ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಹಗರಣ ಸಂಬಂಧ ಇಡಿ ಅಧಿಕಾರಿಗಳು ರಾಹುಲ್ ಗಾಂಧಿಯನ್ನು ವಿಚಾರಣೆ ನಡೆಸುತ್ತಿದ್ದಾರೆ. ಇಂದಿಗೆ ಮೂರು ದಿನವಾಗಿದ್ದು, ಮೂರನೇ ದಿನವೂ ವಿಚಾರಣೆ ಮುಂದುವರೆದಿದೆ. ರಾಹುಲ್ ಗಾಂಧಿಯನ್ನು ವಿಚಾರಣೆ ನಡೆಸುತ್ತಿರುವುದಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿ, ಹೊರಗಡೆ ಪ್ರತಿಭಟನೆ ನಡೆಸುತ್ತಿದ್ದಾರೆ.
ಇಡಿ ಕಚೇರಿ ಎದುರು ಇಂದು ಕೂಡ ಪ್ರತಿಭಟನೆ ಮುಂದುವರೆದಿದ್ದು, ಟಯರ್ ಗೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ರಾಹುಲ್ ಗಾಂಧಿ ಇಡಿ ಅಧಿಕಾರಿಗಳು ಕೇಳಿದ 80 ಪ್ರಶ್ನೆಗಳಿಗೂ ಉತ್ತರ ನೀಡಿದ್ದಾರೆ ಎನ್ನಲಾಗಿದೆ.
ಈ ನಡುವೆ ಪ್ರತಿಭಟನೆಯಲ್ಲಿ ಯೂಥ್ ಕಾಂಗ್ರೆಸ್ ಅಧ್ಯಕ್ಷ ಬಿ ವಿ ಶ್ರೀನಿವಾಸ್ ಅವರನ್ನು ಪೊಲೀಸರು ಧರಧರನೇ ಎಳೆದೊಯ್ದಿದ್ದು, ಬೂಟು ಕಾಲಿನಲ್ಲಿ ಒದ್ದಿರುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ, ನಾವೂ ಭಯೋತ್ಪಾದಕರಲ್ಲ, ನಮ್ಮ ನಿರ್ವಹಣೆಗೆ ಪೊಲೀಸರ ಅಗತ್ಯವೇನಿದೆ. ನಮ್ಮನ್ನು ಕಂಡರೆ ಭಯವೇಕೆ ಎಂದು ಪ್ರಶ್ನಿಸಿದ್ದಾರೆ.