Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೋಬಳಿಗೆ ಒಂದು ಗೋಶಾಲೆ ಪ್ರಾರಂಭಕ್ಕೆ ಕ್ರಮ : ಶಾಸಕ ಟಿ.ರಘುಮೂರ್ತಿ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಜನವರಿ.06 : ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ನಿರಂತರವಾಗಿ ಜನಸಂಪರ್ಕ ಸಭೆಗಳನ್ನು ನಡೆಸಲಾಗುತ್ತಿದ್ದು, ಈಗಾಗಲೇ 26 ಜನಸಂಪರ್ಕ ಸಭೆಗಳನ್ನು ಚಳ್ಳಕೆರೆ ಕ್ಷೇತ್ರದಾದ್ಯಂತ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ಕರೆಸಿ, ಜನರ ಸಮಸ್ಯೆ ಬಗೆಹರಿಸಲಾಗಿದೆ ಎಂದು ತಿಳಿಸಿದ ಅವರು, ಜನತಾ ದರ್ಶನದಲ್ಲಿ ಸಲ್ಲಿಕೆಯಾದ ಪ್ರತಿಯೊಂದು ಅರ್ಜಿಗಳಿಗೆ ಉತ್ತರ ಕೊಡುವುದರ ಜೊತೆಗೆ ತಮ್ಮ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಲಾಗುತ್ತಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.

ನಗರದ ಶ್ರೀ ಗುರು ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಜನತಾದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಚಳ್ಳಕೆರೆ ಹಾಗೂ ಮೊಳಕಾಲ್ಮುರು ತಾಲ್ಲೂಕುಗಳಲ್ಲಿ ವಿಶೇಷವಾಗಿ ಬರಗಾಲದ ಸಂದರ್ಭದಲ್ಲಿ  ಈ ಮೊದಲು ಪಂಚಾಯಿತಿಗೊಂದರಂತೆ ಗೋಶಾಲೆ ತೆರೆಯಲಾಗಿತ್ತು. ಪ್ರಸಕ್ತ ಸಾಲಿನಲ್ಲಿ ಬರಗಾಲದ ಹಿನ್ನಲೆಯಲ್ಲಿ ಹೋಬಳಿಗೊಂದರಂತೆ ಗೋಶಾಲೆ ಸ್ಥಾಪನೆಗೆ ಈಗಾಗಲೇ ಪ್ರಸ್ತಾವ ಸಲ್ಲಿಸಲಾಗಿದ್ದು, ಸರ್ಕಾರ ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿದ್ದು, ಹೋಬಳಿಗೆ ಒಂದರಂತೆ ಗೋಶಾಲೆ ಪ್ರಾರಂಭ ಮಾಡಲು ಕ್ರಮವಹಿಸಲಾಗಿದೆ. ಜಿಲ್ಲೆಯ 1891 ದೇವರ ಎತ್ತುಗಳ ಮೇವಿಗೆ ಪ್ರತಿ ತಿಂಗಳೂ ರೂ.22 ಲಕ್ಷ ಬೇಕಾಗಿದ್ದು, ಅದಕ್ಕೆ ಸಂಬಂಧಪಟ್ಟಂತೆ ಈಗಾಗಲೆ ರೂ.10 ಲಕ್ಷ ಅನುದಾನವನ್ನು ಪಶುಸಂಗೋಪನೆ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮಂಜೂರಾತಿ ನೀಡಲಾಗಿದೆ ಎಂದು ತಿಳಿಸಿದರು.

ಕುಡಿಯುವ ನೀರು ಸಮಸ್ಯೆ ತಲೆದೋರಿದ ಕಡೆಗಳಲ್ಲಿ ತಕ್ಷಣವೇ ಸಮರ್ಪಕವಾಗಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಕ್ರಮವಹಿಸಲಾಗುತ್ತಿದ್ದು, ಇದರ ಜೊತೆಗೆ ಜಾನುವಾರುಗಳಿಗೆ ಮೇವು, ಜನರಿಗೆ ಉದ್ಯೋಗ ನೀಡಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ನೇತೃತ್ವದಲ್ಲಿ ನಗರಸಭೆಯ ಸರ್ವ ಸದಸ್ಯರು ನಗರಸಭೆ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ದಿವ್ಯಪ್ರಭು ಅವರಿಗೆ ನಗರಸಭೆ ಸಭೆಯನ್ನು ನಡೆಸುವಂತೆ ಮನವಿ ಮಾಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಜೀರ್ಣ, ಮಲಬದ್ಧತೆ ಸಮಸ್ಯೆನ್ನು ಎಂದಿಗೂ ನಿರ್ಲಕ್ಷಿಸಬೇಡಿ : ಇದು ಹೃದಯಕ್ಕೆ ತೊಂದರೆ

ನಮ್ಮ ದೇಹದಲ್ಲಿ ಸಣ್ಣ ಪುಟ್ಟ ಸಮಸ್ಯೆಯಾದರೂ ಕೆಲವೊಂದು ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತದೆ. ಸುಮಾರು ಜನಕ್ಕೆ ಅಜೀರ್ಣ ಹಾಗೂ ಮಲಬದ್ಧತೆಯ ಸಮಸ್ಯೆ ಕಾಡುತ್ತಿರುತ್ತದೆ. ಇದು ಕಾಮನ್ ತಾನೇ ಎಂದು ನಿರ್ಲಕ್ಷ್ಯ ಮಾಡಿದರೆ ಅದರಿಂದ ಮುಂದೆ ಹೃದಯಕ್ಕೆ

ಈ ರಾಶಿಯವರಿಗೆ ಅಡಚಣೆ ಸಮಸ್ಯೆದಿಂದ ಬೇಸತ್ತು ಜೀವನದಲ್ಲಿ ಜಿಗುಪ್ಸೆ

ಈ ರಾಶಿಯವರಿಗೆ ಅಡಚಣೆ ಸಮಸ್ಯೆದಿಂದ ಬೇಸತ್ತು ಜೀವನದಲ್ಲಿ ಜಿಗುಪ್ಸೆ: ಈ ರಾಶಿಯವರಿಗೆ ಒಳ್ಳೆಯ ಸಂಬಂಧ ಮದುವೆಗೆ ಒಲೆಯಲಿದೆ ಶುಕ್ರವಾರರಾಶಿ ಭವಿಷ್ಯ -ನವೆಂಬರ್-22,2024 ಸೂರ್ಯೋದಯ: 06:29, ಸೂರ್ಯಾಸ್ತ : 05:35 ಶಾಲಿವಾಹನ ಶಕೆ -1946 ಸಂವತ್-2080

ಗೋಲ್ಡ್ ರೇಟ್ ಇಂದು ಕೂಡ ಹೆಚ್ಚಳ : ಗ್ರಾಂಗೆ ಎಷ್ಟು ಏರಿಕೆ ಆಯ್ತು..?

ಬೆಂಗಳೂರು: ಚಿನ್ನ ಬೆಳ್ಳಿಯ ಬೆಲೆಯಲ್ಲಿ ಹಾವು ಏಣಿಯ ಆಟ ಕೆಲ ದಿನದಿಂದ ಕಾಣಿಸ್ತಾ ಇದೆ. ಹಾವು ಮೇಲೇರಿದಂತೆ ಚಿನ್ನದ ಬೆಲೆ ಸರಸರನೆ ಏರುತ್ತಲೆ ಇದೆ. ಇಂದು ಕೂಡ ಇಳಿಕೆಯಾಗದೆ ಏರಿಕೆಯತ್ತಲೇ ಮುಖ ಮಾಡಿದೆ. ಹಾಗಾದ್ರೆ

error: Content is protected !!