ ಶನಿವಾರ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳ ಮೂವತ್ತನೆಯ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ರೈತರ ಸಂಕಷ್ಟದ ಸಂದರ್ಭದಲ್ಲಿ ಸಾಲಕ್ಕಾಗಿ ಹಣಕಾಸಿನ ಸಂಸ್ಥೆಗಳಾದ ಬ್ಯಾಂಕುಗಳು ರೈತರ ಮನೆ, ಜಮೀನು, ಆಸ್ತಿಪಾಸ್ತಿ ಜಪ್ತಿ ಮಾಡುವ ಕಾರ್ಯಕ್ಕೆ ಅಂತ್ಯ ಹಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದರು.

ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆ ಆಗುವ ಅಂತಿಮ ಘಟ್ಟದಲ್ಲಿದೆ. ಕೇಂದ್ರ ಸಚಿವ ಸಂಪುಟದ ಅನುಮೋದನೆ ದೊರೆತ ತಕ್ಷಣವೇ ರೂ.14 ಸಾವಿರ ಕೋಟಿ ರೂಪಾಯಿ ಕೇಂದ್ರ ಸರ್ಕಾರದ ನೆರವು ಸಿಗಲಿದೆ. ಈ ಯೋಜನೆ ಪೂರ್ಣಗೊಳ್ಳಲು ದೊಡ್ಡ ಹಣಕಾಸಿನ ಶಕ್ತಿ ಬರಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ರಾಜ್ಯದಲ್ಲಿ 14 ಲಕ್ಷ ರೈತರ ಮಕ್ಕಳಿಗೆ ಮುಖ್ಯಮಂತ್ರಿ ವಿದ್ಯಾನಿಧಿ ಯೋಜನೆ ಜಾರಿಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಕೃಷಿ ಕಾರ್ಮಿಕರು, ನೇಕಾರರು, ಮೀನುಗಾರರು, ಟ್ಯಾಕ್ಸಿ, ಆಟೋ ಚಾಲಕರ ಮಕ್ಕಳು ಸೇರಿದಂತೆ ದುಡಿಯುವ ವರ್ಗದ ಮಕ್ಕಳಿಗೆ ರೈತವಿದ್ಯಾನಿಧಿ ಯೋಜನೆ ವಿಸ್ತರಿಸಲಾಗುವುದು. ಯಾವುದೇ ಕಾರಣಕ್ಕೂ ಹಣಕಾಸಿನ ಅಡಚಣೆಯಿಂದ ದುಡಿಯುವ ವರ್ಗದ ಮಕ್ಕಳ ವಿದ್ಯಾಭ್ಯಾಸ ಮೊಟಕಾಗಬಾರದು ಎಂದರು.

ಲಿಂಗೈಕ್ಯ ಜಗದ್ಗುರುಗಳ ಜೀವನ ಅವರ ಬದುಕಿನಲ್ಲಿ ನಡೆದ ಘಟನೆಗಳು ಅವರಿಗೆ ಎದುರಾದ ಸವಾಲುಗಳು, ದುಃಖ ದುಮ್ಮಾನಗಳು ಹಲವಾರು ಇದ್ದರೂ ಆದರೆ ಅವೆಲ್ಲವನ್ನೂ ಲೆಕ್ಕಿಸದೇ ಅವುಗಳನ್ನು ಮೆಟ್ಟಿಲು ಮಾಡಿಕೊಂಡು ಜನರ ದುಃಖ ದುಮ್ಮಾನಕ್ಕೆ ಹೆಚ್ಚು ಮಹತ್ವ ನೀಡಿದವರು. ಸಮಾಜದಲ್ಲಿ ಅನಿಷ್ಠ ಪದ್ಧತಿ, ಮೂಢನಂಬಿಕೆಗಳನ್ನು ದೂರ ಮಾಡಲು ಹೋರಾಟ ಮಾಡಿದ ಅವರು, ಇಡೀ ಸಮಾಜವನ್ನು ಉದ್ಧಾರ ಮಾಡಿದ ಅತ್ಯಂತ ಶ್ರೇಷ್ಟ ಗುರುಗಳಾಗಿದ್ದವರು. ಅವರೇ ಬದುಕೇ ನಮಗೆ ಮಾರ್ಗದರ್ಶನವಾಗಿದೆ ಎಂದರು.

