Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿ.ಇಡಿ ಹಾಗೂ ಡಿ.ಪಿ.ಇಡಿ ಕೋರ್ಸ್‌ಗಳ ಪ್ರವೇಶಾತಿ ಆರಂಭ: ಅರ್ಜಿ ಸಲ್ಲಿಸಲು ಜೂನ್ 1 ಕೊನೆಯ ದಿನ

---Advertisement---

ಸುದ್ದಿಒನ್,ಬೆಂಗಳೂರು, ಮೇ07 : ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿನ 2026-27ನೇ ಶೈಕ್ಷಣಿಕ ಸಾಲಿನ ವಿವಿಧ ಶಿಕ್ಷಕ ತರಬೇತಿ ಕೋರ್ಸ್‌ಗಳ ಪ್ರವೇಶಾತಿ ಪ್ರಕ್ರಿಯೆ ಇಂದಿನಿಂದ ಅಧಿಕೃತವಾಗಿ ಆರಂಭಗೊಂಡಿದೆ.

ಪ್ರಸಕ್ತ ಸಾಲಿನ ಡಿ.ಇಡಿ (D.Ed), ಡಿ.ಪಿ.ಇಡಿ (D.P.Ed) ಮತ್ತು ಡಿ.ಪಿ.ಎಸ್.ಇ (DPSE) ಕೋರ್ಸ್‌ಗಳ ಸರ್ಕಾರಿ ಕೋಟಾದ ಸೀಟುಗಳಿಗಾಗಿ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಮೇ 6 ರಿಂದ ಜೂನ್ 1ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ವೆಬ್‌ಸೈಟ್: ಹೆಚ್ಚಿನ ಮಾಹಿತಿಗಾಗಿ ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ಜಾಲತಾಣ www.schooleducation.karnataka.gov.in ಗೆ ಭೇಟಿ ನೀಡಬಹುದು.

ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳ ಅರ್ಹತೆ, ಮೀಸಲಾತಿ ನಿಯಮಗಳು, ಶುಲ್ಕದ ವಿವರ ಹಾಗೂ ಜಿಲ್ಲಾವಾರು ಲಭ್ಯವಿರುವ ಶಿಕ್ಷಣ ಸಂಸ್ಥೆಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಆಯಾ ಜಿಲ್ಲಾ ವ್ಯವಸ್ಥಾಪಕ ಕೇಂದ್ರಗಳಲ್ಲಿ ಸಲ್ಲಿಸಬೇಕೆಂದು ಕೇಂದ್ರೀಕೃತ ದಾಖಲಾತಿ ಘಟಕದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...