Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯ ಸಮರ್ಪಕಗೊಳಿಸಿ : ದಿವ್ಯಪ್ರಭು ಜಿ.ಆರ್.ಜೆ.

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ (ಜ.03) :  ಜಿಲ್ಲೆಯಲ್ಲಿನ ಎಲ್ಲ ಮತಗಟ್ಟೆಗಳಲ್ಲಿ ವಿದ್ಯುತ್ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಎಲ್ಲ ಮೂಲಭೂತ ಸೌಕರ್ಯಗಳನ್ನು ವ್ಯವಸ್ಥಿತವಾಗಿಸಲು ಸಂಬಂಧಪಟ್ಟ ತಹಸಿಲ್ದಾರರು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ಸೂಚನೆ ನೀಡಿದ್ದಾರೆ.

ಮತಗಟ್ಟೆಗಳಲ್ಲಿನ ಸೌಕರ್ಯಗಳನ್ನು ಪರಿಶೀಲಿಸುವ ಕಾರ್ಯಕ್ರಮದಡಿ, ಜಿಲ್ಲಾಧಿಕಾರಿಗಳು ಮಂಗಳವಾರದಂದು ಚಳ್ಳಕೆರೆ ತಾಲ್ಲೂಕು ಬಾಲೇನಹಳ್ಳಿ ಮತ್ತು ಕುರುಡಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಕ್ಕಳೊಂದಿಗೆ ಮಾತನಾಡಿ, ಶಾಲೆಯ ಶಿಕ್ಷಣ, ಆಹಾರ ಪೂರೈಕೆ ಮತ್ತಿತರ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಬಾಲೇನಹಳ್ಳಿ ಶಾಲೆಯಲ್ಲಿ ಮತಗಟ್ಟೆಯಿದ್ದು, ಶಾಲೆಯಲ್ಲಿ ವಿದ್ಯುತ್ ಸಂಪರ್ಕವಿದ್ದರೂ, ವಿದ್ಯುತ್‍ದೀಪ ಹಾಕಿಕೊಳ್ಳದೆ ಕತ್ತಲಲ್ಲಿಯೇ ಮಕ್ಕಳಿಗೆ ಪಾಠ ಮಾಡುವುದನ್ನು ಗಮನಿಸಿದರು. ಫ್ಯಾನ್ ಮುಂತಾದ ವ್ಯವಸ್ಥೆಯನ್ನು ಮಾಡಿಕೊಂಡಿಲ್ಲದಿರುವುದನ್ನು ಗಮನಿಸಿದ ಜಿಲ್ಲಾಧಿಕಾರಿಗಳು ಕೂಡಲೆ ವಿದ್ಯುತ್‍ದೀಪ ಹಾಗೂ ಫ್ಯಾನ್ ವ್ಯವಸ್ಥೆಯನ್ನು ತ್ವರಿತವಾಗಿ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕುರುಡಿಹಳ್ಳಿಯಲ್ಲಿನ ಸರ್ಕಾರಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಶಾಲೆಗೆ ರ್ಯಾಂಪ್, ಕುಡಿಯುವ ನೀರಿನ ವ್ಯವಸ್ಥೆ ಲಭ್ಯವಿದೆ.  ಆದರೆ ವಿದ್ಯುತ್ ಸಂಪರ್ಕ, ವಿದ್ಯುತ್‍ದೀಪ ಮುಂತಾದ ವ್ಯವಸ್ಥೆ ಇಲ್ಲದಿರುವುದನ್ನು ಗಮನಿಸಿದ ಜಿಲ್ಲಾಧಿಕಾರಿಗಳು, ಅಗತ್ಯ ಮೂಲಭೂತ ಸೌಕರ್ಯ ಮಾಡಿಕೊಳ್ಳಬೇಕು, ಈ ಶಾಲೆಯ ಗೋಡೆಗಳಲ್ಲಿ ಅಲ್ಲಲ್ಲಿ ಬಿರುಕು ಕಂಡುಬಂದಿದ್ದು, ಅದನ್ನು ಕೂಡ ಸರಿಪಡಿಸುವಂತೆ ಸೂಚನೆ ನೀಡಿದರು.

