ಬಾಗಲಕೋಟೆ: ವಿಧಾನಸಭಾ ಚುನಾವಣೆಗೆ ಎಲ್ಲರು ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಇದೀಗ ಪುಟ್ಟಕ್ಕ ಕೂಡ ಅಖಾಡಕ್ಕೆ ಇಳಿದಿದ್ದಾರೆ. ಬಾಗಲಕೋಟೆಯ ತೆರದಾಳದಲ್ಲಿ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಚುನಾವಣಾ ಹಿನ್ನೆಲೆ ತೆರದಾಳದ ಕ್ಷೇತ್ರದ ಮಹಾಲಿಂಗಾಪುರದಲ್ಲಿ ಕಾರ್ಯಕರ್ತರ ಸಭೆ ನಡೆಸಿದ್ದಾರೆ. ಟಿಕೆಟ್ ಆಕಾಂಕ್ಷಿಗಳ ವಿಚಾರದಲ್ಲಿ ಕಿವಿ ಮಾತು ಹೇಳಿದ್ದಾರೆ.
ಸಭೆಯಲ್ಲಿ ಮಾತನಾಡಿದ ಟಿಕೆಟ್ ಆಕಾಂಕ್ಷಿಗಳ ಬೆನ್ನತ್ತಿ ಹೋದ್ರೆ ಏನು ಉಪಯೋಗವಿಲ್ಲ. ಮೊದಲು ಕ್ಷೇತ್ರದಲ್ಲಿ ಕಷ್ಟಪಟ್ಟು ಕೆಲಸ ಮಾಡಬೇಕು. ಈ ಸಮಯದಲ್ಲಿ ಮತದಾರರನ್ನು ಸೆಳೆಯುವ ಪ್ರಯತ್ನ ಕೂಡ ಮಾಡಬೇಕು. ಟಿಕೆಟ್ ಯಾರಿಗೆ ಸಿಗುತ್ತೆ ಅಂತ ತಲೆಕೆಡಿಸಿಕೊಳ್ಳಬೇಡಿ ಎಂದು ಸಲಹೆ ನೀಡಿದ್ದಾರೆ.
ಟಿಕೆಟ್ ನೀಡುವುದರ ಬಗ್ಗೆ ಕೆಪಿಸಿಸಿ ತೀರ್ಮಾನ ಮಾಡುತ್ತಾರೆ. ಅಲ್ಲಿವರೆಗೂ ನಾವೆಲ್ಲಾ ಕಾಂಗ್ರೆಸ್ ಪರ ಕೆಲಸ ಮಾಡಬೇಕೆ ಹೊರತು ವ್ಯಕ್ತಿಗತವಾಗಿ ಅಲ್ಲ ಎಂದಿದ್ದಾರೆ. ಇನ್ನು ತೆರದಾಳ ಕ್ಷೇತ್ರದಲ್ಲಿ ಉಮಾಶ್ರೀ ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಈ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಖಾತೆ ಸಚಿವರಾಗಿದ್ದರು. ಈ ಬಾರಿಯ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.