ಲೋಕಸಭಾ ಚುನಾವಣೆಗಾಗಿ ಜೆಡಿಎಸ್, ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳುತ್ತಿದೆ. ಇದಕ್ಕೆ ಎರಡು ಪಕ್ಷದಲ್ಲೂ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಜೆಡಿಎಸ್ ಸಿದ್ಧಾಂತವೇ ಬೇರೆ, ಬಿಜೆಪಿ ಸಿದ್ಧಾಂತವೇ ಬೇರೆ ಆಗಿದೆ. ಹೀಗಾಗಿ ಹಲವರು ಮೈತ್ರಿಗೆ ವಿರೋಧಿಸುತ್ತಿದ್ದಾರೆ. ಈ ಬೆನ್ನಲ್ಲೇ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ವೈರಲ್ ಆಗುತ್ತಾ ಇದೆ. ದತ್ತ ಮಾಲೆ ಬಗ್ಗೆ ಕುಮಾರಸ್ವಾಮಿ ಅವರ ಹೇಳಿಕೆಯ ವಿಡಿಯೋ ವೈರಲ್ ಆಗುತ್ತಾ ಇದೆ.
ಸಮಯ ಬಂದರೆ ದತ್ತ ಮಾಲೆ ಹಾಕುತ್ತೇನೆ ಎಂದು ಕುಮಾರಸ್ವಾಮಿ ಅವರು ಹೇಳಿಕೆ ನೀಡಿದ್ದರು. ಆದರೆ 2018ರಲ್ಲಿ ದತ್ತಮಾಲೆಯನ್ನು ವಿರೋಧಿಸಿ ಹೇಳಿಕೆ ನೀಡಿದ್ದರು. 2018ರಲ್ಲಿ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ ಮೂಡಿಗೆರೆಯ ಅಡಂತ್ಯಾಯ ರಂಗಮಂದಿರದಲ್ಲಿ ಜೆಡಿಎಸ್ ಸಭೆ ನಡೆದಿತ್ತು. ಈ ಸಭೆಯಲ್ಲಿ ದತ್ತಮಾಲೆಯನ್ನು ವಿರೋಧಿಸುವ ಮಾತನ್ನು ಆಡಿದ್ದರು.
‘ಶ್ರೀರಾಮನ ಹೆಸರಿನಲ್ಲಿ ಪ್ರತಿ ವರ್ಷ ಮಾಲೆ ಬೇರೆ ಹಾಕುತ್ತಾರೆ. ಮಾಲೆ ಹಾಕಿಕೊಂಡಿ, ತಾಳ ಬಡಿದುಕೊಂಡು ಚಿಕ್ಕಮಗಳೂರಿನ ಬೀದ ಬೀದಿಯಲ್ಲಿ ಹೋಗುತ್ತಾರೆ. ಅದನ್ನು ನೀವೂ ಮೆಚ್ಚಿಕೊಳ್ಳುತ್ತೀರಾ..? ಭಿಕ್ಷೆ ಬೇರೆ ಬೇಡುತ್ತಾರೆ. ಅದೆಂಥದ್ದೋ ದತ್ತಮಾಲೆ ಹಾಕಿಕೊಂಡು ಮನೆ ಮನೆಗೆ ಹೋಗಿ ಭಿಕ್ಷೆ ಬೇಡುತ್ತಾರೆ. ದೇವರೇ ಕಾಪಾಡಬೇಕು. ಇದೆಲ್ಲ ಬೇಡ ನಮಗೆ. ಮೊದಲು ನೀವೂ ಉಳಿದರೆ ತಾನೇ ದೇವರನ್ನು ಉಳಿಸಲು ಸಾಧ್ಯ’ ಎಂಬ ಹೇಳಿಕೆಯನ್ನು ನೀಡಿದ್ದರು. ಈ ಹೇಳಿಕೆ ಹಿಂದೂ ಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿತ್ತು.
ಇದೀಗ ಕುಮಾರಸ್ವಾಮಿ ಅವರು ತಮ್ಮ ನಿಲುವನ್ನೇ ಬದಲಾತಿಸುವಂತ ಹೇಳಿಕೆ ನೀಡಿದ್ದಾರೆ. ದತ್ತಮಾಲೆ ಯಾಕೆ ಹಾಕಬಾರದು..? ದೇವರ ಕಾರ್ಯಕ್ರಮ ಹಾಕುವ ಸಮಯ ಬಂದರೆ ದತ್ತಮಾಲೆ ಹಾಕುತ್ತೇನೆ. ನಮ್ಮ ಧರ್ಮದ ಧರ್ಮಾಭಿಮಾನಕ್ಕೆ ಭಯ ಪಡುತ್ತೀನಾ ಎಂದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












