ಮೈಸೂರು: ಇದು ಸರ್ಕಾರ ಪ್ರಾಯೋಜಿತ ಕೃತ್ಯ, ಗುಪ್ತಚರ ಇಲಾಖೆ ಏನ್ಮಾಡ್ತಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಅವರ ಕಾರಿನ ಮೇಲೆ ಕೊಡಗಿನಲ್ಲಿ ಪ್ರತಿಭಟನೆ ವೇಳೆ ಮೊಟ್ಟೆ ಎಸೆಯಲಾಗಿತ್ತು. ಈ ಸಂಬಂಧ ಕಾಂಗ್ರೆಸ್ ನಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಮೈಸೂರಿನಲ್ಲಿ ಮಾತನಾಡಿದ ಧ್ರುವ ನಾರಾಯಣ್, ಮುಂಜಾಗ್ರತಾ ಕ್ರಮವಾಗಿ ಕಾರ್ಯಕರ್ತರನ್ನು ಬಂಧಿಸಬಹುದಿತ್ತು. ಈ ಮೂಲಕ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸರ್ಕಾರ ಹೊರಟಿದೆ. ಸಿದ್ದರಾಮಯ್ಯ ಒಬ್ಬ ಮಾಸ್ ಲೀಡರ್ ಅದಕ್ಕಾಗಿ ಅವರನ್ನು ಟಾರ್ಗೆಟ್ ಮಾಡಲಾಗಿದೆ. ಮಡಿಕೇರಿಯಲ್ಲಿ ನಡೆದ ಘಟನೆ ಖಂಡಿಸಿ ಪ್ರತಿಭಟಿಸುತ್ತೇವೆ ಎಂದಿದ್ದಾರೆ.
ಗೃಹಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಇದನ್ನು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತೇವೆ. ಅ.26ರಂದು ಕಾಂಗ್ರೆಸ್ ಚಲೋ ಮಾಡುತ್ತೇವೆ. ಈ ಹಿಂದೆ ಕೊಡಗಿನಲ್ಲಿ ಮನೆಗೊಬ್ಬರು ಸೈನಿಕರಿದ್ದರು. ಆದರೀಗ ಕೊಡಗಿನಲ್ಲಿ ಮನೆಗೊಬ್ಬರು ಪುಂಡರು ಹುಟ್ಟಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.