Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಟ ಪ್ರಜ್ವಲ್ ದೇವರಾಜ್ ಇನ್ನಿಲ್ಲ : ಏನಿದು ಸುದ್ದಿ..?

---Advertisement---

 

ಬೆಂಗಳೂರು : ನಟ ಪ್ರಜ್ವಲ್ ದೇವರಾಜ್ ಇನ್ನಿಲ್ಲ ಎಂಬ ಫೋಟೋ ಒಂದು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಾ ಇದೆ. ಸಿನಿಮಾದ ಫೋಟೋ ಒಂದನ್ನು ಹಾಕಿ, ಪ್ರಜ್ವಲ್ ದೇವರಾಜ್ ಇನ್ನಿಲ್ಲ. ಓಂ ಶಾಂತಿ ಎಂದು ಕೋರಿದ್ದಾರೆ. ಈ ಪೋಸ್ಟರ್ ವೈರಲ್ ಆಗುತ್ತಿದ್ದಂತೆ ಅವರ ಆಪ್ತರು ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರ ವೀರಂ ಫೋಟೋ ಹಾಕಿ ಪ್ರಜ್ವಲ್ ದೇವರಾಜ್ ಇನ್ನಿಲ್ಲ.. ಓಂ ಶಾಂತಿ ಎಂದು ಪೋಸ್ಟ್ ಹಾಕಿದ್ದಾರೆ. ಇದು ಸೋಷಿಯಲ್ ಮೀಡಿಯಾದಲ್ಲೆಲ್ಲಾ ವೈರಲ್ ಆಗಿದೆ. ಈ ಕೆಲಸ ಮಾಡಿದ ಕಿಡಿಗೇಡಿಗಳು ಯಾರು ಎಂಬುದು ತಿಳಿಯುತ್ತಿಲ್ಲ. ಇದು ಅವರ ಕುಟುಂಬದ ಗಮನಕ್ಕೂ ಬಂದಿದ್ದು, ಕುಟುಂಬಸ್ಥರು ಬೇಸರ ಮಾಡಿಕೊಂಡಿದ್ದಾರೆ.

ಇನ್ನು ಪ್ರಜ್ವಲ್ ದೇವರಾಜ್ ಅವರು ಆರೋಗ್ಯವಾಗಿರುವ ವಿಚಾರ ತಿಳಿಸಿದ್ದಾರೆ. ಪ್ರಜ್ಚಲ್ ದೇವರಾಜ್ ಕ್ಷೇಮವಾಗಿದ್ದಾರೆ. ಅವರ ಆರೋಗ್ಯದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗಿದೆ. ಪ್ರಜ್ವಲ್ ಅವರ ಫೋಟೋ ದುರ್ಬಳಕೆ ಮಾಡಲಾಗಿದೆ. ಆರೋಗ್ಯವಂತ ನಟನ ಬಗ್ಗೆ ಈ ರೀತಿಯ ಸುಳ್ಳು ಸುದ್ದಿ ಸಲ್ಲದು. ಇದರಿಂದ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಆತಂಕ ಉಂಟಾಗುತ್ತದೆ ಎಂದು ಪ್ರಜ್ವಲ್ ಅವರ ಆಪ್ತರು ತಿಳಿಸಿದ್ದಾರೆ.

ಇನ್ನು ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ದೂರು ನೀಡಲು ಕುಟುಂಬಸ್ಥರು ಮುಂದಾಗಿದ್ದಾರೆ. ಅಭಿಮಾನಿಗಳಿಗೆ ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಅಂತಾನೂ ಮಾಹಿತಿ ನೀಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಆಗಾಗ ಬೇಡದ ಸುದ್ದಿಗಳೇ ಜೋರಾಗಿ ಹಬ್ಬುತ್ತವೆ. ಅದರಲ್ಲೂ ಸೆಲೆಬ್ರೆಟಿಗಳ ವಿಚಾರದಲ್ಲಿ ಸಾವಿನ ಸುದ್ದಿಯೇ ಹೆಚ್ಚಾಗಿ ಹಬ್ಬುತ್ತದೆ. ದ್ವಾರಕೀಶ್ ಅವರ ವಿಚಾರವಾಗಿ ಅದೆಷ್ಟು ಬಾರಿ ಸಾವಿನ ಸುದ್ದಿ ಹಬ್ಬಿಸಿದರೋ. ಪ್ರತಿ ಸಲ ಅವರೇ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದರು. ಇದೀಗ ಪ್ರಜ್ವಲ್ ದೇವರಾಜ್ ವಿಚಾರದಲ್ಲೂ ಅದೇ ಆಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ರೇಣುಕಾಸ್ವಾಮಿ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌: ಬೆದರಿಕೆ ಪ್ರಕರಣದ ಉದ್ಯಮಿ ಜೊತೆ ವಿಜಯಲಕ್ಷ್ಮಿ ಕಾಣಿಸಿಕೊಂಡಿದ್ದೇಕೆ?

ಏತ ನೀರಾವರಿ ಯೋಜನೆಗೆ ಭೂಮಿ ಪೂಜೆ: ಮಾಯಕೊಂಡ ಕ್ಷೇತ್ರ ಅಭಿವೃದ್ಧಿಗೆ ಸರ್ಕಾರದ ಬದ್ಧ : ಸಚಿವ ಎಸ್.ಎಸ್. ಮಲ್ಲಿಕಾರ್ಜುನ

ಕಾವ್ಯ ಬರೆಯುವುದು, ಕಟ್ಟುವುದು ಹೃದಯಕ್ಕೆ ಸಂಬಂಧಿಸಿದ ಕೆಲಸ: ಇತಿಹಾಸ ಸಂಶೋಧಕ ಡಾ. ಬಿ. ರಾಜಶೇಖರಪ್ಪ

ಹನುಮಾನ್ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತಂದವನ ವಿರುದ್ಧ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು : ಬೊಮ್ಮಾಯಿ

ಬಾಂಗ್ಲಾದೇಶದಲ್ಲಿ ನಿವೃತ್ತ ಶಿಕ್ಷಕ ಸೇರಿ ಒಂದೇ ಕುಟುಂಬದ ನಾಲ್ವರ ಸಾವು : ಮನೆಯಲ್ಲಿ ಮೃತದೇಹಗಳು ಪತ್ತೆ.!

Leave a Comment