ಚಿತ್ರದುರ್ಗ. ಜ.24: ಚುನಾವಣಾ ಪ್ರಕ್ರಿಯೆಯಲ್ಲಿನ ಅತ್ಯುತ್ತಮ ಕಾರ್ಯಕ್ಷಮತೆಗಾಗಿ ನೀಡಲಾಗುವ 2025-26ನೇ ಸಾಲಿನ ರಾಜ್ಯ ಮಟ್ಟದ ಅತ್ಯುತ್ತಮ ಚುನಾವಣಾ ಅಭ್ಯಾಸ ಪ್ರಶಸ್ತಿ’ಗೆ ಜಿಲ್ಲೆಯ ಇಬ್ಬರು ಅಧಿಕಾರಿಗಳು ಭಾಜನರಾಗಿದ್ದಾರೆ.
ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಗಳ ವಿಭಾಗದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಚುನಾವಣಾ ಆಯೋಗವು ಕೈಗೊಂಡಿದ್ದ ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಚುನಾವಣಾ ಆಯೋಗ ವಹಿಸಿದ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನ ಗೊಳಿಸುವಲ್ಲಿ ಉತ್ತಮ ಕಾರ್ಯ ನಿರ್ವಹಿಸಿದಕ್ಕಾಗಿ ಆಯೋಗವು ಈ ಪ್ರಶಸ್ತಿಗಾಗಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರನ್ನು ಪ್ರಶಸ್ತಿ ಗಾಗಿ ಆಯ್ಕೆ ಮಾಡಿದೆ.
ಬಿಎಲ್‌ಒ ವಿಭಾಗದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಉಪ್ಪಾರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪದವೀಧರ ಪ್ರಾಥಮಿಕ ಶಿಕ್ಷಕಿ ಎನ್. ಅಂಬಿಕಾ ಅವರೂ ಈ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ವಿವಿಧ ಕಾರ್ಯಕ್ರಮ ಗಳ ಉತ್ತಮ ನಿರ್ವಹಣೆಗಾಗಿ ಬಿಎಲ್ ಒ ಆಗಿ ಕಾರ್ಯ ನಿರ್ವಹಿಸಿರುವ ಅಂಬಿಕಾ ಅವರು ಆಯೋಗದ ಪ್ರಶಸ್ತಿಗೆ ಭಾಜನರಾಗಿದಗದಾರೆ.
ಜನವರಿ 25ರಂದು ಬೆಳಿಗ್ಗೆ 9:30ಕ್ಕೆ ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್‌ನಲ್ಲಿ ಆಯೋಜಿಸಿರುವ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.






