ನವದೆಹಲಿ: ತಣ್ಣಗಾಗಿದ್ದ ಕೊರೊನಾ ಕೇಸ್ ಇದೀಗ ಮತ್ತೆ ಹೆಚ್ಚಳವಾಗುವ ಸಾಧ್ಯತೆ ಕಾಣಿಸುತ್ತಿದೆ. ನಿನ್ನೆ ಒಂದೇ ದಿನ ನವದೆಹಲಿಯಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೂ ಕೊರೊನಾ ಪಾಸಿಟಿವ್ ಆಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬೆನ್ನಲ್ಲೆ ಪ್ರಿಯಾಂಕ ಗಾಂಧಿ ವಾದ್ರಾಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಪ್ರಿಯಾಂಕ ಗಾಂಧಿ ವಾದ್ರಾ, ಕೊರೊನಾ ಸೌಮ್ಯ ಲಕ್ಷಣಗಳೊಂದಿಗೆ ಕೊರೊನಾ ಪಾಸಿಟಿವ್ ಆಗಿದೆ. ನನ್ನ ಜೊತೆ ಸಂಪರ್ಕದಲ್ಲಿದ್ದ ಎಲ್ಲರೂ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಪ್ರಿಯಾಂಕ ಗಾಂಧಿ ಟ್ವೀಟ್ ಮಾಡಿ ಮಾಹಿತಿ ತಿಳಿಸಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಹಗರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಇಡಿ ಸಮನ್ಸ್ ಜಾರಿ ಮಾಡಿದೆ. ಇದೇ ಬೆನ್ನಲ್ಲೇ ಸೋನಿಯಾ ಗಾಂಧಿಗೆ ಕೊರೊನಾ ಪಾಸಿಟಿವ್ ಆಗಿದ್ದು, ರಾಹುಲ್ ಗಾಂಧಿ ಪ್ರವಾಸದಲ್ಲಿದ್ದಾರೆ. ಹೀಗಾಗಿ ರಾಹುಲ್ ಗಾಂಧಿಗೆ ಮತ್ತೊಂದು ದಿನ ಹಾಜರಾಗುವಂತೆ ಹೊಸ ಸಮನ್ಸ್ ನೀಡಿದೆ. ಸೋನಿಯಾ ಗಾಂಧಿ ಅವರು ಕೊರೊನಾದಿಂದ ಗುಣಮುಖರಾದ ಬಳಿನ ಮತ್ತೆ ಸಮನ್ಸ್ ನೀಡುವ ಸಾಧ್ಯತೆ ಇದೆ.