ವರದಿ ಮತ್ತು ಫೋಟೋ ಕೃಪೆ, ಸುರೇಶ್ ಪಟ್ಟಣ್, ಮೊ : 98862 95817
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 15 : ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಸಲು ಉದ್ದೇಶಿಸಿದ್ದ ಹಕ್ಕೊತ್ತಾಯ ಸಮಾವೇಶವನ್ನು ಮುಂದೂಡಲಾಗಿದೆ ಎಂದು ಅಖಿಲ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಸಂಚಾಲಕರಾದ ಬಿ.ಟಿ.ಜಗದೀಶ್ ತಿಳಿಸಿದ್ದಾರೆ.
ಸಾಮಾಜಿಕ ಮತ್ತು ಶೈಕ್ಷಣಿಕ, ಆರ್ಥಿಕ ಶಾಶ್ವತ ಹಿಂದುಳಿದ ವರ್ಗಗಗಳ ಆಯೋಗ ಸಿದ್ದಪಡಿಸಿದ ಸಮೀಕ್ಷಾ ವರದಿ ಜಾರಿಗೊಳಿಸಲು ರಾಜ್ಯ ಸರ್ಕಾರವನ್ನು ಆಗ್ರಹಿಸಿ ಅಕ್ಟೋಬರ್ 16 ರಂದು ಹಮ್ಮಿಕೊಳ್ಳಲಾಗಿದ್ದ ಹಕ್ಕೊತ್ತಾಯ ಸಮಾವೇಶವನ್ನು ಹವಾಮಾನ ಇಲಾಖೆಯ ವರದಿಯಂತೆ, ಮಳೆ ಮುಂದುವರೆಯಲಿರುವ ಕಾರಣ ಮತ್ತು ರಾಜ್ಯ ಸಚಿವ ಸಂಪುಟ ಸಭೆಯು ಇದೇ ಅಕ್ಟೋಬರ್ 25 ಕ್ಕೆ ಮುಂದೂಡಿಕೆ ಮಾಡಿರುವ ಕಾರಣ ನಮ್ಮ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹಕ್ಕೊತ್ತಾಯ ಸಮಾವೇಶವನ್ನು ಬೆಂಗಳೂರಿನ ಫ್ರೀಡಂ ಫಾರ್ಕ್‍ನಲ್ಲಿ ಅಕ್ಟೋಬರ್ 23 ರಂದು ಬೆಳಿಗ್ಗೆ 11 ಗಂಟೆಗೆ ಮುಂದೂಡಿಕೆ ಮಾಡಲಾಗಿದೆ ಶೋಷಿತ ಸಮುದಾಯಗಳ ಬಂಧುಗಳು ಸಹಕರಿಸಲು ಕೋರಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









