Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಮಾನ ದುರಂತದಿಂದ ಪ್ರಾಣಪಾಯಾದಿಂದ ಪಾರಾದ ನಟಿ ರಶ್ಮಿಕಾ ಮಂದಣ್ಣ : ಘಟನೆ ಬಗ್ಗೆ ಹೇಳಿದ್ದೇನು..?

---Advertisement---

 

 

ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ನಟಿ ರಶ್ಮಿಕಾ ಮಂದಣ್ಣ, ಯಾವಾಗಲೂ ಜರ್ನಿ ಮಾಡುತ್ತಾ ಇರುತ್ತಾರೆ. ಇಂದು ಶೂಟಿಂಗ್ ಮುಗಿಸಿ, ಮುಂಬೈಯಿಂದ ಹೈದ್ರಾಬಾದ್ ಗೆ ಹೊರಟಿದ್ದರು. ಈ ವೇಳೆ ರಶ್ಮಿಕಾ ಮಂದಣ್ಣ ಪ್ರಯಾಣ ಮಾಡುತ್ತಿದ್ದ ವಿಮಾನ, ನಿಲ್ದಾಣದಲ್ಲೇ ಭೂಸ್ಪರ್ಶವಾಗಿದೆ. ಆದರೆ ಯಾರಿಗೂ ಯಾವುದೇ ಸಮಸ್ಯೆಯಾಗಿಲ್ಲ. ರಶ್ಮಿಕಾ ಮಂದಣ್ಣ ಕೂಡ ಪ್ರಾಣಪಾಯದಿಂದ ಪಾರಾಗಿದ್ದಾರೆ. ಇದೇ ವಿಮಾನ ನಿಲ್ದಾಣದಲ್ಲಿ ನಟಿ ಶ್ರದ್ದಾ ದಾಸ್ ಕೂಡ ಪ್ರಯಾಣ ಮಾಡುತ್ತಿದ್ದರು. ರಶ್ಮಿಕಾ ಮಂದಣ್ಣ ಹಾಗೂ ಶ್ರದ್ಧಾ ದಾಸ್ ಇರುವ ಫೋಟೋವನ್ನು ಹಂಚಿಕೊಂಡಿದ್ದಾರೆ.

 

ಈ ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಾಕಿಕೊಂಡಿರುವ ನಟಿ ರಶ್ಮಿಕಾ ಮಂದಣ್ಣ, ಇಂದು ಪ್ರಾಣಪಾಯದಿಂದ ಇಬ್ಬರು ಪಾರಾಗಿದ್ದೇವೆ ಎಂದು ಸ್ಟೋರಿಯಲ್ಲಿ ಹಾಕಿದ್ದಾರೆ. ರಶ್ಮಿಕಾ ಮಂದಣ್ಣ ಕನ್ನಡದ ಕಿರಿಕ್‌ ಪಾರ್ಟಿ ಸಿನಿಮಾದಿಂದ ತಮ್ಮ ವೃತ್ತಿಜೀವನ ಆರಂಭಿಸಿದ್ದು, ಸದ್ಯ ಇದೀಗ ಬಹುಭಾಷೆಗಳಲ್ಲೂ ಸದ್ದು ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ತೆರೆಕಂಡ ‘ಅನಿಮಲ್’ ಬ್ಲಾಕ್ ಬಸ್ಟರ್ ಹಿಟ್ ಆಗಿದ್ದು, ಇದು ಜನಪ್ರಿಯತೆ ಹೆಚ್ಚಿಸಿದೆ. ಇನ್ನು ಬಹುನಿರೀಕ್ಷಿತ ಸಿನಿಮಾ ಪುಷ್ಪಾ 2ನಲ್ಲಿ ಕಾರ್ಯನಿರತರಾಗಿದ್ದಾರೆ.

ರಶ್ಮಿಕಾ ಮಂದಣ್ಣ ಅವರಿಗೆ ಡಿಮ್ಯಾಂಡ್ ಕೂಡ ಹೆಚ್ಚಾಗಿದೆ. ಕನ್ನಡದಿಂದ ಹೋದ ನಟಿ ಈಗಂತೂ ಬಾಲಿವುಡ್ ತನಕವೂ ಡಿಮ್ಯಾಂಡ್ ಇದೆ‌ ಸದ್ಯ ಬ್ಯಾಕ್ ಟು ಬ್ಯಾಕ್ ಹಿಂದಿ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದಾರೆ ರಶ್ಮಿಕಾ ಮಂದಣ್ಣ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...