Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜೈಲಿನಿಂದ ಬಿಡುಗಡೆಯಾದ ನಂತರ ಮುರುಘಾಶರಣರು ಹೇಳಿದ್ದೇನು ?

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್.16 : ಫೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಮುರುಘಾಶ್ರೀಗಳು ಇಂದು ಬಿಡುಗಡೆಯಾಗಿದ್ದಾರೆ. ಸುಮಾರು 14 ತಿಂಗಳ ಬಳಿಕ ರಿಲೀಸ್ ಆಗಿದ್ದಾರೆ.

ಚಿತ್ರದುರ್ಗದಲ್ಲಿ ಪ್ರತಿಕ್ರಿಯೆ ನೀಡದ ಶರಣರು ಕಾರಾಗೃಹದಿಂದ ನೇರವಾಗಿ ದಾವಣಗೆರೆಗೆ ಪ್ರಯಾಣ ಬೆಳೆಸಿದರು. ಅಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ್ದಾರೆ.
ಈ ವೇಳೆ ಮಾತನಾಡಿರುವ ಮುರುಘಾಶ್ರೀಗಳು, ನಾನು ಈಗ ಏನು ಮಾತನಾಡುವುದಿಲ್ಲ. ಮೌನವಾಗಿರುತ್ತೇನೆ ಎಂದಿದ್ದಾರೆ.

ಮಾಧ್ಯಮದವರು ನನಗೆ ಒಳ್ಳೆಯ ಸಹಕಾರ ನೀಡಿದ್ದೀರಿ. ನಮ್ಮ ವಕೀಲರು ಹೇಳಿದ್ದನ್ನು ಪ್ರಚಾರ ಮಾಡಿದ್ದೀರಿ. ಮುಂದೆಯೂ ಒಳ್ಳೆಯ ಸಹಕಾರ ನೀಡುತ್ತೀರಿ ಎಂಬ ವಿಶ್ವಾಸವಿದೆ. ಮುಂದೆ ಒಳ್ಳೆಯ ಕೆಲಸವನ್ನೇ ಮಾಡೋಣಾ. ಸದ್ಯಕ್ಕೆ ಏನು ಮಾತಮಾಡುವುದಿಲ್ಲ. ಮೌನವಾಗಿರುತ್ತೇನೆ ಎಂದು ಹೇಳಿದರು.

ನಂತರ ಜಯದೇವ ಗದ್ದುಗೆ ದರ್ಶನ ಪಡೆದುಕೊಂಡಿದ್ದಾರೆ. ಒಂದು ವರ್ಷದ ಬಳಿಕ ಮಠದಲ್ಲಿ ಊಟ ಮಾಡಿದ್ದಾರೆ. ಈ ವೇಳೆ ಸ್ವಾಮೀಜಿಗಳನ್ನು ಭೇಟಿ ಮಾಡಲು ವೈದ್ಯರು, ವ್ಯಾಪಾರಿಗಳು ಸೇರಿದಂತೆ ನೂರಾರು ಭಕ್ತರು ಆಗಮಿಸಿ ಶ್ರೀಗಳ ದರ್ಶನ ಪಡೆದಿದ್ದಾರೆ. ಶ್ರೀಗಳು ದಾವಣಗೆರೆಯ ವಿರಕ್ತ ಮಠದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment