ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂದ್ರೆ ಕ್ರೇಜ್ ಅಷ್ಟಿಷ್ಟಲ್ಲ. ಅಭಿಮಾನಿ ಬಳಗ ಸಿಕ್ಕಾಪಟ್ಟೆ ದೊಡ್ಡದಿದೆ. ದರ್ಶನ್ ಅಂದ್ರೆ ಸೆಲೆಬ್ರೆಟಿಗಳು ಹೊತ್ತು ಮೆರೆಸುತ್ತಾರೆ. ಅವರ ಸಿನಿಮಾ ಬಂತು ಅಂದ್ರೆ ಕೇಳ್ಬೇಕಾ. ಇದೀಗ ನಟ ದರ್ಶನ್ ಹೊಸ ಸಿನಿಮಾ ಅನೌನ್ಸ್ ಮಾಡಿದ್ದಾರೆ. ಅದು ಟೈಟಲ್ ಸಮೇತ. ಪೂಜೆಯ ನೆರವೇರಿದೆ.
ಈಗಾಗಲೇ ಕಾಟೇರ ಸಿನಿಮಾ ರೆಡಿಯಾಗಿದ್ದು, ದರ್ಶನ್ ಅಭಿಮಾನಿಗಳು ಕಾಟೇರ ದರ್ಶನಕ್ಕಾಗಿ ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಕಾಟೇರ ಸಿನಿಮಾದ ಸಾಂಗ್ ಒಂದರಲ್ಲಿ ದರ್ಶನ್ ಬ್ಯುಸಿಯಾಗಿದ್ದಾರೆ. ಇದರ ಮಧ್ಯೆ ಡಿ57 ಸಿದ್ಧವಾಗಿದೆ. ಅದುವೆ ಮಿಲನಾ ಪ್ರಕಾಶ್ ಜೊತೆಗೆ.
ತಾರಕ್ ಸಿನಿಮಾ ನಂತರ ಮಿಲನಾ ಪ್ರಕಾಶ್ ಹಾಗೂ ದರ್ಶನ್ ಕಾಂಬೋ ಮತ್ತೆ ಒಂದಾಗಿದೆ. ದೊಡ್ಡ ಗಣಪತಿ ದೇವಸ್ಥಾನದಲ್ಲಿ ಸರಳವಾಗಿ ಈ ಸಿನಿಮಾದ ಮುಹೂರ್ತ ನೆರವೇರಿದೆ. ಫ್ಯಾಮಿಲಿ ಆಡಿಯನ್ಸ್ ಗೆ ಮಿಲನಾ ಪ್ರಕಾಶ್ ಎತ್ತಿದ ಕೈ. ಇದೀಗ ದರ್ಶನ್ ಜೊತೆಗೆ ಹೊಸ ಸಿನಿಮಾ ಘೋಷಣೆ ಮಾಡಿರುವುದು, ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಈ ಸಿನಿಮಾಗೆ ‘ಡೆವಿಲ್’ ಎಂಬ ಟೈಟಲ್ ಇಡಲಾಗಿದೆ. ಅದರ ಜೊತೆಗೆ ದಿ ಹೀರೊ ಎಂಬ ಟ್ಯಾಗ್ ಲೈನ್ ನೀಡಲಾಗಿದೆ. ಹೆಸರು ಕೇಳಿದರೇನೆ ಇದೊಂದು ದೆವ್ವದ ಕಥೆ ಇರಬಹುದಾ ಎಂಬ ಕುತೂಹಲ ಮೂಡಿದೆ. ಇಲ್ಲಿಯ ತನಕ ದರ್ಶನ್ ಯಾವತ್ತು ದೆವ್ವದ ಸಿನಿಮಾದಲ್ಲಿ ನಟಿಸಿಲ್ಲ. ದೆವ್ವದ ನಾಯಕನಾಗಿ ಈ ಸಿನಿಮಾ ಮೂಲಕ ಬರಲಿದ್ದಾರೆ ಎಂಬುದು ಫ್ಯಾನ್ಸ್ ಗೆ ಕುತೂಹಲ ಹೆಚ್ಚಾಗುವುದಕ್ಕೆ ಕಾರಣವಾಗಿದೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…