Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬರ ಪಟ್ಟಿಗೆ ಹೊಸದಾಗಿ 53 ತಾಲೂಕುಗಳ ಸೇರ್ಪಡೆ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

---Advertisement---

ಬೆಂಗಳೂರು.ಸೆಪ್ಟೆಂಬರ್.23: ರಾಜ್ಯದ ಬರಪೀಡಿತ ತಾಲೂಕುಗಳ ಪಟ್ಟಿಗೆ ಹೊಸದಾಗಿ 53 ತಾಲೂಕುಗಳನ್ನು ಸೇರಿಸಿ ರಾಜ್ಯ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ.

ಈ ಹಿಂದೆ ಮೊದಲ ಹಂತದಲ್ಲಿ 101 ತಾಲೂಕುಗಳು ಹಾಗೂ ಎರಡನೇ ಹಂತದಲ್ಲಿ 23 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತ್ತು. ಇದೀಗ ಹೆಚ್ಚುವರಿಯಾಗಿ 53 ತಾಲೂಕುಗಳನ್ನು ಸೇರ್ಪಡೆಗೊಳಿಸುವುದರೊಂದಿಗೆ ರಾಜ್ಯದಲ್ಲಿ ಬರಪೀಡಿತ ತಾಲೂಕುಗಳ ಒಟ್ಟು ಸಂಖ್ಯೆ 177ಕ್ಕೆ ತಲುಪಿದೆ.

ಗದಗ ಹಾಗೂ ಕನಕಪುರ ಸೇರಿದಂತೆ ಒಟ್ಟು 11 ತಾಲೂಕುಗಳಲ್ಲಿ ಪ್ರತ್ಯೇಕ ಬರ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಆದೇಶಿಸಿದೆ.    ಈ ಅಧ್ಯಯನ ವ್ಯಾಪ್ತಿಗೆ ಗದಗ ಜಿಲ್ಲೆಯ ಗದಗ, ಮುಂಡರಗಿ, ರೋಣ ತಾಲೂಕುಗಳು. ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ, ಕನಕಪುರ, ಹಾರೋಹಳ್ಳಿ; ದಾವಣಗೆರೆಯ ಜಗಳೂರು; ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ; ಕೊಪ್ಪಳ ಜಿಲ್ಲೆಯ ಕುಷ್ಟಗಿ. ವಿಜಯಪುರದ ತಾಳಿಕೋಟೆ ಹಾಗೂ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕುಗಳು ಒಳಪಟ್ಟಿವೆ.

ಈ 11 ತಾಲೂಕುಗಳಲ್ಲಿ ವೈಜ್ಞಾನಿಕ ಪರಿಶೀಲನೆ, ಪಾರದರ್ಶಕ ಸಮೀಕ್ಷೆ ಮತ್ತು ನಿಖರ ವರದಿ ಪಡೆಯಲು ಸ್ಥಳ ಪರಿಶೀಲನೆಗೆ ಸೂಚಿಸಲಾಗಿದ್ದು, ವರದಿ ಬಂದ ಬಳಿಕ ಇವುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸುವ ಕುರಿತು ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸರ್ಕಾರ ತಿಳಿಸಿದೆ

Join WhatsApp

Join Now

Join Telegram

Join Now