ನವದೆಹಲಿ: ರಾಜೀವ್ ಗಾಂಧಿ ಹಂತಕ ಎ ಜೆ ಪೆರಾರಿವಾಲನ್ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಸುಮಾರು 31 ವರ್ಷಗಳಿಂದ ಜೈಲಿನಲ್ಲಿದ್ದ ಪೆರಾರಿವಾಲನ್ ಗೆ ಸುಪ್ರೀಂ ಕೋರ್ಟ್ ಇಂದು ಬಿಡುಗಡೆ ಆದೇಶ ಹೊರಡಿಸಿದೆ. ಆರ್ಟಿಕಲ್ 142ರ ಅಡಿಯಲ್ಲಿ ಬಿಡುಗಡೆ ಮಾಡಲು ಸೂಚನೆ ನೀಡಿದೆ.
ಪೆರಾರಿವಾಲನ್ ಸದ್ಯ ಜಾಮೀನಿನ ಮೇಲೆ ಹೊರಗಿದ್ದಾನೆ. ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳ ಕ್ಷಮದಾನ ಅರ್ಜಿಯ ವಿಚಾರಣೆ ಕೂಡ ನಡೆಯುತ್ತಿದೆ. ಈ ಮಧ್ಯೆ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ಬಿಡುಗಡೆಗೊಳಿಸಿದೆ.
ಪೆರಾರಿವಾಲನ್ ಕೋರ್ಟ್ ಗೆ ಮನವಿ ಸಲ್ಲಿಸಿದ್ದನು. ನಾನು 31 ವರ್ಷಗಳಿಂದ ಜೈಲಿನಲ್ಲಿದ್ದೇನೆ, ನನ್ನನ್ನು ಬಿಡುಗಡೆ ಮಾಡಬೇಕು ಎಂದು ಕೋರ್ಟ್ ಗೆ ಮನವಿ ಸಲ್ಲಿಸಿದ್ದನು. ಮೇ 10 ರಂದು ಆತನ ಮೇಲಿನ ವಿಚಾರಣೆಯನ್ನು ಅಂತ್ಯಗೊಳಿಸಿ, ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಆರ್ಟಿಕಲ್ 142 ಅಡಿಯಲ್ಲು ಬಿಡುಗಡೆ ಮಾಡಲು ಸುಪ್ರೀಂ ಸೂಚಿಸಿದೆ.
ವಿಚಾರಣ ವೇಳೆ ರಾಜ್ಯಪಾಲರು ಸಂಪುಟದ ಅನುಮೋದನೆಯ ವಿರುದ್ಧವಾಗಿ ಹೋಗಬಹುದೇ ಎಂಬುದು ಕಾನೂನು ಮತ್ತು ಸಾಂವಿಧಾನಿಕ ಪ್ರಶ್ನೆಯಾಗಿದೆ. ಅಲ್ಲದೆ ಇದೊಂದು ಗಂಭೀರವಾದ ವಿಚಾರ. ಫೆಡರಲ್ ವ್ಯವಸ್ಥೆ ಮೇಲೆ ಪರಿಣಾಮವನ್ನು ಬೀರಬಹುದು. ಇದರಿಂದ ಒಕ್ಕೂಟ ವ್ಯವಸ್ಥೆ ನಾಶವಾಗಬಹುದು. ಯಾರೂ ಕಾನೂನಿಗಿಂತ ಮೇಲಲ್ಲ. ಸರ್ಕಾರದ ನಮ್ಮ ಆದೇಶವನ್ನು ಪಾಲಿಸಬೇಕು ಎಂದು ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ ತಿಳಿಸಿತ್ತು.