ಸುದ್ದಿಒನ್,ಚೆನ್ನೈ: ತಮಿಳುನಾಡು ರಾಜಕೀಯದ ಅನಿಶ್ಚಿತತೆಗೆ ತೆರೆ ಬಿದ್ದಿದ್ದು, ತಮಿಳಗ ವೆಟ್ರಿ ಕಳಗಂ (TVK) ಅಧ್ಯಕ್ಷ ವಿಜಯ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಾಳೆ ಮಧ್ಯಾಹ್ನ 3:15ಕ್ಕೆ ಅಧಿಕಾರ ಸ್ವೀಕರಿಸಲಿದ್ದಾರೆ.
ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನ ಗೆದ್ದಿದ್ದ ವಿಜಯ್, ಈಗ ಕಾಂಗ್ರೆಸ್, ವಿಸಿಪಿ ಸೇರಿದಂತೆ ಇತರ ಮಿತ್ರಪಕ್ಷಗಳ ಬೆಂಬಲದೊಂದಿಗೆ ಒಟ್ಟು 120 ಶಾಸಕರ ಸಂಖ್ಯಾಬಲದೊಂದಿಗೆ ಸರ್ಕಾರ ರಚಿಸುತ್ತಿದ್ದಾರೆ.
ಕಳೆದ 59 ವರ್ಷಗಳ ದ್ರಾವಿಡ ಪಕ್ಷಗಳ ಆಡಳಿತಕ್ಕೆ ಬ್ರೇಕ್ ಹಾಕಿರುವ ವಿಜಯ್, ರಾಜ್ಯದ ಮೊದಲ ‘ದ್ರಾವಿಡೇತರ’ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಸರ್ಕಾರ ರಚನೆಯ ಕಸರತ್ತಿನ ನಡುವೆ ಶಾಸಕರನ್ನು ರೆಸಾರ್ಟ್‌ಗಳಿಗೆ ಸ್ಥಳಾಂತರಿಸಲಾಗಿತ್ತು. ವಿರೋಧ ಪಕ್ಷಗಳಿಂದ ‘ಕುದುರೆ ವ್ಯಾಪಾರ’ದ ಆರೋಪವೂ ಕೇಳಿಬಂದಿದೆ. ಉಪಮುಖ್ಯಮಂತ್ರಿ ಸ್ಥಾನಕ್ಕೆ ವಿಸಿಪಿ ಬೇಡಿಕೆ ಇಟ್ಟಿದ್ದು, ಸಚಿವ ಸಂಪುಟದ ಪಟ್ಟಿ ಸದ್ಯಕ್ಕೆ ಕುತೂಹಲ ಮೂಡಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















