Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಪರ ಜಿಲ್ಲಾಧಿಕಾರಿಗೆ ರಾಜ್ಯ ಮಟ್ಟದ ‘ಅತ್ಯುತ್ತಮ ಚುನಾವಣಾ ಅಭ್ಯಾಸ ಪ್ರಶಸ್ತಿ’ ಗರಿ

---Advertisement---

ಚಿತ್ರದುರ್ಗ. ಜ.24: ಚುನಾವಣಾ ಪ್ರಕ್ರಿಯೆಯಲ್ಲಿನ ಅತ್ಯುತ್ತಮ ಕಾರ್ಯಕ್ಷಮತೆಗಾಗಿ ನೀಡಲಾಗುವ 2025-26ನೇ ಸಾಲಿನ ರಾಜ್ಯ ಮಟ್ಟದ ಅತ್ಯುತ್ತಮ ಚುನಾವಣಾ ಅಭ್ಯಾಸ ಪ್ರಶಸ್ತಿ’ಗೆ ಜಿಲ್ಲೆಯ ಇಬ್ಬರು ಅಧಿಕಾರಿಗಳು ಭಾಜನರಾಗಿದ್ದಾರೆ.

 

ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಗಳ ವಿಭಾಗದಲ್ಲಿ‌ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಚುನಾವಣಾ ಆಯೋಗವು ಕೈಗೊಂಡಿದ್ದ ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಚುನಾವಣಾ ಆಯೋಗ ವಹಿಸಿದ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನ ಗೊಳಿಸುವಲ್ಲಿ ಉತ್ತಮ ಕಾರ್ಯ ನಿರ್ವಹಿಸಿದಕ್ಕಾಗಿ ಆಯೋಗವು ಈ ಪ್ರಶಸ್ತಿಗಾಗಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರನ್ನು ಪ್ರಶಸ್ತಿ ಗಾಗಿ ಆಯ್ಕೆ ಮಾಡಿದೆ.

 

ಬಿಎಲ್‌ಒ ವಿಭಾಗದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಉಪ್ಪಾರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪದವೀಧರ ಪ್ರಾಥಮಿಕ ಶಿಕ್ಷಕಿ ಎನ್. ಅಂಬಿಕಾ ಅವರೂ ಈ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ವಿವಿಧ ಕಾರ್ಯಕ್ರಮ ಗಳ ಉತ್ತಮ ನಿರ್ವಹಣೆಗಾಗಿ ಬಿಎಲ್ ಒ ಆಗಿ ಕಾರ್ಯ ನಿರ್ವಹಿಸಿರುವ ಅಂಬಿಕಾ ಅವರು ಆಯೋಗದ ಪ್ರಶಸ್ತಿಗೆ ಭಾಜನರಾಗಿದಗದಾರೆ.

ಜನವರಿ 25ರಂದು ಬೆಳಿಗ್ಗೆ 9:30ಕ್ಕೆ ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್‌ನಲ್ಲಿ ಆಯೋಜಿಸಿರುವ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