Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಉಕ್ರೇನ್ ಗೆ ಬೈಡನ್ ಭೇಟಿ ಬೆನ್ನಲ್ಲೇ ರಷ್ಯಾಗೆ ಚೀನಾ ಅಧ್ಯಕ್ಷರ ಭೇಟಿ ಯಾವ ಕಾರಣಕ್ಕೆ..?

---Advertisement---

ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧ ಶುರುವಾಗಿ ನಾಳೆಗೆ ಒಂದು ವರ್ಷ. ಅದೆಷ್ಟೋ ಸಾವಿರ ಜನ ಈ ಯುದ್ಧದಿಂದ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಅದೆಷ್ಟೋ ಮಕ್ಕಳು ಅನಾಥರಾಗಿದ್ದಾರೆ. ಆದ್ರೂ ಕೂಡ ಇನ್ನು ಯುದ್ಧ ನಿಂತಿಲ್ಲ. ಉಕ್ರೇನ್ ಸಣ್ಣ ದೇಶವಾದರೂ ತಮ್ಮ ಜನರನ್ನು ರಕ್ಷಿಸಿಕೊಳ್ಳಲು, ತಮ್ಮ ದೇಶ ಉಳಿಸಿಕೊಳ್ಳುವುದಕ್ಕೆ ಶಕ್ತಿ‌ಮೀರಿ ಯುದ್ಧ ನಡೆಸುತ್ತಲೇ ಇದೆ.

ಇತ್ತಿಚೆಗಷ್ಟೇ ಅಮೆರಿಕಾ ಅಧ್ಯಕ್ಷ ಜೋ ಬೈಡೆನ್ ಉಕ್ರೇನ್ ಗೆ ಭೇಟಿ ನೀಡಿ, ಯುದ್ಧಪೀಡಿತ ಪ್ರದೇಶವನ್ನು ವೀಕ್ಷಿಸಿ, ಮತ್ತಷ್ಟು ಸಹಾಯದ ಭರವಸೆಯನ್ನು ನೀಡಿ, ಹೋಗಿದ್ದರು. ಇದೀಗ ರಷ್ಯಾಗೆ ಚೀನಾ ಅಧ್ಯಕ್ಷ ಜಿನ್ ಪಿಂಗ್ ಭೇಟಿ ನೀಡುತ್ತಿದ್ದಾರೆ. ಈ ಭೇಟಿ ಹಲವು ಕುತೂಹಲಕ್ಕೆ ಕಾರಣವಾಗಿದೆ.

ಚೀನಾದ ಉನ್ನತ ಅಧಿಕಾರಿ ವಾಂಗ್ ಯಿ ಅವರು ಮಾಸ್ಕೋಗೆ ಭೇಟಿ ನೀಡಿದ್ದರು. ಈ ವೇಳೆ ಮಾತನಾಡುವಾಗ ಅಧ್ಯಕ್ಷರ ಭೇಟಿ ಬಗ್ಗೆ ಸುಳಿವು ನೀಡಿದ್ದಾರೆ. ರಷ್ಯಾ ಅಧ್ಯಕ್ಷ ಪುಟೀನ್ ಕೂಡ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಈ ಸಂಬಂಧ ವಾಲ್ ಸ್ಟ್ರೀಟ್ ಎಂಬ ಜರ್ನಲ್ ವರದಿ ಮಾಡಿದ್ದು, ಬಹುಪಕ್ಷೀಯ ಮಾತುಕತೆಗಾಗಿ ಜಿನ್ ಪಿಂಗ್ ಬರುತ್ತಿದ್ದಾರೆ. ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ನಿಲ್ಲಿಸುವ ಬಗ್ಗೆ ಪುಟೀನ್ ಜೊತೆಗೆ ಮಾತನಾಡಲಿದ್ದಾರೆ ಎನ್ನಲಾಗಿದೆ.

ಇನ್ನು ಈ ಸಂಬಂಧ ರಷ್ಯಾ ಅಧ್ಯಕ್ಷ ಪುಟೀನ್ ಮಾತನಾಡಿದ್ದು, ಎಲ್ಲವೂ ಕೂಡ ಬೆಳವಣಿಗೆಯಲ್ಲಿದೆ. ನಾವೂ ದೇಶಕ್ಕೆ ಹೊಸ ಗಡಿಯನ್ನು ಪಡೆಯುತ್ತಿದ್ದೇವೆ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...