Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕುಂಭಮೇಳದಲ್ಲಿ ಅಗ್ನಿ ಅವಗಢ : ಈಗ ಹೇಗಿದೆ..?

---Advertisement---

ಪ್ರಯಾಗ್ ರಾಜ್ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮಹಾ ಕುಂಭಮೇಳ ನಡೆಯುತ್ತಿದೆ. ಇದರ ನಡುವೆಯೇ ಭಾರೀ ಅಗ್ನಿ ಅವಗಢವೊಂದು ಸಂಭವಿಸಿದೆ. ಐತಿಹಾಸಿಕ ಕುಂಭಮೇಳದಲ್ಲಿ ಸಾಕ್ಷಿ ಬ್ರಿಡ್ಜ್ ಸೆಕ್ಟರ್ 19ರಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೊತ್ತಿಕೊಳ್ಳುತ್ತಿರೋ ವಿಡಿಯೋ ಕೂಡ ಸಿಕ್ಕಾಪಟ್ಟೆ ವೈರಲ್ ಆಗ್ತಾ ಇದೆ.

ಸಾಧು ಸಂತರು ಅಡುಗೆ ಮಾಡುವಾಗ ಇದ್ದಕ್ಕಿದ್ದ ಹಾಗೇ ಸಿಲಿಂಡರ್ ಸ್ಪೋಟಗೊಂಡಿದೆ ಎನ್ನಲಾಗಿದೆ. ಇದರಿಂದಾಗಿಯೇ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಮೊದಲು ಒಂದು ಟೆಂಟ್ ನಲ್ಲಿ ಹೊತ್ತಿಕೊಂಡ ಬೆಂಕಿ ನೋಡ ನೋಡುತ್ತಲೇ ಅಕ್ಕ ಪಕ್ಕದ 25ಕ್ಕೂ ಹೆಚ್ಚು ಟೆಂಟ್ ಗಳಿಗೂ ವ್ಯಾಪಿಸಿದೆ. ಇದರ ಪರಿಣಾಮ ಟೆಂಟ್ ನಲ್ಲಿದ್ದ ಸಿಲಿಂಡರ್ ಗಳು ಸ್ಪೋಟಗೊಳ್ಳುವುದಕ್ಕೆ ಶುರುವಾಗಿದ್ದು, ಬೆಂಕಿ ಇನ್ನಷ್ಟು ಹೆಚ್ಚಾಗಿದೆ. ಭಾರೀ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಇದರಿಂದ ಹಲವು ವಾಹನಗಳು ಸುಟ್ಟು ಭಸ್ಮವಾಗಿವೆ. ಈ ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು, ಅಗ್ನಿಶಾಮಕ ದಳದವರನ್ನು ಕರೆಸಿದ್ದಾರೆ. ತಕ್ಷಣ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. 6ಕ್ಕೂ ಹೆಚ್ಚು ಅಗ್ನಿ ಶಾಮಕ ದಳದ ವಾಹನಗಳು ಸ್ಥಳಕ್ಕೆ ಬಂದಿದ್ದು ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

ಮಹಾಕುಂಭಮೇಳದ ಬಗ್ಗೆ ಜನರಿಗೆ ಅಪಾರ ನಂಬಿಕೆ ಇದೆ. ಈ ಸಲ ಅಂತೂ ಕೋಟ್ಯಾಂತರ ಭಕ್ತರು ಪ್ರಯಾಗ್ ರಾಜ್ ನಲ್ಲಿ ಸೇರಿದ್ದಾರೆ. ಸಾಧು ಸಂತರು ಬಂದಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಮುಳುಗಿ ಪುನೀತರಾಗಲು ದೇಶದ ಮೂಲೆ ಮೂಲೆಯಿಂದಾನೂ ಜನ ಕುಂಭಮೇಳದಲ್ಲಿ ಭಾಗಿಯಾಗಿದ್ದಾರೆ. ಈ ಹೊತ್ತಲ್ಲಿಯೇ ಇಂಥ ದೊಡ್ಡ ಅನಾಹುತವಾಗಿರೋದು ಅಲ್ಲಿನ ಭಕ್ತರಿಗೂ ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...