Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಟ ದರ್ಶನ್ ಕೇಸ್: ಬೃಹತ್ ಪ್ರತಿಭಟನೆಗೆ ಕರೆ ನೀಡಿದ ಕನ್ನಡ ಒಕ್ಕೂಟ

---Advertisement---

ನಟ ದರ್ಶನ್‌ ಮತ್ತೊಮ್ಮೆ ಪರಪ್ಪನ ಅಗ್ರಹಾರದ ಪಾಲಾಗಿ 187 ದಿನಗಳಾಗಿವೆ. ಕೊರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಆದರೆ ಇದೀಗ ಪೊಲೀಸರ ತನಿಖೆಯ ಮೇಲೆಯೇ ಹಲವರು ಅನುಮಾನಗಳು ಮೂಡುತ್ತಿವೆ‌. ಮೊದಲೇ ಷಡ್ಯಂತ್ರ ಮತ್ತು ಪಿತೂರಿ ನಡೆದಿದೆ ಎನ್ನುವ ವಾದ ನಡೆಯುತ್ತಿತ್ತು. ಪಾರದರ್ಶಕವಾದ ತನಿಖೆಯನ್ನು ಪೊಲೀಸರು ಮಾಡುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದ್ದು,ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು ಚರ್ಚೆಯನ್ನು ಕೂಡ ಮಾಡುತ್ತಿದ್ದರು.

ಇದೀಗ ಬಹಿರಂಗವಾಗಿ ನ್ಯಾಯಾಲಯಕ್ಕೆ ಸುಳ್ಳು ಸಾಕ್ಷಿಗಳನ್ನು ನೀಡಲಾಗಿದೆ. ಸ್ಥಳ ಮಹಜರು ವೇಳೆ ಪೊಲೀಸರಿಂದ ಪ್ರಮಾದವಾಗಿದೆ ಎಂದು ಮಾಧ್ಯಮಗಳಲ್ಲಿ ವರದಿ ಕೂಡ ಆಗಿದೆ.ಎಸಿಪಿ ಚಂದನ್ ಮತ್ತು ಇನ್ಸ್‌ಪೆಕ್ಟರ್ ಗಿರೀಶ್ ನಾಯಕ್ ಅವರು ನಟ ದರ್ಶನ್ ವಿರುದ್ಧ ತನಿಖೆಯ ಹೆಸರಿನಲ್ಲಿ ‘ನಕಲಿ ದಾಖಲೆ’ಗಳನ್ನು ಸೃಷ್ಟಿಸಿದ್ದಾರೆ ಎಂಬ ಗಂಭೀರ ಆರೋಪವನ್ನು ಕರ್ನಾಟಕ ಸಂಘಟನೆಗಳ ಕನ್ನಡ ಒಕ್ಕೂಟ ಮಾಡಿದೆ. ಇಷ್ಟೇ ಅಲ್ಲ ಇದೇ ಮಾರ್ಚ್ ಹನ್ನೊಂದರಂದು ಪ್ರತಿಭಟನೆ ಕೂಡ ಮಾಡಲು ಮುಂದಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಕರ್ನಾಟಕ ಸಂಘಟನೆಗಳ ಕನ್ನಡ ಒಕ್ಕೂಟದ ಪ್ರಮುಖರಾದ ನಟರಾಜ್ ಬೊಮ್ಮಸಂದ್ರ ನ್ಯಾಯ ಸಮ್ಮತವಾಗಿ ತನಿಖೆ ನಡೆಯಬೇಕೇ ಹೊರತು ಸುಳ್ಳು ದಾಖಲೆಗಳ ಮೂಲಕ ಯಾರನ್ನೂ ಸಿಲುಕಿಸಬಾರದು ಎಂದು ಕಿಡಿಕಾರಿದ್ದಾರೆ.ಎಸಿಪಿ ಚಂದನ್ ಕುಮಾರ್ ಮತ್ತು ‍ಗಿರೀಶ್ ನಾಯಕ್ ಅವರನ್ನು ಈ ಕೂಡಲೇ ಸೇವೆಯಿಂದ ಅಮಾನತ್ತು ಮಾಡಬೇಕು ಎಂದು ಆಗ್ರಹಿಸಿದ್ದಾರೆ.ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರ ಬುಧವಾರ ಬೆಳಿಗ್ಗೆ 11.30ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆಗೆ ಕರೆಯನ್ನು ಕೂಡ ನೀಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now