ವಿಜಯನಗರ: ಸಾಮಾಜಿಕ ಜಾಲತಾಣದಲ್ಲಿ ಧರ್ಮ ನಿಂದನೆ ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಹುಬ್ಬಳ್ಳಿಯಲ್ಲಿ ಕಲ್ಲು ತೂರಾಟ ನಡೆದಿದೆ. ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಇನ್ನು ಮೂರು ದಿನ 144 ಸೆಕ್ಷನ್ ಕೂಡ ಜಾರಿಯಾಗಿದೆ. ಈ ಸಂಬಂಧ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಾತನಾಡಿ, ಯಾರೇ ಆದರೂ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ನಿನ್ನೆ ಕಾನೂನನ್ನು ಕೈಗೆ ತೆಗೆದುಕೊಳ್ಳುವ ಕೆಲಸವಾಗಿದೆ. ಪೊಲೀಸರು ವಾಟ್ಸಾಪ್ ಹರಿಬಿಟ್ಟವರನ್ನು ಅರೆಸ್ಟ್ ಮಾಡಿ, ಕ್ರಮ ತೆಗೆದುಕೊಂಡ ಬಳಿಕವೂ ಪ್ರಚೋದನಕಾರಿಯಾಗಿ ಪೊಲೀಸ್ ಠಾಣೆ ಎದುರು ಬಂದು, ಗಲಾಟೆ ಮಾಡಿ ಪೊಲೀಸರಿಗೂ ಏಟು ಬೀಳುವ ರೀತಿಯಲ್ಲಿ ಹಳೇ ಹುಬ್ಬಳ್ಳಿಯ ವಿವಿಧ ಭಾಗದಲ್ಲಿ ಗಲಾಟೆ ನಡೆದಿದೆ. ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ.
ಇನ್ನು ಒಂದು ವಿಚಾರ ಸ್ಪಷ್ಟವಾಗಿ ಹೇಳುವುದಕ್ಕೆ ಇಷ್ಟಪಡುತ್ತೀನಿ. ಯಾರೇ ಕಾನೂನು ಕ್ರಮ ಕೈಗೊಂಡರು ಕಠಿಣವಾದಂತ ಕ್ರಮ ತೆಗೆದುಕೊಳ್ಳಲು ನಮ್ಮ ಪೊಲೀಸರು ಹಿಂಜರಿಯುವುದಿಲ್ಲ. ಅದು ಯಾರೇ ಇರಲಿ. ಯಾರ್ಯಾರು ಇದಕ್ಕೆ ಪ್ರಚೋದನೆ ನೀಡಿದ್ದಾರೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ನಾನು ಎಲ್ಲಾ ಈ ರೀತಿಯ ಸಂಘಟನೆಗಳಿದ್ದಾವೆ, ಅವರಿಗೆಲ್ಲಾ ಕೇಳಿಕೊಳ್ಳುವುದು ಇಷ್ಟೆ. ನೀವೂ ಕಾನೂನನ್ನು ಕೈಗೆ ತೆಗೆದುಕೊಳ್ಳುವ ಕಷ್ಟ ತೆಗೆದುಕೊಳ್ಳಬೇಡಿ. ಇದನ್ನು ಕರ್ನಾಟಕ ರಾಜ್ಯ ಸಹಿಸುವುದಿಲ್ಲ.
ಇದಕ್ಕೆ ಬೇರೆ ಬೇರೆ ರಾಜಕೀಯ ಬಣ್ಣ ಕೊಡುವುದು ಸರಿಯಲ್ಲ. ಒಂದು ಘಟನೆಯನ್ನು ಕಾನೂನಿನ ಸುವ್ಯವಸ್ಥೆ ಘಟನೆಯೆಂದೇ ನೋಡೋಣಾ. ಪೊಲೀಸರು ಈ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…