ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 02 : ನಗರದಲ್ಲಿರುವ ಭೂ ದಾಖಲೆಗಳ ಸಹಾಯಕ ನಿರ್ದೇಶಕ ಕಛೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ರೈತರ ಪಹಣಿ ನೀಡಲು 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟು, 10 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಎಡಿಎಲ್ ಆರ್. ಗಂಗಣ್ಣ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.
ತಾಲೂಕಿನ ಓಬಳಾಪುರ ಗ್ರಾಮದ ರೈತ ಕೆ.ಜಿ. ಜಯಣ್ಣ ತಮ್ಮ ಜಮೀನಿನ ಪಹಣಿಯನ್ನು ಪ್ರತ್ಯೇಕವಾಗಿ ಮಾಡಿಕೊಡಲು ಗಂಗಣ್ಣ ಹದಿನೈದು ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ರೈತ ಜಯಣ್ಣ ಲೋಕಾಯುಕ್ತರಿಗೆ ದೂರು ನೀಡಿದ್ದರು. ಕಾರಿನ ಚಾಲಕ ಕಿರಣ್ ಎಂಬುವರು ರೈತರಿಂದ 10ಸಾವಿರ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಲೋಕಾಯುಕ್ತ ಎಸ್ಪಿ ವಾಸುದೇವರಾಮ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಮೃತ್ಯುಂಜಯ ಹಾಗೂ ಸರ್ಕಲ್ ಇನ್ಸ್ಪೆಕ್ಟರ್ ಶಿಲ್ಪ ವಸಂತ ಕುಮಾರ್, ಮಂಜುನಾಥ್ ದಾಳಿಯಲ್ಲಿ ಭಾಗವಹಿಸಿದ್ದರು.