ಕೆ. ಸಿ. ರಘು ಅವರ ನಿಧನಕ್ಕೆ ಎಐಡಿವೈಓ ತೀವ್ರ ಸಂತಾಪ

1 Min Read

 

ಸುದ್ದಿಒನ್, ಬೆಂಗಳೂರು, ಅಕ್ಟೋಬರ್.15 : ನಾಡಿನ ಹೆಸರಾಂತ ಆಹಾರ ತಜ್ಞರು, ಪ್ರಗತಿಪರ ಚಿಂತಕರು ಹಾಗೂ ಸಾಮಾಜಿಕ ಹೋರಾಟಗಾರರಾದ ಕೆ.ಸಿ. ರಘು ಅವರ ನಿಧನಕ್ಕೆ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಓ) ತೀವ್ರ ಸಂತಾಪವನ್ನು ಸೂಚಿಸಿದೆ.

ಸಮಾಜದಲ್ಲಿನ ಸಮಕಾಲಿನ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದ ಡಾ. ಕೆ. ಸಿ. ರಘು ಅವರು, ಬಡವರ ಅದೂ ದುಡಿಯುವ ವರ್ಗದ ಬಗ್ಗೆ ಅಪಾರ ಕಾಳಜಿಯನ್ನು ಹೊಂದಿದ್ದರು. ದೇಶದ ಆರ್ಥಿಕ ಪರಿಸ್ಥಿತಿ, ನಿರುದ್ಯೋಗ ಅಲ್ಲದೇ ಸರ್ಕಾರಗಳ ಆರ್ಥಿಕ ನೀತಿಗಳ ಬಗ್ಗೆ ಸ್ಪಷ್ಟ ಮತ್ತು ವಸ್ತುನಿಷ್ಠ ವಿಶ್ಲೇಷಣೆಯನ್ನು ನೀಡುತ್ತಿದ್ದ ಅವರು ಪ್ರಜತಾಂತ್ರಿಕ ಮತ್ತು ಧರ್ಮ ನಿರಪೇಕ್ಷ ಮೌಲ್ಯಗಳನ್ನು ಎತ್ತಿ ಹಿಡಿಯುತ್ತಿದ್ದ ರೀತಿ ಅನನ್ಯವಾಗಿತ್ತು.

ನಮ್ಮ ಎಐಡಿವೈಓ ಸಂಘಟನೆಯ ಹಲವಾರು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸಮಾಜದಲ್ಲಿನ ಅನ್ಯಾಯಗಳ ವಿರುದ್ಧ ಹೋರಾಡಲು ಯುವಜನರನ್ನು ಪ್ರೇರೇಪಿಸುತ್ತಿದ್ದರು. ಅವರ ನಿಧನವು ಪ್ರಗತಿಪರ ಹೋರಾಟಕ್ಕೆ ಅಪಾರ ನಷ್ಟವನ್ನುಂಟು ಮಾಡಿದೆ ಎಂದು ಎಐಡಿವೈಓ ರಾಜ್ಯಾಧ್ಯಕ್ಷರಾದ ಶರಣಪ್ಪ ಉದ್ಬಾಳ ಮತ್ತು ಎಐಡಿವೈಓ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *