Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾರ್ಯಕರ್ತರು ಯುದ್ದೋಪಾದಿಯಲ್ಲಿ ಸೈನಿಕರಂತೆ ಕೆಲಸ ಮಾಡಿ ಈ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳ ಅಂತರದಿಂದ ನನ್ನನ್ನು ಗೆಲ್ಲಿಸಿ : ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಮನವಿ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 08  : ದೇಶದ ಏಳಿಗೆ ಭಾರತ ಸುರಕ್ಷಿತವಾಗಿರಬೇಕಾದರೆ ಮತ್ತೊಮ್ಮೆ ನರೇಂದ್ರಮೋದಿ ಪ್ರಧಾನಿಯಾಗಬೇಕು. ಅದಕ್ಕಾಗಿ ಕಾರ್ಯಕರ್ತರು ಪ್ರತಿ ಮನೆ ಮನೆಗೆ ಹೋಗಿ ಯುದ್ದೋಪಾದಿಯಲ್ಲಿ ಸೈನಿಕರಂತೆ ಕೆಲಸ ಮಾಡಿ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಮನವಿ ಮಾಡಿದರು.
ಉಮಾಪತಿ ಕಲ್ಯಾಣ ಮಂಟಪದಲ್ಲಿ ಸೋಮವಾರ ನಡೆದ ಬಿಜೆಪಿ. ಜೆಡಿಎಸ್. ಸಮನ್ವಯ ಸಮಿತಿ ಹಾಗೂ ಲೋಕಸಭಾ ಚುನಾವಣೆ ಮಹತ್ವದ ಸಭೆ ಉದ್ಗಾಟಿಸಿ ಮಾತನಾಡಿದರು.

ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ನರೇಂದ್ರಮೋದಿ ಮಾಡಿರುವ ಸಾಧನೆಗಳನ್ನು ಪ್ರತಿ ಬೂತ್, ವಾರ್ಡ್, ಊರುಗಳಲ್ಲಿ ಸಂಚರಿಸಿ ಜನತೆಗೆ ತಿಳಿಸಿ ಈ ಬಾರಿಯ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿ. ಮುಂದಿನ ಮೂರು ವರ್ಷಗಳಲ್ಲಿ ಭಾರತ ಶ್ರೀಮಂತರ ಪಟ್ಟಿಯಲ್ಲಿ ವಿಶ್ವದಲ್ಲಿಯೆ ಮೂರನೆ ಸ್ಥಾನಕ್ಕೆ ಬರಲಿದೆ. 25 ಕೋಟಿ ಜನ ಬಡತನ ರೇಖೆಗಿಂತ ಮೇಲೆ ಬಂದಿದ್ದಾರೆ. ದೇವಾಲಯಗಳನ್ನು ಕಟ್ಟಿಸುವುದು ಎಷ್ಟು ಮುಖ್ಯವೋ, ಶೌಚಾಲಯಗಳನ್ನು ಕಟ್ಟಿಸುವುದು ಅಷ್ಟೆ ಮುಖ್ಯವೆಂದು ತಿಳಿದು ನರೇಂದ್ರಮೋದಿ ದೇಶದಲ್ಲಿ ಹನ್ನೊಂದು ಕೋಟಿ ಶೌಚಾಲಯಗಳನ್ನು ನಿರ್ಮಾಣ ಮಾಡಿದ್ದಾರೆಂದು ಹೇಳಿದರು.

ಬಿಜೆಪಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಜಾರಿಗೆ ತಂದ ಎಲ್ಲಾ ಯೋಜನೆಗಳನ್ನು ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ರದ್ದುಪಡಿಸಿ ಭಂಡತನದ ಭಾಷಣ ಮಾಡುತ್ತಿರುವುದಕ್ಕೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ. ನೂರಾರು ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಬಡವರ ಮಕ್ಕಳು ಡಾಕ್ಟರ್‍ಗಳಾಗಬೇಕೆಂದು ಮೋದಿ ಮೆಡಿಕಲ್ ಕಾಲೇಜುಗಳ ನಿರ್ಮಾಣಕ್ಕೆ ಒತ್ತು ಕೊಟ್ಟ ಪ್ರಯುಕ್ತ ಹತ್ತು ವರ್ಷಗಳಲ್ಲಿ ಒಂದು ಲಕ್ಷದ ಐವತ್ತು ಸಾವಿರ ಡಾಕ್ಟರ್‍ಗಳು ಹೊರ ಬಂದಿದ್ದಾರೆ. ಮೋಸಗಾರ ಪಕ್ಷ ಕಾಂಗ್ರೆಸ್‍ನ್ನು ನಂಬಬೇಡಿ. ಜಾತಿ ಧರ್ಮಗಳ ಮಧ್ಯೆ ವಿಷಬೀಜ ಬಿತ್ತುವುದು ಕಾಂಗ್ರೆಸ್ ಜಾಯಮಾನ. ಪ್ರಧಾನಿ ಮೋದಿರವರು ಎಂದಿಗೂ ಜಾತಿ ಧರ್ಮವನ್ನು ಚುನಾವಣೆಗೆ ಬಳಸಿಕೊಳ್ಳಲಿಲ್ಲ. ಭಯೋತ್ಪಾದಕರನ್ನು ಹುಟ್ಟುಹಾಕಿದ್ದು, ಕಾಂಗ್ರೆಸ್. ಮೋದಿ ಆಡಳಿತದಲ್ಲಿ ಭಯೋತ್ಪಾದಕರು ಬಿಲ ಸೇರಿದ್ದಾರೆ. ಕಾಂಗ್ರೆಸ್‍ನಲ್ಲಿ ಪ್ರಧಾನಿಯಾಗುವ ಯೋಗ್ಯತೆ ಯಾರಿಗೂ ಇಲ್ಲ. ಅದಕ್ಕಾಗಿ ಮೋದಿ ಕೈಬಲಪಡಿಸಿ ಮೂರನೆ ಬಾರಿಗೆ ಪ್ರಧಾನಿಯಾಗಲು ಸಹಕರಿಸಿ ಎಂದು ಕಾರ್ಯಕರ್ತರಲ್ಲಿ ಗೋವಿಂದ ಕಾರಜೋಳ ವಿನಂತಿಸಿದರು.

ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡಿ ಗೋವಿಂದ ಕಾರಜೋಳರವರು ನೀರಾವರಿ ಸಚಿವರಾಗಿದ್ದಾಗ ರೈತರಿಗೆ ಅನೇಕ ಚೆಕ್‍ಡ್ಯಾಂಗಳನ್ನು ಕೊಟ್ಟಿದ್ದಾರೆ. ಅಪ್ಪರ್‍ಭದ್ರಾಗೆ ಕೇಂದ್ರ ಸರ್ಕಾರ ಐದು ಸಾವಿರದ ಮುನ್ನೂರು ಕೋಟಿ ರೂ.ಗಳನ್ನು ಬಿಡುಗಡೆಗೊಳಿಸುವಲ್ಲಿ ಇವರ ಪಾತ್ರ ಬಹಳಷ್ಟಿದೆ. ನರೇಂದ್ರಮೋದಿಯನ್ನು ಮೂರನೆ ಬಾರಿಗೆ ದೇಶದ ಪ್ರಧಾನಿಯನ್ನಾಗಿ ಮಾಡಲು ಪ್ರಜೆಗಳು ಕಾಯುತ್ತಿದ್ದಾರೆ. ಪ್ರತಿ ಹಳ್ಳಿಯಲ್ಲಿಯೂ ಸಿ.ಸಿ. ರಸ್ತೆ ಆಗಿದೆ ಎಂದರೆ ಅದಕ್ಕೆ ಗೋವಿಂದ ಕಾರಜೋಳ ಕಾರಣ. ಹಾಗಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮತಗಳಿಂದ ಗೆಲ್ಲಿಸಿ ಎಂದು ಎರಡು ಪಕ್ಷಗಳ ಕಾರ್ಯಕರ್ತರಲ್ಲಿ ಕೋರಿದರು.

 

ಕೋವಿಡ್ ಸಂದರ್ಭದಲ್ಲಿ ಯಾರು ಹಸಿವಿನಿಂದ ನರಳಬಾರದೆಂದು ಎಂಬತ್ತು ಕೋಟಿ ಜನರಿಗೆ ಉಚಿತ ಪಡಿತರ ಇಂದಿಗೂ ನೀಡುತ್ತಿದ್ದಾರೆ. ಜೊತೆಗೆ ಉಚಿತ ಲಸಿಕೆಯನ್ನು ಕೊಡಿಸಿದ್ದರಿಂದ ದೇಶದ ಜನ ಆರೋಗ್ಯವಾಗಿದ್ದಾರೆ. ಪಾಕಿಸ್ತಾನ, ಶ್ರೀಲಂಕಾದಲ್ಲಿ ಇಂದಿಗೂ ಆಹಾರಕ್ಕೆ ಹಾಹಾಕಾರವಿದೆ. ನಮ್ಮ ದೇಶದಲ್ಲಿ ಅಂತಹ ಪರಿಸ್ಥಿತಿಯಿಲ್ಲ. ವಿದೇಶಗಳಲ್ಲಿ ಭಾರತದ ಕೀರ್ತಿಯನ್ನು ಹೆಚ್ಚಿಸಿರುವ ಮೋದಿಯನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡೋಣ ಎಂದು ಹೇಳಿದರು.
ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಮಾತನಾಡಿ ಭಾರತೀಯ ಜನತಾಪಕ್ಷಕ್ಕೆ ತನ್ನದೆ ಆದ ಶಕ್ತಿಯಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರು ಬಿಜೆಪಿ. ಜೊತೆ ಮೈತ್ರಿ ಮಾಡಿಕೊಂಡಿರುವುದು ಪಕ್ಷಕ್ಕೆ ಆನೆ ಬಲ ಬಂದಿದೆ. ಗೋವಿಂದ ಕಾರಜೋಳರವರು ಹೆಚ್ಚು ಮತಗಳ ಅಂತರದಿಂದ ಗೆಲ್ಲುವುದರಲ್ಲಿ ಸಂಶಯವಿಲ್ಲ. ಹೈಕಮಾಂಡ್ ತೀರ್ಮಾನಕ್ಕೆ ಬದ್ದನಾಗಿ ಅಭ್ಯರ್ಥಿ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು.

