ಚಿತ್ರದುರ್ಗ : ಇಂದು ಜಿಲ್ಲೆಯ ವಾಣಿ ವಿಲಾಸ ಜಲಾಶಯಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಬಾಗಿನ ಅರ್ಪಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, 89 ವರ್ಷಗಳ ಬಳಿಕ ಕೋಡಿ ಬಿದ್ದಿರುವ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಜಲಾಶಯಕ್ಕೆ ಬಾಗಿನ ಅರ್ಪಿಸುವ ಸೌಭಾಗ್ಯ ನನಗೆ ಸಿಕ್ಕಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಸ್ವಾತಂತ್ರ ಸಿಕ್ಕ ಬಳಿಕ ಬಾಗಿನ ಬಿಡುವ ಸೌಭಾಗ್ಯ ನನಗೆ ಸಿಕ್ಕಿದೆ. ಇದೊಂದು ಐತಿಹಾಸಿಕ ಕ್ಷಣ. ಮೈಸೂರು ಮಹಾರಾಜರ ಕಾಲದಲ್ಲಿ ಕಟ್ಟಿರುವ ಜಲಾಶಯವಿದು. 89 ವರ್ಷಗಳ ಬಳಿಕ ಡ್ಯಾಂ ಕೋಡಿ ಬಿದ್ದಿದೆ. ಇದನ್ನು ತುಂಬಿಸುವ ಮೂಲಕ ಚಿತ್ರದುರ್ಗ ಜಿಲ್ಲೆಗೆ ಕುಡಿಯುವ ನೀರು ಮತ್ತು ನೀರಾವರಿ ಸೌಲಭ್ಯ ನೀಡಿದ್ದೇವೆ. ಅಂದಿನ ಮೈಸೂರು ಮಹಾರಾಜರ ದೂರದೃಷ್ಟಿಯಿಂದ ಈ ಜಲಾಶಯ ನಿರ್ಮಾಣವಾಗಿದೆ.

ಆರ್ಥಿಕ ಸಂಕಷ್ಟ ಇದ್ದರೂ ಮಹಾರಾಜರು ತಮ್ಮ ಮನೆತನದ ಒಡವೆಗಳನ್ನು ಮಾರಿ ಡ್ಯಾಂ ನಿರ್ಮಾಣ ಮಾಡಿದ್ದಾರೆ. ರಾಜ್ಯದ ಜನತೆಯ ಪರವಾಗಿ ಒಡೆಯರ್ ಮನೆತನಕ್ಕೆ ಧನ್ಯವಾದ ಅರ್ಪಿಸಿದರು ಎಂದಿದ್ದಾರೆ.