ಈ ಶಾಲೆಗೆ ಈಗಾಗಲೆ ಒಂದು ಶೌಚಾಲಯವಿದ್ದು, ಇನ್ನೊಂದು ಹೆಚ್ಚುವರಿ ಶೌಚಾಲಯ ಅಗತ್ಯವಿದೆ ಎಂಬ ಬೇಡಿಕೆ ಬಂದ ಹಿನ್ನೆಲೆಯಲ್ಲಿ, ಹೆಚ್ಚುವರಿ ಶೌಚಾಲಯ ನಿರ್ಮಾಣಕ್ಕೆ ಕೂಡಲೆ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿಯೇ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಈಗಾಗಲೆ ಹೆಚ್ಚುವರಿ ಶೌಚಾಲಯ ನಿರ್ಮಾಣಕ್ಕೆ ನರೇಗಾ ಕನ್ವರ್ಜೆನ್ಸ್ ನಡಿ ಕ್ರಮ ಕೈಗೊಳ್ಳಲಾಗಿದೆ ಎಂದರು.  ಆದಷ್ಟು ಶೀಘ್ರ ಶೌಚಾಲಯ ಸೇರಿದಂತೆ ಎಲ್ಲ ಅಗತ್ಯ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಸದ್ಯದಲ್ಲಿಯೇ ವಿಧಾನಸಭೆ ಚುನಾವಣೆ ಬರಲಿದ್ದು, ಜಿಲ್ಲೆಯಲ್ಲಿನ ಎಲ್ಲ ಮತಗಟ್ಟೆಗಳನ್ನು ಆಯಾ ಬಿಎಲ್‍ಒ ಗಳು ಹಾಗೂ ತಹಸಿಲ್ದಾರರು ಪರಿಶೀಲಿಸಿ, ಅಗತ್ಯವಿರುವ ಮೂಲಭೂತ ಸೌಕರ್ಯಗಳ ಕುರಿತು ವರದಿ ಸಿದ್ಧಪಡಿಸಿಕೊಂಡು, ತ್ವರಿತವಾಗಿ ಎಲ್ಲ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಇದೇ ಸಂದರ್ಭದಲ್ಲಿ ಸೂಚನೆ ನೀಡಿದರು.  ತಹಸಿಲ್ದಾರ್ ರಘುಮೂರ್ತಿ ಸೇರಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬಿಎಲ್‍ಒ ಗಳು ಉಪಸ್ಥಿತರಿದ್ದರು.

ತಹಸಿಲ್ದಾರ್ ಕಚೇರಿ ಭೇಟಿ : ಪ್ರತಿ ಮಂಗಳವಾರ ತಹಸಿಲ್ದಾರರ ಕಚೇರಿಗೆ ಭೇಟಿ ನೀಡುವ ಕಾರ್ಯಕ್ರಮದಡಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ಈ ಬಾರಿ ಚಳ್ಳಕೆರೆ ತಹಸಿಲ್ದಾರರ ಕಚೇರಿಗೆ ಭೇಟಿ ನೀಡಿ, ಕಚೇರಿಗೆ ಆಗಮಿಸಿದ್ದ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.  ಬಳಿಕ ಕಚೇರಿಯ ವಿವಿಧ ಶಾಖೆಗಳಲ್ಲಿನ ಕಾರ್ಯ ವೈಖರಿ ಕುರಿತು ಪರಿಶೀಲನೆ ನಡೆಸಿದರು.  ತಹಸಿಲ್ದಾರ್ ರಘುಮೂರ್ತಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ : ಮತದಾರರಿಂದ ಉತ್ತಮ ಸ್ಪಂದನೆ : ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ ?

  ಚಿತ್ರದುರ್ಗ .26: ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ ದಾಖಲಾಗಿದೆ‌. ಬೆಳಗಿನ 11 ಗಂಟೆವರೆಗೆ ಶೇ 21.75 % ಮತದಾನ ದಾಖಲಾಗಿದೆ. ವಿಧಾನ ಸಭಾ ಕ್ಷೇತ್ರವಾರು ಚಳ್ಳಕೆರೆ- 22.55%, ಚಿತ್ರದುರ್ಗ-23.73%,ಹಿರಿಯೂರು-20.79% , ಹೊಳಲ್ಕೆರೆ

ಚಳ್ಳಕೆರೆಯಲ್ಲಿ ಮತದಾನ ಮಾಡಿದ ಶತಾಯುಷಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ರಾಜ್ಯದಲ್ಲಿ ಇಂದು ಲೋಕಸಭಾ ಚುನಾವಣೆ  ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಯುವಕ –

ಚಿತ್ರದುರ್ಗದಲ್ಲಿ‌ ಆರಂಭಗೊಂಡ ಮತದಾನ ಪ್ರಕ್ರಿಯೆ : ಬೆಳ್ಳಂಬೆಳಿಗ್ಗೆಯೇ ಸಾಲುಗಟ್ಟಿ ನಿಂತ ಮತದಾರರು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ಚಿತ್ರದುರ್ಗ ನಗರದ ವಿಪಿ ಬಡಾವಣೆಯ

error: Content is protected !!