Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರ್ಕಾರಿ ಪ್ರೌಢಶಾಲೆಗಳಲ್ಲೂ AI ಶಿಕ್ಷಣ : ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ

---Advertisement---

ಬೆಂಗಳೂರು.ಜುಲೈ.19: ತಂತ್ರಜ್ಞಾನ ಲೋಕದ ಹೊಸ ಕ್ರಾಂತಿ ಕೃತಕ ಬುದ್ಧಿಮತ್ತೆ (Artificial Intelligence) ಇನ್ಮುಂದೆ ರಾಜ್ಯದ ಸರ್ಕಾರಿ ಪ್ರೌಢಶಾಲೆಗಳ ಮಕ್ಕಳಿಗೂ ಲಭ್ಯವಾಗಲಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ವಿದ್ಯಾರ್ಥಿಗಳಿಗೆ ಎಐ ತಂತ್ರಜ್ಞಾನವನ್ನು ಪರಿಚಯಿಸಲು ರಾಜ್ಯ ಸರ್ಕಾರ ಒಂದು ಕ್ರಾಂತಿಕಾರಿ ತೀರ್ಮಾನ ಕೈಗೊಂಡಿದೆ.

ರಾಷ್ಟ್ರೀಯ ಕೌಶಲ್ಯ ಅರ್ಹತಾ ಚೌಕಟ್ಟಿನ (NSQF) ಅಡಿಯಲ್ಲಿ ತೃತೀಯ ಭಾಷೆಗೆ ಪರ್ಯಾಯವಾಗಿ ವಿದ್ಯಾರ್ಥಿಗಳು ಈ ಹೊಸ ವಿಷಯವನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ಹಿಂದೆ ಚಾಲ್ತಿಯಲ್ಲಿದ್ದ ರಿಟೇಲ್, ಬ್ಯೂಟಿ ಅಂಡ್ ವೆಲ್ ನೆಸ್, ಅಪೇರಲ್ ಅಂಡ್ ಮೇಡ್ ಆಪ್ ನಂತಹ ವಿಷಯಗಳ ಬದಲಾಗಿ, ಇಂದಿನ ಆಧುನಿಕ ಜಗತ್ತಿಗೆ ಅತ್ಯಗತ್ಯವಾಗಿರುವ ಎಐ ಬೋಧನೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರು ತಿಳಿಸಿದ್ದಾರೆ.

1,600ಕ್ಕೂ ಹೆಚ್ಚು ಶಾಲೆಗಳಲ್ಲಿ ಅನುಷ್ಠಾನ:
ಹೊಸದಾಗಿ ಆಯ್ಕೆಯಾಗಿರುವ 1180 ಶಾಲೆಗಳು, ಕಳೆದ ಎರಡು ಶೈಕ್ಷಣಿಕ ಸಾಲಿನಲ್ಲಿ ಅನುಮೋದನೆ ಪಡೆದಿದ್ದ 381 ಶಾಲೆಗಳು ಹಾಗೂ 81 ಸಿಂಗಲ್ ಸೆಕ್ಟರ್ ಶಾಲೆಗಳು ಸೇರಿದಂತೆ ಒಟ್ಟು 1642 ಸರ್ಕಾರಿ ಪ್ರೌಢಶಾಲೆಗಳಲ್ಲಿ ಈ ನೂತನ ಪಠ್ಯಕ್ರಮ ಜಾರಿಗೆ ಬರಲಿದೆ.

ಶಿಕ್ಷಕರ ನೇಮಕ ಮತ್ತು ತರಬೇತಿ:
ಈ ಮಹತ್ವಾಕಾಂಕ್ಷಿ ಯೋಜನೆಗಾಗಿ ಪ್ರತಿ ಶಾಲೆಗೆ ಒಬ್ಬರಂತೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಸರ್ಕಾರ ಮುಂದಾಗಿದೆ. ಈ ನೇಮಕಾತಿ ಪ್ರಕ್ರಿಯೆಯನ್ನು ಜುಲೈ 28 ರೊಳಗಾಗಿ ಪೂರ್ಣಗೊಳಿಸುವಂತೆ ಸೂಚನೆ ನೀಡಲಾಗಿದ್ದು, ಆಯ್ಕೆಯಾದ ಶಿಕ್ಷಕರಿಗೆ ಆಗಸ್ಟ್ ಮೊದಲ ವಾರದಲ್ಲಿ ವಿಶೇಷ ತರಬೇತಿ ಹಮ್ಮಿಕೊಳ್ಳಲಾಗಿದೆ. ಈ ಹುದ್ದೆಗೆ ಆಯ್ಕೆಯಾಗುವ ಅತಿಥಿ ಶಿಕ್ಷಕರಿಗೆ ಮಾಸಿಕ 20 ಸಾವಿರ ರೂಪಾಯಿ ಗೌರವಧನ ನಿಗದಿಪಡಿಸಲಾಗಿದೆ. ಸರ್ಕಾರದ ಈ ನಿರ್ಧಾರದಿಂದಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳೂ ಕೂಡ ಜಾಗತಿಕ ಮಟ್ಟದ ತಂತ್ರಜ್ಞಾನ ಶಿಕ್ಷಣವನ್ನು ಪಡೆಯಲು ಹಾದಿ ಸುಗಮವಾದಂತಾಗಿದೆ.

Join WhatsApp

Join Now

Join Telegram

Join Now