ನವದೆಹಲಿ: ಕೇಂದ್ರ ಸರ್ಕಾರ ಇತ್ತಿಚೆಗೆ ಅನೌನ್ಸ್ ಮಾಡಿದ ಅಗ್ನಿಪಥ್ ಯೋಜನೆಯ ವಿರುದ್ಧದ ಹಿಂಸಾತ್ಮಕ ಪ್ರತಿಭಟನೆಗಳು ಶುಎಉವಾಗಿದೆ. ಇದನ್ನು ತಡೆಯಲು ಹರಿಯಾಣ ಸರ್ಕಾರ ಮೊಬೈಲ್ ಇಂಟರ್ನೆಟ್ ಸೇವೆಗಳು ಮತ್ತು ಎಲ್ಲಾ SMS ಸೇವೆಗಳನ್ನು ಸ್ಥಗಿತಗೊಳಿಸಲು ಆದೇಶಿಸಿದೆ. ಮುಂದಿನ 24 ಗಂಟೆಗಳ ಕಾಲ ಇಂಟರ್ ನೆಟ್ ಸಿಗುವುದಿಲ್ಲ.
ಮೊಬೈಲ್ ಇಂಟರ್ನೆಟ್ ಸೇವೆಗಳು, ಎಲ್ಲಾ SMS ಸೇವೆಗಳು ಮತ್ತು ಧ್ವನಿ ಕರೆಗಳನ್ನು ಹೊರತುಪಡಿಸಿ ಮೊಬೈಲ್ ನೆಟ್‌ವರ್ಕ್‌ಗಳಲ್ಲಿ ಒದಗಿಸಲಾದ ಎಲ್ಲಾ ಡಾಂಗಲ್ ಸೇವೆಗಳನ್ನು ಮುಂದಿನ 24 ಗಂಟೆಗಳ ಕಾಲ ಜೂನ್ 17, 4.30 ರಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಮೊಬೈಲ್ ಫೋನ್‌ಗಳಲ್ಲಿ ವಾಟ್ಸಾಪ್, ಫೇಸ್‌ಬುಕ್, ಟ್ವಿಟರ್, ಇತ್ಯಾದಿ ಸಾಮಾಜಿಕ ಮಾಧ್ಯಮಗಳ ಮೂಲಕ ವದಂತಿಗಳು, ತಪ್ಪು ಮಾಹಿತಿಗಳು ಹಬ್ಬುತ್ತಿದೆ. ಇದನ್ನು ನಿಲ್ಲಿಸಲು ಸರ್ಕಾರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬೆಂಕಿ ಹಚ್ಚುವಿಕೆ ಅಥವಾ ವಿಧ್ವಂಸಕ ಕೃತ್ಯಗಳು ಮತ್ತು ಇತರ ರೀತಿಯ ಹಿಂಸಾತ್ಮಕ ಚಟುವಟಿಕೆಗಳಲ್ಲಿ ತೊಡಗುವ ಮೂಲಕ ಆಸ್ತಿಗಳು ನಾಶಗೊಳಿಸದಂತೆ ಎಚ್ಚರಿಕೆಯನ್ನು ನೀಡಲಾಗಿದೆ.
ಜೂನ್ 14 ರಂದು ಕೇಂದ್ರ ಸಚಿವ ಸಂಪುಟವು ಅನುಮೋದಿಸಿದ ಭಾರತೀಯ ಸಶಸ್ತ್ರ ಪಡೆಗಳಿಗೆ ಅಗ್ನಿಪಥ್ ಸ್ಕೀಮ್ ನೇಮಕಾತಿಯ ವಿರುದ್ಧ ಪ್ರತಿಭಟನೆಗಳು ಶುರುವಾಗಿತ್ತು. ಪ್ರತಿಭಟನೆಗಳು ಇದಿಒಗ ಹಿಂಸಾತ್ಮಕವಾಗಿ ತಿರುಗುತ್ತಿವೆ.