ವೈಚಾರಿಕೆಯಲ್ಲಿ ಯಾರಿಗೂ ಕಡಿಮೆ ಇಲ್ಲದೇ ಅಂದಿನ ಸಂದರ್ಭದಲ್ಲಿ ಶ್ರೇಷ್ಟ ಗುರುಗಳಾಗಿ ಇಂದಿಗೂ ತಮ್ಮ ಹೆಜ್ಜೆ ಗುರುತು ಬಿಟ್ಟು ಹೋಗಿದ್ದಾರೆ. ಅರಮನೆಗೆ ಮತ್ತು ಗುರುಮನೆಗೆ ಸಂಬಂಧವಿದೆ. ಸಮಾಜ ಗುರುವಿನತ್ತ, ಸರ್ಕಾರ ಸಮಾಜದತ್ತ ನೋಡುತ್ತದೆ. ಗುರುಗಳ ಮಾರ್ಗದರ್ಶನ ಸದ್ಭಕ್ತರಿಗೆ ಹಾಗೂ ಸರ್ಕಾರಕ್ಕೆ ಯಾವ ರೀತಿ ಇರುತ್ತದೆಯೋ ಅದರ ಮೇಲೆ ಆಡಳಿತ ಸೂತ್ರ ನಡೆಯುತ್ತದೆ.  ಜನರ ಮನಸ್ಸು ಗುರುಗಳಿಗೆ ತಲೆಬಾಗುತ್ತದೆ. ಹೀಗಾಗಿ ಗುರುಗಳ ಆಡುವ ಪ್ರತಿಯೊಂದು ಮಾತು ಸಮಾಜದ ಮೇಲೆ ದೊಡ್ಡ ಪ್ರಭಾವ ಬೀರಲಿದೆ. ಆ ಮಾತು ಸಮಾಜದ ಧ್ವನಿಯಾಗುತ್ತದೆ. ಹೀಗಾಗಿ ಸಮಾಜದ ಧ್ವನಿ ಸರ್ಕಾರ ಕೇಳುತ್ತದೆ ಎಂದು ಹೇಳಿದರು.

ಇಂದಿನ ಜಗದ್ಗುರುಗಳು ಸಮಾಜಕ್ಕೆ ಭಕ್ತಾಧಿಗಳಿಗೆ ನ್ಯಾಯ ಒದಗಿಸುವ ಗುರುತರವಾದ ಜವಾಬ್ದಾರಿಯನ್ನು ತೆಗೆದುಕೊಂಡಿದ್ದಾರೆ. ಭಕ್ತಾಧಿಗಳು ರೈತಾಪಿ ವರ್ಗ ಎಂಬುದನ್ನು ಮನಗಂಡು ರೈತರ ಬೆವರಿಗೆ ಬೆಲೆ, ಗೌರವ ಕೊಡುವ ಕೆಲಸವನ್ನು ಶ್ರೀಗಳು ಮಾಡುತ್ತಿದ್ದಾರೆ. ಗುರುಗಳ ಇಚ್ಛಾಶಕ್ತಿ ಮತ್ತು ಆದಮ್ಯವಾದ ಶಕ್ತಿಗೆ ಸರ್ಕಾರದ ಕ್ರೀಯಾಶಕ್ತಿಯು ನೀರಾವರಿ ಯೋಜನೆಗಳನ್ನು ಕಾರ್ಯಗತಗೊಳಿಸಲು ಸಹಕಾರಿಯಾಗಿದೆ ಎಂದರು.

ನಿಕಟ ಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ಅನ್ನದಾಸೋಹ ಹಾಗೂ ಜ್ಞಾನ ದಾಸೋಹಕ್ಕೆ ಪ್ರಾಮುಖ್ಯತೆ ನೀಡಿದ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳಿಗೆ ಶ್ರದ್ಧಾಂಜಲಿ ಸಮರ್ಪಿಸುತ್ತೇನೆ. ರಾಜ್ಯಾದ್ಯಂತ ಉತ್ತಮ ಮೆಳೆಯಾಗಿದೆ. ಕೆರೆ ಕಟ್ಟೆ ಜಲಾಶಯಗಳು ತುಂಬಿವೆ. ಕೆಲವು ಭಾಗದಲ್ಲಿ ಅತಿವೃಷ್ಠಿಯಿಂದ ಬೆಳೆ ನಾಶವಾಗಿದೆ. ಬೆಳೆ ನಾಶಕ್ಕೆ ಸೂಕ್ತ ಪರಿಹಾರ ನೀಡುವ ಭರವಸೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದಾರೆ. ದೇಶಾದ್ಯಂತ ರೈತರು ಕಟ್ಟಿದ 26 ಸಾವಿರ ಕೋಟಿ ಬೆಳೆ ವಿಮೆಗೆ 1ಲಕ್ಷ ಕೋಟಿ ಪರಿಹಾರ ನೀಡಲಾಗಿದೆ. ಸರ್ಕಾರ ನೀರಾವರಿಗೆ ಆದ್ಯತೆ ನೀಡಿದೆ.

