ಬೆಂಗಳೂರು: ಚಿನ್ನ ಬೆಳ್ಳಿ ಎರಡರಲ್ಲೂ ಏರಿಕೆಯಾಗುತ್ತಲೆ ಇತ್ತು. ಇನ್ನು ಚಿನ್ನದ ಮೇಲೆ ಹೇಗಪ್ಪ ಇನ್ವೆಸ್ಟ್ ಮಾಡೋದು ಅಂದುಕೊಳ್ಳುವಾಗಲೇ ಚಿನ್ನದ ದರದಲ್ಲಿ ಇಂದು ಇಳಿಕೆಯಾಗಿದೆ. ಒಂದು ಗ್ರಾಂಗೆ ಸುಮಾರು 40 ರೂಪಾಯಿಯಷ್ಟು ಇಳಿಕೆಯಾಗಿದೆ. ಈ ಮೂಲಕ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರ 22 ಕ್ಯಾರಟ್ ನ ಒಂದು ಗ್ರಾಂ 7,705 ರೂಪಾಯಿ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನ 8,405 ರೂಪಾಯಿ ಇದೆ. 22 ಕ್ಯಾರಟ್ ಹತ್ತು ಗ್ರಾಂಗೆ 77,050 ರೂಪಾಯಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನ 74,050 ರೂಪಾಯಿ ಆಗಿದೆ.
ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ, ಬೆಂಗಳೂರು, ಚೆನ್ನೈ, ಕೇರಳ, ಹೈದ್ರಾಬಾದ್, ಕೊಲ್ಕತ್ತಾ, ಮುಂಬೈ ನಗರದಲ್ಲಿ 77,050 ರೂಪಾಯಿ ಒಂದು ಗ್ರಾಂ ಚಿನ್ನದ ಬೆಲೆಯಾಗಿದೆ. ದಿಲ್ಲಿಯಲ್ಲಿ 77,200 ರೂಪಾಯಿ ಇದೆ. ಇನ್ನು ವಿದೇಶಗಳಲ್ಲಿ ಚಿನ್ನದ ದರ ಹೀಗಿದೆ. ದುಬೈನಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನ 74,530 ರೂಪಾಯಿ ಇದೆ. ಅಮೆರಿಕಾದಲ್ಲಿ 68,020 ಇದೆ. ಸೌದಿಯಲ್ಲಿ 74,400 ಇದೆ.
ಇನ್ನು ಬೆಳ್ಳಿ ಬೆಲೆಯಲ್ಲಿ ಯಥಾಸ್ಥಿತಿ ಕಾಪಾಡಿಕೊಂಡಿದೆ. ಇಂದಿನ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಬೆಳ್ಳಿ ಬೆಲೆ 99.50 ರೂಪಾಯಿ ಆಗಿದೆ. ಹಾಗೇ 100 ಗ್ರಾಂ ಬೆಳ್ಳಿಯ ಬೆಲೆ 9,950 ರೂಪಾಯಿ ಇದೆ. ಚೆನ್ನೈ, ದೆಹಲಿ, ಕೊಲ್ಕತ್ತಾ, ಅಹ್ಮದಾಬಾದ್, ಜೈಪುರ, ಲಕ್ನೋ, ಪುಣೆ ನಗರದಲ್ಲಿ ಬೆಳ್ಳಿಯ ಬೆಲೆ 9,950 ಇದ್ರೆ, ಕೇರಳ, ಭುವನೇಶ್ವರ, ಚೆನ್ನೈನಲ್ಲಿ 10,700 ರೂಪಾಯಿ ಇದೆ.
ಸುದ್ದಿಒನ್ ಮಹಾಕುಂಭ ಮೇಳದಲ್ಲಿ ಮೌನಿ ಅಮವಾಸ್ಯೆಯ ದಿನ ನಡೆದ ಕಾಲ್ತುಳಿತದ ಬಗ್ಗೆ ಪ್ರತಿಪಕ್ಷಗಳು ಸಂಸತ್ತಿನಲ್ಲಿ ಧ್ವನಿ ಎತ್ತಿವೆ. ಈ…
ಶಿವಮೊಗ್ಗ: ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ. ಬಿವೈ ವಿಜಯೇಂದ್ರ ಅವರನ್ನು ದ್ವೇಷಿಸುವ, ಆ ಸ್ಥಾನದಿಂದ ಕೆಳಗಿಳಿಸಬೇಕೆಂದು ಯತ್ನಾಳ್…
ಸುದ್ದಿಒನ್ : ಪ್ರತಿಷ್ಠಿತ ಐಸಿಸಿ ಅಂಡರ್-19 ಮಹಿಳಾ ಟಿ20 ವಿಶ್ವಕಪ್ ಅನ್ನು ಭಾರತ ತಂಡ ಎರಡನೇ ಬಾರಿಗೆ ಗೆದ್ದುಕೊಂಡಿದೆ. ಕೌಲಾಲಂಪುರದ…
ಬೆಂಗಳೂರು: ಚಿನ್ನ ಬೆಳ್ಳಿ ಎರಡರಲ್ಲೂ ಏರಿಕೆಯಾಗುತ್ತಲೆ ಇತ್ತು. ಇನ್ನು ಚಿನ್ನದ ಮೇಲೆ ಹೇಗಪ್ಪ ಇನ್ವೆಸ್ಟ್ ಮಾಡೋದು ಅಂದುಕೊಳ್ಳುವಾಗಲೇ ಚಿನ್ನದ…
ದಾವಣಗೆರೆ: ಈಗಂತೂ ಲಂಚದ ಹಿಂದೆ ಸಾಕಷ್ಟು ಅಧಿಕಾರಿಗಳು ಬಿದ್ದಿದ್ದಾರೆ. ಯಾವೂ ಮಾಡುವ ಹುದ್ದೆಯಲ್ಲಿ ಎಲ್ಲೆಲ್ಲಿ ಲಂಚ ಸ್ವೀಕಾರ ಮಾಡುವುದಕ್ಕೆ ಅವಕಾಶವಿದೆಯೋ…
ಈ ರಾಶಿಯವರನ್ನು ಪ್ರೀತಿಸುವ ಮುನ್ನ ಎಚ್ಚರದಿಂದಿರಿ, ಸೋಮವಾರದ ರಾಶಿ ಭವಿಷ್ಯ 03 ಫೆಬ್ರವರಿ 2025 ಸೂರ್ಯೋದಯ - 6:51 AM…