ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ದಾವಣಗೆರೆ, ಅ.30 : ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2024-25ನೇ ಸಾಲಿನಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾ ಉತ್ಪನ್ನವನ್ನು ಖರೀದಿಸಲು ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದ್ದಾರೆ.
ಮಂಗಳವಾರ(29) ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಟಾಸ್ಕ್ ಪೆÇೀರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರೈತರಿಂದ ಶೇಂಗಾ ಉತ್ಪನ್ನವನ್ನು ಪ್ರತಿ ಎಕರೆಗೆ ಮೂರು ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಾಲ್ ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾವನ್ನು ಪ್ರತಿ ಕ್ಚಿಂಟಾಲ್ ಗೆ ರೂ.6,783 ಗಳಂತೆ ಬೆಂಬಲ ಬೆಲೆಯಲ್ಲಿ ಖರೀದಿಸಲಾಗುವುದು.
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಅನುಸಾರ ನ್ಯಾಫೆಡ್ ಸಂಸ್ಥೆಯನ್ನು ಖರೀದಿ ಏಜೆನ್ಸಿಯಾಗಿ ಹಾಗೂ ಕರ್ನಾಟಕ ಸಹಕಾರ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳಿ ನಿಯಮಿತ, ಬೆಂಗಳೂರು ಇವರನ್ನು ರಾಜ್ಯ ಮಟ್ಟದ ಖರೀದಿ ಏಜೆನ್ಸಿಯನ್ನಾಗಿ ನೇಮಿಸಲಾಗಿದೆ.

ರೈತರ ನೋಂದಣಿ ಕಾಲಾವಧಿಯನ್ನು 45 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗಧಿಪಡಿಸಲಾಗಿದೆ. ರೈತರು ಫ್ರೂಟ್ಸ್ ಐ.ಡಿಯೊಂದಿಗೆ ಕರ್ನಾಟಕ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳ ನಿಯಮಿತ, ದಾವಣಗೆರೆ, ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳ ನಿಯಮಿತ, ಜಗಳೂರು ಈ ಸ್ಥಳಗಳಲ್ಲಿನ ಖರೀದಿ ಕೇಂದ್ರಗಳಲ್ಲಿ ನೊಂದಣಿ ಮಾಡಿಕೊಂಡು ಶೇಂಗಾ ಮಾರಾಟ ಮಾಡಬಹುದು.
ಜಿಲ್ಲೆಯಲ್ಲಿ ಖರೀದಿಸಿದ ಶೇಂಗಾ ಹುಟ್ಟುವಳಿಯನ್ನು ದಾಸ್ತಾನು ಮಾಡಲು ಜಿಲ್ಲೆಯಲ್ಲಿರುವ ರಾಜ್ಯ ಹಾಗೂ ಕೇಂದ್ರ ಉಗ್ರಾಣಗಳಲ್ಲಿ ಸ್ಥಳ ಕಾಯ್ದಿರಿಸಲು ಸೂಚಿಸಲಾಯಿತು. ಶೇಂಗಾ ಮಾರಾಟ ಮಾಡಿದ ರೈತರಿಗೆ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಮಾರಾಟ ಮಾಡಿದ ರೈತರ ಹೆಸರಿನ ಅಧಾರ್ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಜಮಾ ಆಗುವಂತೆ ಪಾವತಿ ಮಾಡಲು ಪ್ರತಿನಿತ್ಯ ಖರೀದಿಸುವ ಪ್ರಗತಿಯ ವಿವರವನ್ನು ಸರ್ಕಾರಕ್ಕೆ ಹಾಗೂ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ಇ-ಮೇಲ್ ಮೂಲಕ ಸಲ್ಲಿಸಲು ಸೂಚಿಸಲಾಯಿತು.
ಗುಣಮಟ್ಟ ಪರಿಶೀಲನೆಗಾಗಿ ಗ್ರೇಡರ್ ಗಳನ್ನು ಕೃಷಿ ಮತ್ತು ತೋಟಗಾರಿಕೆ ಇಲಾಖೆಯಿಂದ ನೇಮಕ ಮಾಡಲು ಹಾಗೂ ಸಿಬ್ಬಂದಿಗಳಿಗೆ ಎಫ್.ಎ.ಕ್ಯೂ ಗ್ರೇಡಿಂಗ್ ತರಬೇತಿ ನೀಡಲು ಸೂಚಿಸಲಾಯಿತು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್