ಪೂಜ್ಯರ ಅಪೇಕ್ಷೆಯಂತೆ ಭರಮಸಾಗರ ಏತ ನೀರಾವರಿಗೆ 565 ಕೋಟಿ ರೂಪಾಯಿ, ಹಾಗೂ ಜಗಳೂರು ಏತ ನೀರಾವರಿ ಯೋಜನೆಗೆ 725 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ರೈತರು ಸ್ವಾಭಿಮಾನದಿಂದ ಬದಕಲು ಅವಕಾಶ ಕಲ್ಲಿಸಲಾಗಿದೆ. ದೇಶದಲ್ಲಿ ಮೊದಲ ಬಾರಿಗೆ ಭಾಗ್ಯ ಲಕ್ಷ್ಮೀ ಯೋಜನೆ ಜಾರಿಗೆ ತಂದಿದ್ದೇನೆ. ಹಾಲು ಉತ್ಪಾದಕ ರೈತರಿಗೆ ಹಣಕಾಸಿನ ನೆರವು ನೀಡಲಾಗಿದೆ. ರೈತರ ಜ್ವಲಂತ ಸಮಸ್ಯೆಗಳಿಗೆ ಒಂದು ಕ್ಷಣ ತಡಮಾಡದೆ ಪರಿಹಾರ ಒದಗಿಸಲಾಗಿದೆ. ರೈತರ ಬೆಳೆಗೆ ವೈಜ್ಞಾನಿಕ ಬೆಲೆ ನೀಡಲು ಪ್ರಯತ್ನಿಸಲಾಗುತ್ತಿದೆ. ರಾಜ್ಯದ ರೈತ ಸಮುದಾಯಕ್ಕೆ ಸಲವತ್ತು ನೀಡಲಾಗಿದೆ. ಹಿಂದಿನ ಗುರುಗಳು ಶಿಕಾರಿಪುರದ ಶಿವನಪಾದಕ್ಕೆ ದರ್ಶನ ಬರುತ್ತಿದ್ದರು. ಆಧುನಿಕ ಜಗತ್ತಿನಲ್ಲಿ ಭಾರತ ಮುಂದುವರಿಯಲು ಎಲ್ಲಾ ಜಗದ್ಗುರಗಳು ಬೋಧಿಸಿದ ಸಂಸ್ಕøತಿ ಕಾರಣ. ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮೀಜಿಗಳು 1947ರಲ್ಲಿ ಸಿರಿಗೆರೆಯಲ್ಲಿ ಹೈಸ್ಕೂಲ್ ಸ್ಥಾಪನೆ ಮಾಡಿದ್ದಾರೆ. ಭಾವ್ಯಕತೆ ಹಾಗೂ ಮಾನವೀಯತೆ ಭೋಧಿಸಿದ್ದಾರೆ. ಆಸ್ಪತ್ರೆ ನಿರ್ಮಾಣ ಮಾಡಿದ್ದಾರೆ . ರೈತರು ಸ್ವಾವಲಂಭಿಯಾಗಲು ಅವಕಾಶ ಕಲ್ಪಿಸಿದ್ದಾರೆ. ಶಿಕ್ಷಣ ಹಾಗೂ ಆಶ್ರಯ ನೀಡುವಲ್ಲಿ ಮಠಗಳ ಕೊಡುಗೆ ಅಪಾರ. ಮುಖ್ಯಮಂತ್ರಿಯಾಗಿ ಇದ್ದ ಸಮಯದಲ್ಲಿ ವೀರಶೈವ ಅಭಿವೃದ್ಧಿ ಮಂಡಳಿ ಸ್ಥಾಪಿಸಿ 500 ಕೋಟಿ ಅನುದಾನ ನೀಡಿದ್ದೆ. ಅತಿವೃಷ್ಠಿ ಹಾಗೂ ಕೊವಿಡ್ ನಡುವೆಯು ನೀರಾವರಿ ಯೋಜನೆ ಹಣ ಹಣ ಮೀಸಲಿರಿಸಿದೆ.  