Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಪ್ರಜಾತಾಂತ್ರಿಕ ಸಮಾಲೋಚನೆಯ ಮೂಲಕ ದ್ವಿಭಾಷಾ ನೀತಿ ಜಾರಿಗೆ ತರಲು AIDSO ಆಗ್ರಹ

---Advertisement---

 

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 29 : ಇತ್ತೀಚೆಗೆ ಕರ್ನಾಟಕ ಸರ್ಕಾರ ಎಸೆಸೆಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕವನ್ನು ತೆಗೆದು, ಗ್ರೇಡಿಂಗ್ ಪದ್ಧತಿಯನ್ನು ಜಾರಿಗೆ ತಂದಿದೆ. ಈ ಮೂಲಕ, ತೃತೀಯ ಭಾಷೆಯನ್ನು ಕಡ್ಡಾಯ ತೇರ್ಗಡೆ ಹೊರಗಿರಿಸಿ, ಎಸೆಸೆಲ್ಸಿ ಒಟ್ಟಾರೆ ಅಂಕವನ್ನು 525ಕ್ಕೆ ಇಳಿಸಿದೆ. ಹಿಂದಿ ಭಾಷೆಯನ್ನು ಗುರಿಯಾಗಿರಿಸಿ, ತೃತೀಯ ಭಾಷೆಯ ಹೊರೆ ಕಡಿಮೆ ಗೊಳಿಸಿರುವುದು ಮುಂದೆ ದ್ವಿಭಾಷಾ ನೀತಿಯನ್ನು ರಾಜ್ಯದಲ್ಲಿ ಜಾರಿಗೆ ತರುವತ್ತ ಪ್ರಮುಖ ಹೆಜ್ಜೆಯಾಗಿದೆ. ಭಾಷಾ ತಜ್ಞರು, ಶಿಕ್ಷಣ ತಜ್ಞರು ಹಲವು ವರ್ಷಗಳಿಂದ ದ್ವಿಭಾಷಾ ನೀತಿಗಾಗಿ ಆಗ್ರಹಿಸುತ್ತಿದ್ದಾರೆ.

 

ಈ ಹಿನ್ನಲೆಯಲ್ಲಿ, ಜನರ ಬೇಡಿಕೆಗೆ ಮನ್ನಣೆ ನೀಡುತ್ತಾ ಸರ್ಕಾರ ಗ್ರೇಡಿಂಗ್ ವ್ಯವಸ್ಥೆ ಜಾರಿ ಮಾಡಿದೆ. ಆದರೆ, ಈ ಸಂಪೂರ್ಣ ಪ್ರಕ್ರಿಯೆ ಪರೀಕ್ಷೆಯ ಮಧ್ಯ ಭಾಗದಲ್ಲಿ ಯಾವುದೇ ರೀತಿಯ ಸಮಾಲೋಚನೆ ನಡೆಸದೆ ಅಪ್ರಜಾತಾಂತ್ರಿಕವಾಗಿ ಘೋಷಿಸಿರುವುದು ಅತ್ಯಂತ ಖಂಡನೀಯ.

 

ಇದೀಗ, ವಿದ್ಯಾರ್ಥಿಗಳ ಹಿತದೃಷ್ಟಿಯ ಹೆಸರಿನಲ್ಲಿ ಇಂತಹ ನೀತಿಯನ್ನು ಅಪ್ರಜಾತಾಂತ್ರಿಕವಾಗಿ ಜಾರಿಗೆ ತಂದರೆ, ಮುಂದೆ ಇದೇ ರೀತಿಯಲ್ಲಿ ಶಿಕ್ಷಣ ವಿರೋಧಿ, ವಿದ್ಯಾರ್ಥಿ ವಿರೋಧಿ ನೀತಿಗಳನ್ನು ಸಹ ಯಾವುದೇ ಸಮಾಲೋಚನೆ, ಚರ್ಚೆ ಇಲ್ಲದೆ ಜಾರಿಗೆ ತರುವುದು ಸರ್ವೇ ಸಾಮಾನ್ಯ ಎಂಬಂತಾಗುತ್ತದೆ. ಈ ರೀತಿ, ಶೈಕ್ಷಣಿಕ ವರ್ಷದ ಕೊನೆಯಲ್ಲಿ ಶಿಕ್ಷಕರು, ಪೋಷಕರು ಯಾರ ಅಭಿಪ್ರಾಯವನ್ನು ಪಡೆಯದೇ ನೀತಿಗಳನ್ನು ಬದಲಾಯಿಸುವ ಪ್ರಕ್ರಿಯೆ ಶಿಕ್ಷಣದ ಆಶಯಕ್ಕೆ ಧಕ್ಕೆ ಉಂಟುಮಾಡುತ್ತದೆ.

ಮಾತೃಭಾಷೆ ಮತ್ತು ಆಂಗ್ಲ ಭಾಷೆಯನ್ನು ಒಳಗೊಂಡ ದ್ವಿಭಾಷಾ ನೀತಿಯನ್ನು ರಾಜ್ಯದಲ್ಲಿ ಜಾರಿಗೆ ತರಬೇಕು ಎಂದು ಹೇಳುತ್ತಲೇ, AIDSO ವಿದ್ಯಾರ್ಥಿ ಸಂಘಟನೆಯು ಶಿಕ್ಷಣ ನೀತಿಗಳನ್ನು ಅಪ್ರಜಾತಾಂತ್ರಿಕವಾಗಿ ಜಾರಿಗೆ ತರುವುದನ್ನು ರಾಜ್ಯ ಸರ್ಕಾರ ಕೈಬಿಡಬೇಕೆಂದು ಆಗ್ರಹಿಸುತ್ತದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...