ಸುದ್ದಿಒನ್, ಚಿತ್ರದುರ್ಗ,(ಆ.25) : ರಾಜ್ಯ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಇದೇ ಆಗಸ್ಟ್ 29ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಆಗಸ್ಟ್ 29ರಂದು ಬೆಳಿಗ್ಗೆ 7 ಗಂಟೆಗೆ ಬೆಂಗಳೂರಿನಿಂದ ಹೊರಟು ಬೆಳಿಗ್ಗೆ 9.30ಕ್ಕೆ ಚಿತ್ರದುರ್ಗ ಸರ್ಕಾರಿ ಪ್ರವಾಸಿ ಮಂದಿರಕ್ಕೆ ಆಗಮಿಸುವರು. ನಂತರ ಬೆಳಿಗ್ಗೆ 10 ಗಂಟೆಗೆ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಜಿಲ್ಲೆಯ ಕೃಷಿ ಇಲಾಖಾ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಬೆಳಿಗ್ಗೆ 10.45ಕ್ಕೆ ಪಕ್ಷದ ಕಚೇರಿಗೆ ಭೇಟಿ ನೀಡುವರು.
ಬೆಳಿಗ್ಗೆ 11.15ಕ್ಕೆ ಚಿತ್ರದುರ್ಗ ತಾಲ್ಲೂಕಿನ ದೊಡ್ಡಸಿದ್ದವನಹಳ್ಳಿಯಲ್ಲಿ ಸಾವಯವ ಹಾಗೂ ಸಮಗ್ರ ಕೃಷಿ ತೋಟ ವೀಕ್ಷಣೆ ಮಾಡುವರು.
ಬೆಳಿಗ್ಗೆ 11.30ಕ್ಕೆ ಚಿತ್ರದುರ್ಗ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದ ಮೆಕ್ಕೆಜೋಳ ಹಾನಿಗೊಳಗಾದ ತಾಕುಗಳ ವೀಕ್ಷಣೆ ಮಾಡುವರು. ಮಧ್ಯಾಹ್ನ 12ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿರುವ ತುಂತುರು ನೀರಾವರಿ ಯಂತ್ರಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಮಧ್ಯಾಹ್ನ 12.15 ರಿಂದ 1.15 ರವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೃಷಿ ತಜ್ಞರು, ಪ್ರಗತಿಪರ ಕೃಷಿಕರು, ಕೃಷಿ ಸಾಧಕರು ಹಾಗೂ ಎಫ್‍ಪಿಒ ರೈತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 1.15ಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸುದ್ದಿಗೊಷ್ಠಿ ನಡೆಸುವರು.
ಮಧ್ಯಾಹ್ನ 2.15ಕ್ಕೆ ಚಿತ್ರದುರ್ಗದಿಂದ ನಿರ್ಗಮಿಸಿ, ಮಧ್ಯಾಹ್ನ 2.30ಕ್ಕೆ ಚಳ್ಳಕೆರೆ ತಾಲ್ಲೂಕಿನ ಕಾಲುವೇಹಳ್ಳಿ ಗ್ರಾಮದ ಹೊಲಗಳಲ್ಲಿ ಲೇಜರ್ ತಂತ್ರಜ್ಞಾನದಿಂದ ಡ್ರಿಪ್ ಅಳವಡಿಕೆ ಮಾಡಿದ ಮೆಕ್ಕೆಜೋಳ ಕ್ಷೇತ್ರದ ವೀಕ್ಷಣೆ ಮಾಡುವರು.
ಮಧ್ಯಾಹ್ನ 3.15ಕ್ಕೆ ಚಳ್ಳಕೆರೆ ತಾಲ್ಲೂಕಿನ ಜುಂಜರಗುಂಟೆ ಗ್ರಾಮದ ಶೇಂಗಾ ಬೆಳೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡುವರು.
3.30ಕ್ಕೆ ಚಳ್ಳಕೆರೆ ತಾಲ್ಲೂಕಿನ ಚೌಳೂರು ಸಮೀಪದ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣದ ನಂತರ ಆಗಿರುವ ಬೆಳೆ ಪರಿವರ್ತನೆಯಾದ ತಾಕುಗಳಿಗೆ ಭೇಟಿ ನೀಡುವರು.
ಸಂಜೆ 4 ಗಂಟೆಗೆ ಮೈಸೂರಿಗೆ ಪ್ರಯಾಣ ಬೆಳೆಸುವರು ಎಂದು ಕೃಷಿ ಸಚಿವರ ಆಪ್ತ ಕಾರ್ಯದರ್ಶಿ ಹೆಚ್.ಜಿ.ಪ್ರಭಾಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.