Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಟ ವಿನೋದ್ ರಾಜ್ ಭೇಟಿ, ಸಹಾಯ : ಸಂಧಾನ ಮಾಡಲು ಬಂದರಾ ನಟ..? ರೇಣುಕಾಸ್ವಾಮಿ ತಂದೆ ಸ್ಪಷ್ಟನೆ…!

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 26 : ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಆರೋಪದ ಮೇಲೆ ದರ್ಶನ್ ಗ್ಯಾಂಗ್ ಕಡೆಯಿಂದ ಕೊಲೆಯಾಗಿದ್ದರು. ರೇಣುಕಾಸ್ವಾಮಿ ಹೆಂಡತಿ ಈಗ ಗರ್ಭಿಣಿ. ತಂದೆ-ತಾಯಿ ವಯಸ್ಸಾದವರು. ಮನೆಗೆ ಆಸರೆಯಾಗಿದ್ದ ಮಗನನ್ನು ಕಳೆದುಕೊಂಡು ಕಣ್ಣೀರು ಹಾಕುತ್ತಿದ್ದಾರೆ. ಈಗ ಹಿರಿಯ ನಟ ವಿನೋದ್ ರಾಜ್ ಅವರು ಚಿತ್ರದುರ್ಗದ ರೇಣುಕಾ ಸ್ವಾಮಿ ನಿವಾಸಕ್ಕೆ ಬಂದು ಅವರ ಕುಟುಂಬದವರನ್ನು ಭೇಟಿ ಮಾಡಿ, ಸಾಂತ್ವನ ಹೇಳಿ ಒಂದು ಲಕ್ಷ ರೂಪಾಯಿ ಹಣದ ಸಹಾಯವನ್ನು ಮಾಡಿದ್ದಾರೆ. ಈ ಮಧ್ಯೆ ಸಂಧಾನ ಏನಾದರೂ ಮಾಡುವುದಕ್ಕೆ ಬಂದಿದ್ದರಾ ಎಂಬ ಪ್ರಶ್ನೆಗೆ ರೇಣುಕಾಸ್ವಾಮಿ ತಂದೆ ಸ್ಪಷ್ಟನೆ ನೀಡಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಾವು ಯಾರ ಹಾಗೂ ಯಾವ ಸಂದಾನಕ್ಕೆ ಮುಂದಾಗಿಲ್ಲ, ನನ್ನ ಮಗನ ಸಾವಿಗೆ ನ್ಯಾಯ ಸಿಗಬೇಕು ಎಂದು ರೇಣುಕಾಸ್ವಾಮಿ ತಂದೆ ಕಾಶೀನಾಥ ಶಿವನಗೌಡ್ರ ಕಣ್ಣೀರು ಹಾಕಿದ್ದಾರೆ.

ನಟ ವಿನೋದ್ ರಾಜ್ ಭೇಟಿ ನೀಡಿದ ವೇಳೆ, ರೇಣುಕಾ ಸ್ವಾಮಿ ತಂದೆ ಕಣ್ಣೀರು ಹಾಕಿ ತಮ್ಮ ನೋವನ್ನು ಹೇಳಿಕೊಂಡಿದ್ದಾರೆ. ಅವನು ಸಾಯುವ ಸಂದರ್ಭದಲ್ಲಿ ನರಳಿದ್ದ ರೀತಿ ಕೇಳಿದ್ರೆ ನಮ್ಮ ಕರುಳು ಕಿತ್ತು ಬರುತ್ತಿದೆ. ನಾವು ಬಹಳ ನೊಂದಿದ್ದೇವೆ ನನ್ನ ಮನೆತನ ನಾಶವಾಗಿದೆ. ನನ್ನ ಮಗ ಹೋದಾಗಿಂದ ನಾವೆಲ್ಲರೂ ತುಂಬಾ ನೋವಿನಲ್ಲಿದ್ದೇವೆ. ಸರ್ಕಾರಕ್ಕೆ ವಿನಂತಿ ಮಾಡುತ್ತೇವೆ ಸೊಸೆಗೆ ಸರ್ಕಾರಿ ಕೆಲಸ ಕೊಡಿ, ನನ್ನ ಮಗನಿಗೆ ನ್ಯಾಯಸಿಗಬೇಕು, ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ರೇಣುಕಾಸ್ವಾಮಿ ತಂದೆ ಕಾಶೀನಾಥ ಶಿವನಗೌಡ್ರ ಅಳಲು ತೋಡಿಕೊಂಡಿದ್ದಾರೆ.

ರೇಣುಕಾಸ್ವಾಮಿ ಕೊಲೆಯಾದ‌ ಮೇಲೆ ಪೊಲೀಸರು ತನಿಖೆ ಕೈಗೊಂಡಿದ್ದು, ಆತನ ಮೊಬೈಲ್ ನಲ್ಲಿದ್ದ ಅಕೌಂಟ್ ಬಗ್ಗೆ ಮಾಹಿತಿ ನೀಡಿದ್ದರು. ಆ ಫೇಕ್ ಅಕೌಂಟ್ ನಿಂದ ಆತ ಹಲವು ನಟಿಯರಿಗೆ ಅಶ್ಲೀಲ ಮೆಸೇಜ್ ಮಾಡಿದ್ದ ವಿಚಾರ ಹೊರಗೆ ಬಂದಾಗಲೂ, ಅವರ ತಂದೆ ತಾಯಿ ಕೋಪಗೊಂಡಿದ್ದರು. ಈ ವಿಚಾರ ಈಗ ಹೇಳೋದಲ್ಲ, ಮೊದಲೇ ಹೇಳಬೇಕಿತ್ತು ಎಂದು ಆಕ್ರೋಶ ಹೊರ ಹಾಕಿದ್ದರು. ಇದೀಗ ನಟ ವಿನೋದ್ ರಾಜ್ ಭೇಟಿ ಕುರಿತು ಮಾತನಾಡಿದ ಅವರು ಸಂಧಾನದ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...