Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜನರ ಸಾವಿನ ಬಗ್ಗೆ ಮೌನ ಮುರಿದ ನಟ ವಿಜಯ್ : ಸಂತಾಪ ಸೂಚಿಸಿದ ಮೋದಿ

---Advertisement---

 

ವಿಜಯ್ ರ‌್ಯಾಲಿ ನೋಡಲು ಬಂದ ಜನರಲ್ಲಿ 40 ಜನ ಜೀವ ಕಳೆದುಕೊಂಡಿದ್ದಾರೆ. 50 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಆದ್ರೆ ಈ ಘಟನೆ ನಡೆದ ಸಂದರ್ಭದಲ್ಲಿ ನಟ ವಿಜಯ್ ಪ್ರೈವೇಟ್ ಜೆಟ್ ನಲ್ಲಿ ಹೊರಟುಬಿಟ್ಟಿದ್ದರು. ಜನರಿಗೆ ಏನಾಯ್ತು..? ಪರಿಸ್ಥಿತಿಯನ್ನ ಹೇಗೆ ನಿಭಾಯಿಸ್ತಾ ಇದ್ದಾರೆ..? ಅದ್ಯಾವುದನ್ನು ಗಮನ ಹರಿಸಲೇ ಇಲ್ಲ. ಇದು ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಬಳಿಕ ವಿಜಯ್ ಅವರನ್ನು ಬಂಧಿಸುವಂತೆ ಒತ್ತಾಯ ಕೂಡ ಕೇಳಿ ಬಂದಿತ್ತು.

ಈ ಘಟನೆಯ ಬಗ್ಗೆ ಮೌನ ಮುರಿದ ವಿಜಯ್, ಈ ಘಟನೆಯಿಂದ ಹೃದಯ ಚೂರಾಗಿದೆ. ಅಸಹನೀಯ ಪರಿಸ್ಥಿತಿ, ಆ ನೋವನ್ನ ವಿವರಿಸುವುದಕ್ಕೆ ಸಾಧ್ಯವಿಲ್ಲ. ದುಃಖದಲ್ಲಿದ್ದೇನೆ. ಈ ಘಟನೆಯಿಂದ ನನ್ನ ಹೃದಯ ಒಡೆದು ಹೋಗಿದೆ. ಕರೂರಿನಲ್ಲಿ ಜೀವ ಕಳೆದುಕೊಂಡ ನಮ್ಮ ಪ್ರೀತಿಯ ಸಹೋದರ, ಸಹೋದರಿಯರ ಕುಟುಂಬಗಳಿಗೆ ನನ್ನ ಸಂತಾಪವನ್ನು ಸೂಚಿಸುತ್ತೇನೆ ಎಂದು ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.

ಕರೂರಿನಲ್ಲಿ ಸತ್ತವರಿಗೆ ರಾಜಕೀಯ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ. ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದು, ತಮಿಳುನಾಡಿನ ಕರೂರಿನಲ್ಲಿ ರಾಜಕೀಯ ಸಮಾವೇಶದ ವೇಳೆ ನಡೆದ ಅಹಿತಕರ ಘಟನೆ ತೀವ್ರ ದುಃಖ ತಂದಿದೆ ಎಂದಿದ್ದಾರೆ. ಅಷ್ಟೇ ಅಲ್ಲ ಕೇಂದ್ರ ಗೃಹಸಚಿವ ಅಮಿತ್​ ಶಾ, ಕೇಂದ್ರ ಸಚಿವ ಹೆಚ್​ಡಿ.ಕುಮಾರಸ್ವಾಮಿ, ತಮಿಳು ಸೂಪರ್​​ ಸ್ಟಾರ್​ ರಜನಿಕಾಂತ್​ ಸೇರಿದಂತೆ ಹಲವರು, ಎಕ್ಸ್​ ಖಾತೆಯಲ್ಲಿ ಸಂತಾಪ ಸೂಚಿಸಿ, ಮೃತರ ಕುಟುಂಬಗಳಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಗೃಹ ಸಚಿವ ಅಮಿತ್ ಶಾ ಅವರು ಎಲ್ಲಾ ಮಾಹಿತಿಯನ್ನು ಪಡೆಯುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...