ನಟ ದರ್ಶನ್ ಬಳ್ಳಾರಿ ಜೈಲಿಗೆ : ಪೊಲೀಸ್ ಇಲಾಖೆ ತೀರ್ಮಾನಿಸಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

suddionenews
0 Min Read

ಬೆಂಗಳೂರು, ಆಗಸ್ಟ್ 27: ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಈಗಾಗಲೇ 9 ಜನರನ್ನು ಅಮಾನತು ಮಾಡಲಾಗಿದೆ. ಪ್ರಕರಣಕ್ಕೆಸಂಬಂಧಿಸಿದಂತೆ ತನಿಖೆ ಕೈಗೊಂಡಿದ್ದು, ವರದಿ ಆಧಾರದ ಮೇಲೆ ತಪ್ಪೆಸಗಿರುವ ಇನ್ನಷ್ಟು ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದರು.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks