Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಿವೃತ್ತಿ ಜೀವನ ಸುಖಮಯವಾಗಿರಬೇಕಾದರೆ ಆರೋಗ್ಯಕರ ಅಭ್ಯಾಸಗಳನ್ನು ರೂಢಿಸಿಕೊಳ್ಳಿ : ನಿವೃತ್ತ ನ್ಯಾಯಾಧೀಶ ಹೆಚ್.ಬಿಲ್ಲಪ್ಪ ಸಲಹೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.05  : ನಿವೃತ್ತಿ ಜೀವನ ಸುಖಮಯವಾಗಿರಬೇಕಾದರೆ ದುಶ್ಚಟದಿಂದ ದೂರವಿದ್ದು, ಆರೋಗ್ಯಕರ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕೆಂದು ನಿವೃತ್ತ ನ್ಯಾಯಾಧೀಶರಾದ ಹೆಚ್.ಬಿಲ್ಲಪ್ಪ ನಿವೃತ್ತ ನೌಕರರಿಗೆ ಸಲಹೆ ನೀಡಿದರು.

ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ಜಿಲ್ಲಾ ಶಾಖೆ ವತಿಯಿಂದ ತ.ರಾ.ಸು.ರಂಗಮಂದಿರದಲ್ಲಿ ಶುಕ್ರವಾರ ನಡೆದ ನಿವೃತ್ತ ನೌಕರರ ದಿನಾಚರಣೆ ಹಾಗೂ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ಉದ್ಗಾಟಿಸಿ ಮಾತನಾಡಿದರು.

ಹದಿಮೂರು ವರ್ಷಗಳ ಕಾಲ ನಾನು ನ್ಯಾಯಾಧೀಶನಾಗಿದ್ದೆ. ಆಗ ಸಮಾಜದಲ್ಲಿ ಯಾರೊಂದಿಗೂ ಬೆರೆಯುವ ಅವಕಾಶವಿರುತ್ತಿರಲಿಲ್ಲ. ನಿವೃತ್ತಿಯ ನಂತರ ಎಲ್ಲರೊಂದಿಗೆ ಬೆರೆತು ಖುಷಿಯಿಂದ ಇದ್ದೇನೆ. ಅನೇಕ ಪ್ರೇಕ್ಷಣೀಯ ಸ್ಥಳಗಳನ್ನು ನೋಡುವ ಅವಕಾಶ ನಿವೃತ್ತಿಯ ನಂತರ ದೊರಕುತ್ತದೆ ಎಂದರು.

ಸರ್ಕಾರಿ ನೌಕರಿಯಿಂದ ನಿವೃತ್ತಿಯಾದೆ ಎಂದು ಯಾರು ಬೇಜಾರು ಪಟ್ಟುಕೊಳ್ಳಬಾರದು. ಸರ್ಕಾರಿ ನೌಕರಿಯಲ್ಲಿದ್ದಾಗ ಸೀಮಿತವಾದ ಎಲ್ಲೆಯಿರುತ್ತದೆ. ಅದೆ ನಿವೃತ್ತಿಯಾದ ನಂತರ ಆರಾಮಾಗಿ ಎಲ್ಲಾ ಕಡೆ ಸುತ್ತಾಡಿಕೊಂಡು ನೆಮ್ಮದಿಯಾಗಿರಬಹುದು. ನಿವೃತ್ತಿ ಜೀವನ ವೃತ್ತಿ ಜೀವನಕ್ಕಿಂತ ಅತ್ಯಂತ ವಿಶಾಲವಾದುದು. ವಯಸ್ಸು ಸಾಮಾನ್ಯವಾಗಿ ಎಲ್ಲರನ್ನು ಕಾಡುತ್ತದೆ. ಅದಕ್ಕಾಗಿ ಉತ್ತಮ ಹವ್ಯಾಸಗಳನ್ನು ಮೈಗೂಡಿಸಿಕೊಂಡರೆ ಯಾವುದೇ ರೋಗ ರುಜಿನಗಳಿಲ್ಲದೆ ಆರೋಗ್ಯವಾಗಿರಬಹುದು. ಏನನ್ನು ಖರ್ಚು ಮಾಡದೆ ಅಪಾರವಾದ ಸಂತೋಷ ಪಡುವ ಅವಕಾಶಗಳಿವೆ. ಜೀವನ ಎನ್ನುವುದು ಸುಲಭವಲ್ಲ. ಕಷ್ಟ. ಹಾಗಂತ ಎದೆಗುಂದುವುದು ಬೇಡ. ಪುಸ್ತಕಗಳ ಅಧ್ಯಯನದಿಂದ ಜೀವನಕ್ಕೆ ಉಪಯುಕ್ತವಾದ ವಿಚಾರಗಳು ಸಿಗುತ್ತವೆ ಎಂದು ನಿವೃತ್ತ ಸರ್ಕಾರಿ ನೌಕರರಿಗೆ ತಿಳಿಸಿದರು.

ನಿವೃತ್ತಿಯ ನಂತರ ಆಶಾವಾದದಿಂದ ಮುಂದೆ ಸಾಗಿ. ಹಾಸಿಗೆಯಿದ್ದಷ್ಟು ಕಾಲು ಚಾಚಬೇಕು. ಸಾಲ ಮಾಡಿಕೊಂಡು ಕಷ್ಟಪಡಬೇಡಿ. ಹಣಕಾಸಿನ ಹಿಡಿತ ನಿಮ್ಮ ಕೈಯಲ್ಲಿರಲಿ. ಊಟ ತಿಂಡಿಯಿಂದ ವಂಚಿತರಾಗಬೇಡಿ. ನಿಮಗೆ ನೀವು ನಷ್ಟ ಮಾಡಿಕೊಳ್ಳದಂತೆ ಎಚ್ಚರಿಕೆಯಿಂದಿರುವುದು ಒಳ್ಳೆಯದು ಎಂದು ಕಿವಿಮಾತು ಹೇಳಿದರು.

ನಿವೃತ್ತ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್.ರಂಗಪ್ಪರೆಡ್ಡಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತ ತ್ಯಾಗ ಮತ್ತು ಸೇವೆಯ ತಳಹದಿಯ ಮೇಲೆ ನಿವೃತ್ತ ನೌಕರರ ಸಂಘವನ್ನು ಕಟ್ಟಲಾಗಿದೆ. ಡಿ.17, 1982 ರಲ್ಲಿ ಸುಪ್ರೀಂಕೋರ್ಟ್ ಮಹತ್ತರ ತೀರ್ಪು ನೀಡಿದ್ದರಿಂದ ಅಂದಿನಿಂದ ನಿವೃತ್ತ ನೌಕರರ ದಿನಾಚರಣೆಯನ್ನು ಪ್ರತಿ ವರ್ಷವೂ ಆಚರಿಸಿಕೊಂಡು ಬರುತ್ತಿದ್ದೇವೆ. ಚಿತ್ರದುರ್ಗದಲ್ಲಿ ಸುಸಜ್ಜಿತವಾದ ನಿವೃತ್ತ ನೌಕರರ ಭವನ ನಿರ್ಮಾಣವಾಗಿದೆ. ಅಲ್ಲಿ ಒಂದೆಡೆ ನಿವೃತ್ತ ನೌಕರರೆಲ್ಲಾ ಸೇರಿ ಸಮಸ್ಯೆಗಳ ಕುರಿತು ಚರ್ಚಿಸುವುದಲ್ಲದೆ ಅನೇಕ ಮನೋರಂಜನಾ ಕಾರ್ಯಕ್ರಮಗಳನ್ನು ಆಚರಿಸಿಕೊಳ್ಳುತ್ತೇವೆಂದು ನುಡಿದರು.

ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಕಲ್ಯಾಣಾಧಿಕಾರಿ ಶ್ರೀಮತಿ ಎ.ಎಂ.ವೀಣಾ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಿದರು.

ನಿವೃತ್ತ ನೌಕರರ ಸಂಘದ ಜಿಲ್ಲಾ ಗೌರವಾಧ್ಯಕ್ಷ ವೈ.ಚಂದ್ರಶೇಖರಯ್ಯ, ಕಾರ್ಯಾಧ್ಯಕ್ಷ ಎಂ.ಶಿವಾನಂದಪ್ಪ, ಸಲಹಾ ಮಂಡಳಿ ಅಧ್ಯಕ್ಷ ಬಿ.ಬಡಮಲ್ಲಪ್ಪ, ಸಾಂಸ್ಕøತಿಕ ಹಾಗೂ ಮನೋರಂಜನಾ ಕೇಂದ್ರದ ಅಧ್ಯಕ್ಷ ಕೆ.ವಾಸುದೇವರೆಡ್ಡಿ, ಬುದ್ದ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿ ಪುರಸ್ಕøತ ಪಿ.ನಾಗರಾಜ್, ಶ್ರೀಮತಿ ಹೆಚ್.ಬಿಲ್ಲಪ್ಪ ಹಾಗೂ ಸಂಘದ ಪದಾಧಿಕಾರಿಗಳು ವೇದಿಕೆಯಲ್ಲಿದ್ದರು.
ಕಿತ್ತೂರುರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕøತೆ ಶ್ರೀಮತಿ ಮೋಕ್ಷರುದ್ರಸ್ವಾಮಿ, ಬಸವೇಶ್ವರ ಪುನರ್‍ಜ್ಯೋತಿ ಐ. ಬ್ಯಾಂಕ್‍ನ ಸ್ಥಾಪನಾ ಅಧ್ಯಕ್ಷೆ ಶ್ರೀಮತಿ ಗಾಯತ್ರಿ ಶಿವರಾಂ ಹಾಗೂ ನಾಲ್ವರು ನಿವೃತ್ತ ನೌಕರರನ್ನು ಸನ್ಮಾನಿಸಲಾಯಿತು.
ಶಿಕ್ಷಕಿ ಶೋಭ ಪ್ರಾರ್ಥಿಸಿದರು. ನಿವೃತ್ತ ಶಿಕ್ಷಕ ಮಂಜುನಾಥ್ ನಿರೂಪಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಚಿತ್ರದುರ್ಗ : ತಮಟಕಲ್ಲು ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಯಾಗಿ ಕರಡಿ ಸಾವು

ದಿನನಿತ್ಯದ ಈ ಸಣ್ಣ ತಪ್ಪುಗಳಿಂದ ಹಾಳಾಗಬಹುದು ನಿಮ್ಮ ಕಿಡ್ನಿ!

ವಿಶ್ವ ಶ್ವಾಸಕೋಶ ಕ್ಯಾನ್ಸರ್ ದಿನ: ಧೂಮಪಾನ ಮಾತ್ರವಲ್ಲ, ಈ ದೈನಂದಿನ ಅಭ್ಯಾಸಗಳೂ ಶ್ವಾಸಕೋಶದ ಆರೋಗ್ಯಕ್ಕೆ ಮಾರಕ!

ಆ..2ಕ್ಕೆ 3400 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಪರೀಕ್ಷೆ : ಅಭ್ಯರ್ಥಿಗಳಿಗೆ ಪ್ರಮುಖ ಮಾರ್ಗಸೂಚಿಗಳು ಹೀಗಿವೆ!

ಜಲಾಶಯದ ನೀರು ಇನ್ಮುಂದೆ ಕುಡಿಯಲು ಮಾತ್ರ ಕಾಯ್ದಿರಿಸಲು ಸರಕಾರದ ಆದೇಶ

ಪೇಟೆಂಟ್ ರಿಜಿಸ್ಟ್ರೇಷನ್, ಉತ್ಪನ್ನ ಅಭಿವೃದ್ಧಿ, ವಿನ್ಯಾಸ, ನವಾನ್ವೇಷಣೆ, ಸಂಶೋಧನೆಗೆ ಪ್ರೋತ್ಸಾಹ, ಪ್ರಾಯೋಗಿಕ ಬೋಧನಾ ಕೌಶಲ್ಯದ ಉನ್ನತೀಕರಣ ಹಾಗೂ ಪೋಷಕರ ಸೂಕ್ತ ಉತ್ತೇಜನದ ಮೂಲಕ ವಿದ್ಯಾರ್ಥಿಗಳ ಮಾನಸಿಕ ವಿಕಸನದೊಂದಿಗೆ ಜಾಗತಿಕ ಶೈಕ್ಷಣಿಕ ನಾಗಲೋಟಕ್ಕೆ ಹೊಂದಿಕೊಳ್ಳುವುದನ್ನು ಭಾರತದ ಎಲ್ಲಾ ವಿಶ್ವವಿದ್ಯಾಲಯಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳು ಆದ್ಯತೆಯಾಗಿಸಿಕೊಳ್ಳಬೇಕು

Leave a Comment