ಜೆಡಿಎಸ್. ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್ ಮಾತನಾಡಿ ದೇಶದ ಅಭಿವೃದ್ದಿ ದೃಷ್ಟಿಯಿಂದ ನಮ್ಮ ಪಕ್ಷ ಬಿಜೆಪಿ. ಜೊತೆ ಮೈತ್ರಿ ಮಾಡಿಕೊಂಡಿದೆ. ಬೂತ್ ಮಟ್ಟದಲ್ಲಿ ಉಭಯ ಪಕ್ಷಗಳು ಒಂದಾಗಿ ಯಾವುದೇ ಭಿನ್ನಾಭಿಪ್ರಾಯವಿಲ್ಲದೆ ಅಭ್ಯರ್ಥಿ ಗೋವಿಂದ ಕಾರಜೋಳರವರ ಗೆಲುವಿಗೆ ಪ್ರಾಮಾಣಿಕಾಗಿ ಶ್ರಮಿಸುತ್ತೇವೆಂದು ಹೇಳಿದರು.

ಅಮಿತ್‍ಷಾ ಚಿತ್ರದುರ್ಗಕ್ಕೆ ಬಂದಾಗ ಮದಕರಿನಾಯಕ ಥೀಂ ಪಾರ್ಕ್ ನಿರ್ಮಾಣ ಮಾಡುವುದಾಗಿ ವಾಗ್ದಾನ ಮಾಡಿದ್ದರು. ಅದು ಮುನ್ನೆಲೆಗೆ ಬರುವಂತೆ ನೋಡಿಕೊಳ್ಳುವುದು ನಿಮ್ಮ ಜವಾಬ್ದಾರಿ ಎಂದು ಬಿಜೆಪಿ. ಮುಖಂಡರುಗಳಲ್ಲಿ ಮನವಿ ಮಾಡಿದರು.
ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡುತ್ತ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ಸಸ್ ದೇಶಕ್ಕೆ ಗ್ಯಾರೆಂಟಿಯಾಗಿರುವ ನರೇಂದ್ರಮೋದಿ ನಡುವೆ ನಡೆಯುತ್ತಿರುವ ಲೋಕಸಭಾ ಚುನಾವಣೆಯನ್ನು ಪ್ರತಿಷ್ಟೆಯಾಗಿ ತೆಗೆದುಕೊಳ್ಳಬೇಕು. ಭಾರತದ ಶತ್ರು ರಾಷ್ಟ್ರಗಳು ನರೇಂದ್ರಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗುವುದನ್ನು ತಡೆಯುವ ಹುನ್ನಾರ ನಡೆಸುತ್ತಿರುವುದನ್ನು ಮಾಧ್ಯಮಗಳು ಬಹಿರಂಗಪಡಿಸಿವೆ. ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಗೋವಿಂದ ಕಾರಜೋಳರವರನ್ನು ಎರಡು ಲಕ್ಷಗಳ ಮತಗಳ ಅಂತರದಿಂದ ಗೆಲ್ಲಿಸಿ ಮೋದಿ ಕೈಬಲಪಡಿಸಿ ಎಂದು ಕಾರ್ಯಕರ್ತರಲ್ಲಿ ಕೇಳಿಕೊಂಡರು.

 

ಜೆಡಿಎಸ್.ಜಿಲ್ಲಾಧ್ಯಕ್ಷ ಜಯಣ್ಣ ಮಾತನಾಡಿ ನರೇಂದ್ರಮೋದಿಯನ್ನು ಮೂರನೆ ಬಾರಿಗೆ ದೇಶದ ಪ್ರಧಾನಿಯನ್ನಾಗಿ ಮಾಡಬೇಕೆಂದು ನಮ್ಮ ಪಕ್ಷದ ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರು ಬಿಜೆಪಿ.ಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಜೆಡಿಎಸ್.ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಕೈಗೊಂಡ ಯೋಜನೆಗಳನ್ನು ಪ್ರತಿ ಮನೆ ಮನೆಗೆ ತಿಳಿಸಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೋವಿಂದ ಕಾರಜೋಳರನ್ನು ಗೆಲ್ಲಿಸುವಂತೆ ಎರಡು ಪಕ್ಷಗಳ ಕಾರ್ಯಕರ್ತರದಲ್ಲಿ ವಿನಂತಿಸಿದರು.

 

ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎನ್.ರವಿಕುಮಾರ್ ಮಾತನಾಡುತ್ತ ರೈತರಿಗೆ ಸಹಾಯವಾಗುವ ಅನೇಕ ಕಾರ್ಯಕ್ರಮಗಳನ್ನು ಮೋದಿ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ ಅನುಷ್ಠಾನಗೊಳಿಸಿದೆ. ಯಾರು ಕನಸು ಮನಸ್ಸಿನಲ್ಲಿಯೂ ನೋಡಲು ಆಗಲ್ಲ. ದೇಶಕ್ಕಾಗಿ ತನ್ನ ಜೀವನವನ್ನೆ ಮುಡುಪಾಗಿಟ್ಟಿರುವ ನರೇಂದ್ರಮೋದಿಯನ್ನು ಮತ್ತೊಮ್ಮೆ ದೇಶದ ಪ್ರಧಾನಿಯನ್ನಾಗಿ ಮಾಡುವ ಹೊಣೆಗಾರಿಕೆ ಎಲ್ಲರ ಮೇಲಿದೆ. ಹಾಗಾಗಿ ಅಭ್ಯರ್ಥಿ ಗೋವಿಂದ ಕಾರಜೋಳರನ್ನು ಗೆಲ್ಲಿಸಿ ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ ಮಾತನಾಡಿ ರೈತರು, ಮಹಿಳೆಯರು, ಯುವಕರಿಗೆ ಹತ್ತು ವರ್ಷಗಳಲ್ಲಿ ಪ್ರಧಾನಿ ಮೋದಿರವರು ಕೊಟ್ಟ ಕೊಡುಗೆಯನ್ನು ಪ್ರತಿ ಮನೆ ಮನೆಗೆ ಹೋಗಿ ಹೇಳಬೇಕು. ಪ್ರತಿ ಕುಟುಂಬದಲ್ಲೂ ಒಬ್ಬರಲ್ಲ ಒಬ್ಬರು ಕೇಂದ್ರದ ಯೋಜನೆಯ ಫಲಾನುಭವಿಗಳಿರುತ್ತಾರೆ. ಕಾರ್ಯಕರ್ತರು ಯಾರು ಹಿಂಜರಿಕೆಯಿಲ್ಲದೆ ಹೋಗಿ ಮತ ಕೇಳಿ. ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರು ನಮ್ಮ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ನಮ್ಮ ನಾಯಕರುಗಳ ಕನಸು ಈಡೇರಿಸಬೇಕಾಗಿರುವುದು ಎಲ್ಲರ ಕರ್ತವ್ಯ ಎಂದು ತಿಳಿಸಿದರು.

ಭಾರತ ವಿಶ್ವಗುರುವಾಗಬೇಕಾಗಿರುವುದರಿಂದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ. ಅಭ್ಯರ್ಥಿ ಗೋವಿಂದ ಕಾರಜೋಳರನ್ನು ಗೆಲ್ಲಿಸಿ ಎಂದು ಭಿನ್ನವಿಸಿಕೊಂಡರು.

ಜೆಡಿಎಸ್. ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ಕಾರ್ಯಾಧ್ಯಕ್ಷ ಜಿ.ಬಿ.ಶೇಖರ್, ತಾಲ್ಲೂಕು ಅಧ್ಯಕ್ಷ ತಿಮ್ಮಣ್ಣ, ಯುವ ಘಟಕದ ಅಧ್ಯಕ್ಷ ಪ್ರತಾಪ್‍ಜೋಗಿ, ಬಿಜೆಪಿ. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್‍ಸಿದ್ದಾಪುರ, ಸಂಪತ್‍ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜಗದೀಶ್, ಡಾ.ಸಿದ್ದಾರ್ಥ, ನಗರಸಭೆ ಸದಸ್ಯರುಗಳಾದ ಹರೀಶ್, ಸುರೇಶ್, ದೀಪು ಇನ್ನು ಅನೇಕರು ವೇದಿಕೆಯಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೋದಿ ನನ್ನ ಹೃದಯದಲ್ಲಿದ್ದಾರೆ, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ : ಕೆ. ಎಸ್. ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಅಖಾಡದಲ್ಲಿ ನಿಂತಿದ್ದಾರೆ. ಆರಂಭದಿಂದಲೂ ಪ್ರಧಾನಿ ಮೋದಿಯವರ ಫೋಟೋವನ್ನೇ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಬಿಜೆಪಿ ನಾಯಕರು

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

error: Content is protected !!