ಸರ್ಕಾರ ರೈತರ ಸಾಲಕ್ಕೆ ಆಸ್ತಿ ಮನೆಗಳನ್ನು ಜಫ್ತಿಗೆ ನಿಷೇಧಕ್ಕೆ ಕಾನೂನು ತರಲು ಪ್ರಯತ್ನಿಸಲಾಗುವುದು ಎಂದರು.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಧುಸ್ವಾಮಿ ಮಾತನಾಡಿ, ಧರ್ಮ ಹಾಗೂ ಕರ್ಮ ಸಿದ್ಧಾಂತಗಳಲ್ಲಿ ಹೆಚ್ಚಿನ ವ್ಯತ್ಯಾಸ ಇಲ್ಲದೆ ಇರುವ ಧರ್ಮ ಬಸವ ಧರ್ಮ. ಕಾಯಕ ನಿμÉ್ಠಯ ಮೂಲಕ ಶಿವಪಥ ಕಾಣುವಂತೆ ಬೋಧಿಸಲಾಗುತ್ತದೆ. ಜನರು ಸ್ವಾಭಿಮಾನದಿಂದ ಬದುಕಬೇಕು. ಇದಕ್ಕೆ ವಿದ್ಯೆ, ಶಿಕ್ಷಣ ಬೇಕು. ಅರಿವು ಮೂಡಿಸುವ ಗುರು ಬೇಕು. ಈ ರೀತಿ ಅರಿವು ಮೂಡಿಸುವ ಗುರುಗಳಾಗಿದ್ದವರು ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ. ಸಮಾಜ ಸಮಸ್ಯೆ ಬಗೆಹರಿಸುವಲ್ಲಿ ಹಾಗೂ ಭಕ್ತರ ಅಭಿವೃದ್ಧಿಯಲ್ಲಿ ಸ್ವಾಮೀಜಿಗಳ ಶ್ರಮ ದೊಡ್ಡದು. ರಾಜ್ಯಕ್ಕೆ ವೀರಶೈವ ಮಠಗಳ ಕೊಡುಗೆ ದೊಡ್ಡದು. ರಾಜ್ಯದಲ್ಲಿ ಶೈಕ್ಷಣಿಕ ಪ್ರಗತಿಯಲ್ಲಿ ಮಠಗಳು ಸಾಕಷ್ಟು ಕೆಲಸ ಮಾಡಿವೆ. ಕಡು ಬಡತನದಲ್ಲಿ ಇರುವ ಜನರಿಗೆ ಮಠಗಳು ಸಹಾಯ ನೀಡಿವೆ. ಪ್ರಸ್ತುತ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಹಿಂದಿನ ಶ್ರೀಗಳ ಹಾದಿಯಲ್ಲಿ ನಡೆದಿದ್ದಾರೆ. ಗ್ರಾಮೀಣ ಜನರ ಬದುಕಿಗೆ ಶಕ್ತಿ ತುಂಬಿದ್ದಾರೆ. ನೀರಾವರಿಗೆ ಹೆಚ್ಚಿನ ಆದ್ಯತೆ ನೀಡದ್ದಾರೆ ಎಂದರು.

ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ತಕ್ಷಣ ನೀರಾವರಿಗೆ ಒಂದು ಲಕ್ಷ ಕೋಟಿ ಅನುದಾನ ಮೀಸಲಿಡುವ ಸಂಕಲ್ಪ ಮಾಡಿದ್ದರು. ಅತಿವೃಷ್ಠಿ ಹಾಗೂ ಕೋವಿಡ್‍ನಿಂದ ಹಣಕಾಸು ಸ್ಥಿತಿ ಬಿಗಡಾಯಿಸಿತು. ಆದರೂ ಸಣ್ಣ ನೀರಾವರಿ ಇಲಾಖೆಗೆ ಕೋಟ್ಯಾಂತರ ರೂಪಾಯಿ ಹಣ ನೀಡಿದರು. ಕೋವಿಡ್ ಸಂದರ್ಭದಲ್ಲಿ ಸರ್ಕಾರವನ್ನು ಯಶಸ್ವಿಯಾಗಿ ಬಸವರಾಜ ಬೊಮ್ಮಾಯಿ ನಡೆಸಿದ್ದಾರೆ. ಸರ್ಕಾರ ಜಲಜೀವನ್ ಮಿಷನ್‍ಗೆ ರೂ.9 ಸಾವಿರ ಕೋಟಿ ಹಣ ನೀಡಲಾಗಿದೆ. ಮನೆ ಮನೆಗಳಿಗೆ ನಳದ ಸಂಪರ್ಕ ಕಲ್ಪಿಸಲಾಗುವುದು. ಸರ್ಕಾರಕ್ಕೆ ಮಠಗಳ ಸಹಕಾರ ಇರಬೇಕು. ಸ್ವಾಮೀಜಿಯವರ ಲೇಖನ ಸಂಗ್ರಹ ಭ್ರಷ್ಟಾಚಾರಮೊದಲ ಹೆಜ್ಜೆ ಕೃತಿ ಬಿಡುಗಡೆ ಮಾಡಿದ್ದೇನೆ. ಭ್ರಷ್ಟಾಚಾರದ ಮೂಲ ನಮ್ಮೆಲ್ಲರ ಆಲೋಚನೆಯಲ್ಲಿದೆ. ವ್ಯವಸ್ಥೆ ರಾಜಕಾರಣಿಗಳನ್ನು ಭ್ರಷ್ಟರನ್ನಾಗಿ ಮಾಡುತ್ತದೆ. ಜನರು ಮನಸ್ಸು ಮಾಡಿದರೆ ಭ್ರಷ್ಟಾಚಾರ ಕಡಿಮೆಯಾಗುತ್ತದೆ ಎಂದರು.
ಸಾಧು ಸದ್ಧರ್ಮ ವೀರಶೈವ ಸಂಘ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ಗುರುವಂದನೆ ಸಲ್ಲಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ತರಳಬಾಳು ಜಗದ್ಗುರು ಶ್ರೀ 1108 ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಇದೇ ಸಂದರ್ಭದಲ್ಲಿ ಶಿವಾಚಾರ್ಯ ಸ್ವಾಮೀಜಿಗಳ ಲೇಖನಗಳ ಸಂಗ್ರಹಗಳಾದ ಭ್ರಷ್ಟಾಚಾರದ ಮೊದಲ ಹೆಜ್ಜೆ, ಕಪ್ಪೆಚಿಪ್ಪು v/s ಮತ್ತುರತ್ನ, ಹಣದ ಝಣತ್ಕಾರ ಪ್ರೀತಿಗೆ ಸಂಚಕಾರ ಕೃತಿಗಳನ್ನು ಲೋಕಾರ್ಪಣೆ ಮಾಡಲಾಯಿತು. ಬೆಂಗಳೂರಿನ ಗಾನಗಂಗಾ ಸಂಗೀತ ವಿದ್ಯಾಲಯದ ಶರಣೆ ಗೀತಾ ಬತ್ತದ್ ವಚನ ಗೀತೆಗಳನ್ನು ಪ್ರಸ್ತುತ ಪಡಿಸಿದರು. ಬೇಲೂರಿನ ಶರಣೆ ಪೃಥ್ವಿ, ಹೊನ್ನಾಳಿಯ ಐಶ್ವರ್ಯ ಭರತನಾಟ್ಯ ಪ್ರದರ್ಶಿಸಿದರು.

ಸಮಾರಂಭದಲ್ಲಿ ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕರು ಹಾಗೂ ಕೆ.ಎಸ್.ಆರ್.ಟಿ.ಸಿ ನಿಗಮದ ಅಧ್ಯಕ್ಷ ಎಂ.ಚಂದ್ರಪ್ಪ, ಮಾಜಿ ಸಚಿವ ಹಾಗೂ ಶಾಸಕ ಎಂ.ಬಿ.ಪಾಟೀಲ್, ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ, ಎಸ್.ಎ.ರವೀಂದ್ರನಾಥ್, ಬೆಳ್ಳಿ ಪ್ರಕಾಶ್, ಮಾಡಾಳು ವಿರೂಪಾಕ್ಷಪ್ಪ, ಎಸ್.ವಿ.ರಾಮಚಂದ್ರಪ್ಪ, ಲಿಡ್ಕರ್ ಅಧ್ಯಕ್ಷ ಪ್ರೊ.ಲಿಂಗಣ್ಣ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ, ಜಿ.ಪಂ.ಸಿಇಒ ಡಾ.ಕೆ.ನಂದಿನಿದೇವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಸೇರಿದಂತೆ ಮತ್ತಿತರರು ಇದ್ದರು.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

51 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago