Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

Agnipath’ Protests LIVE Updates:ಅಗ್ನಿಪಥ್ ಪ್ರತಿಭಟನೆ ಹಿನ್ನೆಲೆ: ಮೊಬೈಲ್ ಇಂಟರ್‌ನೆಟ್, ಎಸ್‌ಎಂಎಸ್ ಸೇವೆ ಸ್ಥಗಿತಗೊಳಿಸಿದ ಹರಿಯಾಣ ಸರ್ಕಾರ

Facebook
Twitter
Telegram
WhatsApp

ನವದೆಹಲಿ: ಕೇಂದ್ರ ಸರ್ಕಾರ ಇತ್ತಿಚೆಗೆ ಅನೌನ್ಸ್ ಮಾಡಿದ ಅಗ್ನಿಪಥ್ ಯೋಜನೆಯ ವಿರುದ್ಧದ ಹಿಂಸಾತ್ಮಕ ಪ್ರತಿಭಟನೆಗಳು ಶುಎಉವಾಗಿದೆ. ಇದನ್ನು ತಡೆಯಲು ಹರಿಯಾಣ ಸರ್ಕಾರ ಮೊಬೈಲ್ ಇಂಟರ್ನೆಟ್ ಸೇವೆಗಳು ಮತ್ತು ಎಲ್ಲಾ SMS ಸೇವೆಗಳನ್ನು ಸ್ಥಗಿತಗೊಳಿಸಲು ಆದೇಶಿಸಿದೆ. ಮುಂದಿನ 24 ಗಂಟೆಗಳ ಕಾಲ ಇಂಟರ್ ನೆಟ್ ಸಿಗುವುದಿಲ್ಲ.

ಮೊಬೈಲ್ ಇಂಟರ್ನೆಟ್ ಸೇವೆಗಳು, ಎಲ್ಲಾ SMS ಸೇವೆಗಳು ಮತ್ತು ಧ್ವನಿ ಕರೆಗಳನ್ನು ಹೊರತುಪಡಿಸಿ ಮೊಬೈಲ್ ನೆಟ್‌ವರ್ಕ್‌ಗಳಲ್ಲಿ ಒದಗಿಸಲಾದ ಎಲ್ಲಾ ಡಾಂಗಲ್ ಸೇವೆಗಳನ್ನು ಮುಂದಿನ 24 ಗಂಟೆಗಳ ಕಾಲ ಜೂನ್ 17, 4.30 ರಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮೊಬೈಲ್ ಫೋನ್‌ಗಳಲ್ಲಿ ವಾಟ್ಸಾಪ್, ಫೇಸ್‌ಬುಕ್, ಟ್ವಿಟರ್, ಇತ್ಯಾದಿ ಸಾಮಾಜಿಕ ಮಾಧ್ಯಮಗಳ ಮೂಲಕ ವದಂತಿಗಳು, ತಪ್ಪು ಮಾಹಿತಿಗಳು ಹಬ್ಬುತ್ತಿದೆ. ಇದನ್ನು ನಿಲ್ಲಿಸಲು ಸರ್ಕಾರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬೆಂಕಿ ಹಚ್ಚುವಿಕೆ ಅಥವಾ ವಿಧ್ವಂಸಕ ಕೃತ್ಯಗಳು ಮತ್ತು ಇತರ ರೀತಿಯ ಹಿಂಸಾತ್ಮಕ ಚಟುವಟಿಕೆಗಳಲ್ಲಿ ತೊಡಗುವ ಮೂಲಕ ಆಸ್ತಿಗಳು ನಾಶಗೊಳಿಸದಂತೆ ಎಚ್ಚರಿಕೆಯನ್ನು ನೀಡಲಾಗಿದೆ.

ಜೂನ್ 14 ರಂದು ಕೇಂದ್ರ ಸಚಿವ ಸಂಪುಟವು ಅನುಮೋದಿಸಿದ ಭಾರತೀಯ ಸಶಸ್ತ್ರ ಪಡೆಗಳಿಗೆ ಅಗ್ನಿಪಥ್ ಸ್ಕೀಮ್ ನೇಮಕಾತಿಯ ವಿರುದ್ಧ ಪ್ರತಿಭಟನೆಗಳು ಶುರುವಾಗಿತ್ತು. ಪ್ರತಿಭಟನೆಗಳು ಇದಿಒಗ ಹಿಂಸಾತ್ಮಕವಾಗಿ ತಿರುಗುತ್ತಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆಯಲ್ಲಿ ಮತದಾನ ಮಾಡಿದ ಶತಾಯುಷಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ರಾಜ್ಯದಲ್ಲಿ ಇಂದು ಲೋಕಸಭಾ ಚುನಾವಣೆ  ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಯುವಕ –

ಚಿತ್ರದುರ್ಗದಲ್ಲಿ‌ ಆರಂಭಗೊಂಡ ಮತದಾನ ಪ್ರಕ್ರಿಯೆ : ಬೆಳ್ಳಂಬೆಳಿಗ್ಗೆಯೇ ಸಾಲುಗಟ್ಟಿ ನಿಂತ ಮತದಾರರು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ಚಿತ್ರದುರ್ಗ ನಗರದ ವಿಪಿ ಬಡಾವಣೆಯ

ಮತ ಚಲಾಯಿಸಲು ಯಾವ ದಾಖಲೆಗಳು ಬೇಕು ? ಇಲ್ಲಿದೆ ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ :  ಮತದಾನ ಮಾಡಲು ಮತದಾರನು ಎಪಿಕ್ (ಆಧಾರ್) ಕಾರ್ಡ್ ಇಲ್ಲವೆಂದು ಚಿಂತಿಸಬೇಕಿಲ್ಲಾ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಯಾವೊಬ್ಬ ಮತದಾರನು ಮತದಾನದಿಂದ ವಂಚಿತರಾಗಬಾರದು ಎಂಬ ದೃಷ್ಠಿಯಿಂದ ಚುನಾವಣಾ ಆಯೋಗವು ಎಪಿಕ್ ಕಾರ್ಡ್ ಹೊರತುಪಡಿಸಿ 12

error: Content is protected !!