Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಚೋದನೆ ನೀಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆ : ಎಚ್ಚರಿಕೆ ನೀಡಿದ ಸಿಎಂ

Facebook
Twitter
Telegram
WhatsApp

ವಿಜಯನಗರ: ಸಾಮಾಜಿಕ ಜಾಲತಾಣದಲ್ಲಿ ಧರ್ಮ ನಿಂದನೆ ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಹುಬ್ಬಳ್ಳಿಯಲ್ಲಿ ಕಲ್ಲು ತೂರಾಟ ನಡೆದಿದೆ. ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಇನ್ನು ಮೂರು ದಿನ 144 ಸೆಕ್ಷನ್ ಕೂಡ ಜಾರಿಯಾಗಿದೆ. ಈ ಸಂಬಂಧ ಸಿಎಂ ಬಸವರಾಜ್ ಬೊಮ್ಮಾಯಿ‌ ಅವರು ಮಾತನಾಡಿ, ಯಾರೇ ಆದರೂ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ನಿನ್ನೆ ಕಾನೂನನ್ನು ಕೈಗೆ ತೆಗೆದುಕೊಳ್ಳುವ ಕೆಲಸವಾಗಿದೆ. ಪೊಲೀಸರು ವಾಟ್ಸಾಪ್ ಹರಿಬಿಟ್ಟವರನ್ನು ಅರೆಸ್ಟ್ ಮಾಡಿ, ಕ್ರಮ ತೆಗೆದುಕೊಂಡ ಬಳಿಕವೂ ಪ್ರಚೋದನಕಾರಿಯಾಗಿ ಪೊಲೀಸ್ ಠಾಣೆ ಎದುರು ಬಂದು, ಗಲಾಟೆ ಮಾಡಿ ಪೊಲೀಸರಿಗೂ ಏಟು ಬೀಳುವ ರೀತಿಯಲ್ಲಿ ಹಳೇ ಹುಬ್ಬಳ್ಳಿಯ ವಿವಿಧ ಭಾಗದಲ್ಲಿ ಗಲಾಟೆ ನಡೆದಿದೆ. ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ.

ಇನ್ನು ಒಂದು ವಿಚಾರ ಸ್ಪಷ್ಟವಾಗಿ ಹೇಳುವುದಕ್ಕೆ ಇಷ್ಟಪಡುತ್ತೀನಿ. ಯಾರೇ ಕಾನೂನು ಕ್ರಮ ಕೈಗೊಂಡರು ಕಠಿಣವಾದಂತ ಕ್ರಮ ತೆಗೆದುಕೊಳ್ಳಲು ನಮ್ಮ ಪೊಲೀಸರು ಹಿಂಜರಿಯುವುದಿಲ್ಲ. ಅದು ಯಾರೇ ಇರಲಿ‌. ಯಾರ್ಯಾರು ಇದಕ್ಕೆ ಪ್ರಚೋದನೆ ನೀಡಿದ್ದಾರೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ನಾನು ಎಲ್ಲಾ ಈ ರೀತಿಯ ಸಂಘಟನೆಗಳಿದ್ದಾವೆ, ಅವರಿಗೆಲ್ಲಾ ಕೇಳಿಕೊಳ್ಳುವುದು ಇಷ್ಟೆ. ನೀವೂ ಕಾನೂನನ್ನು ಕೈಗೆ ತೆಗೆದುಕೊಳ್ಳುವ ಕಷ್ಟ ತೆಗೆದುಕೊಳ್ಳಬೇಡಿ. ಇದನ್ನು ಕರ್ನಾಟಕ ರಾಜ್ಯ ಸಹಿಸುವುದಿಲ್ಲ.

ಇದಕ್ಕೆ ಬೇರೆ ಬೇರೆ ರಾಜಕೀಯ ಬಣ್ಣ ಕೊಡುವುದು ಸರಿಯಲ್ಲ. ಒಂದು ಘಟನೆಯನ್ನು ಕಾನೂನಿನ ಸುವ್ಯವಸ್ಥೆ ಘಟನೆಯೆಂದೇ ನೋಡೋಣಾ. ಪೊಲೀಸರು ಈ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

error: Content is protected !!