Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಬೆಂಬಲ ಬೆಲೆಯಡಿ ಸಿರಿಧಾನ್ಯ ಖರೀದಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

---Advertisement---

 

ಚಿತ್ರದುರ್ಗ.ಜ.17: ಬೆಂಬಲ ಬೆಲೆಯಡಿ ಸಿರಿಧಾನ್ಯಗಳನ್ನು ಖರೀದಿಸಲು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರದಿಂದ ಪತ್ರ ಬರೆದು ಶಿಫಾರಸ್ಸು ಮಾಡಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರ ಹೋಬಳಿಯ ಮಲ್ಲಿಹಳ್ಳಿ ಗ್ರಾಮದ ಕೃಷಿಕ ಪ್ರಭುಲಿಂಗಪ್ಪ ಹಾಗೂ ಮಹೇಶ್ ಅವರ ಸಿರಿಧಾನ್ಯ ರೈತರ ಒಕ್ಕಲು ಕಣ ಹಾಗೂ ಕ್ಷೇತ್ರಕ್ಕೆ ಶುಕ್ರವಾರ ಭೇಟಿ ನೀಡಿದ ಅವರು ರೈತರೊಂದಿಗೆ ಸಂವಾದ ನಡೆಸಿ, ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಹೊಸದುರ್ಗ ತಾಲ್ಲೂಕಿನಲ್ಲಿ ರಾಜ್ಯದಲ್ಲಿ ಅತಿ‌ಹೆಚ್ಚು ಸಿರಿಧಾನ್ಯ ಬೆಳೆ ಬೆಳೆಯಲಾಗುತ್ತದೆ. ಈ ಭಾಗದಲ್ಲಿ ಸಾಂಪ್ರದಾಯಿಕವಾಗಿಯೇ ಸಿರಿಧಾನ್ಯ ಬೆಳೆಯುವುದು ರೂಢಿಯಲ್ಲಿದೆ. ಕಡಿಮೆ ಮಳೆಯ ನಡುವೆ ಬರಿ ಇಬ್ಬನಿ ಆಧರಿಸಿ ವಾರ್ಷಿಕವಾಗಿ ಎರಡು ಬೆಳೆಗಳನ್ನು ರೈತರು ತೆಗೆಯುತ್ತಾರೆ. ಈ ಮೊದಲು ಸಿರಿಧಾನ್ಯಗಳಿಗೆ ಮಾರುಕಟ್ಟೆ ಇರಲಿಲ್ಲ. ಈಗ ಮಾರುಕಟ್ಟೆ ದೊರಕುತ್ತಿದೆ. ರಾಗಿ, ಭತ್ತ, ತೊಗರಿ ಮಾದರಿಯಲ್ಲಿ ಸಿರಿಧಾನ್ಯಗಳನ್ನು ಬೆಂಬಲ ಬೆಲೆಯಡಿ ಖರೀದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದರು.

ಇದೇ ಜ.23 ರಿಂದ 25 ರವರೆಗೆ ಅಂತರರಾಷ್ಟ್ರೀಯ ಸಾವಯವ ಸಿರಿಧಾನ್ಯ ಮೇಳ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಮೇಳ ಉದ್ಘಾಟಿಸುವರು. ದೇಶದ 25 ರಾಜ್ಯಗಳ ಕೃಷಿ ಮಂತ್ರಿಗಳು ಹಾಗೂ ಅಧಿಕಾರಿಗಳು, ರೈತರು ಭಾಗವಹಿಸುವರು. ಇದರೊಂದಿಗೆ ವಿವಿಧ ದೇಶಗಳ ಅಧಿಕಾರಿ ಹಾಗೂ ರೈತರು ಸಹ ಮೇಳದಲ್ಲಿ ಪಾಲ್ಗೊಳ್ಳುವರು. ಈ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲೂ ಸಿರಿಧಾನ್ಯಗಳಿಗೆ ಮಾರುಕಟ್ಟೆ ದೊರಕಿಸಲು ಪ್ರಯತ್ನ ಮಾಡಲಾಗುವುದು ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment