Connect with us

Hi, what are you looking for?

ಪ್ರಮುಖ ಸುದ್ದಿ

ಆರೋಗ್ಯ ಕ್ಷೇತ್ರದ ಸಿಬ್ಬಂದಿ ಹೆಚ್ಚಿಸಲು ಎಐಡಿವೈಓ ಆಗ್ರಹ

ಸುದ್ದಿಒನ್, ಚಿತ್ರದುರ್ಗ, (ಮೇ.23) : ಕೋವಿಡ್ ನಿರ್ವಹಣೆಗಾಗಿ ಆರೋಗ್ಯ ಕ್ಷೇತ್ರದ ಸಿಬ್ಬಂದಿ ಸಂಖ್ಯೆ ಹೆಚ್ಚಿಸಿ. ಸೋಂಕಿನಿಂದ ಜನರ ಜೀವ ಉಳಿಸಲು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಓ) ರಾಜ್ಯ ಮಟ್ಟದ ಆನ್ಲೈನ್ ಪ್ರತಿಭಟನೆ ನಡೆಸಿತು.

ಜಿಲ್ಲೆಯಾದ್ಯಂತ ನೂರಾರು ಯುವಜನರು ಹಾಗೂ ನಾಗರಿಕರು ಬೇಡಿಕೆಗಳ ಪಟ್ಟಿಯನ್ನು ಕೈಯಲ್ಲಿ ಹಿಡಿದು ತಮ್ಮ ಫೋಟೋಗಳನ್ನು ಕಳಿಸುವ ಮೂಲಕ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವ ಮೂಲಕ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಸೂಕ್ತ ಅರ್ಹತೆಯನ್ನು ಪಡೆದ ಲಕ್ಷಾಂತರ ಯುವಜನರು ಉದ್ಯೋಗವಿಲ್ಲದೇ ಪರಿತಪಿಸುತ್ತಿದ್ದಾರೆ. ಸರ್ಕಾರ ಈ ತುರ್ತು ಸಂದರ್ಭವನ್ನು ಸರಿಯಾಗಿ ನಿಭಾಯಿಸಲು ಆರೋಗ್ಯ ಕ್ಷೇತ್ರಕ್ಕೆ ಅಗತ್ಯ ಸಿಬ್ಬಂದಿಯನ್ನು ಸಮರೋಪಾದಿಯಲ್ಲಿ ನೇಮಕ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.

ವಿಜ್ಞಾನಿಗಳು ಜನವರಿ ತಿಂಗಳಲ್ಲಿಯೇ ಕೊರೋನಾ ಎರಡನೇ ಅಲೆಯ ಮುನ್ಸೂಚನೆ ನೀಡಿದ್ದರು. ಸರ್ಕಾರ ಅದನ್ನು ಪರಿಗಣನೆಗೆ ತೆಗದುಕೊಳ್ಳದೆ ಅಪಾರ ಜನಸ್ತೋಮ ಸೇರುವ ಕಾರ್ಯಕ್ರಮಗಳಿಗೆ ಪರವಾನಗಿ ನೀಡಿತು. ತಾನೇ ಜನರನ್ನು ಸೇರಿಸಿ ಉಪಚುನಾವಣೆಗಳನ್ನು ನಡೆಸಿತು. ಇದರಿಂದಾಗಿ ರಾಜ್ಯದಲ್ಲಿ ಸೋಂಕು ವಿಪರೀತವಾಗಿ ಹರಡಿ, ಸೋಂಕು ಹೆಚ್ಚಾಗುತ್ತಿರುವ ರಾಜ್ಯಗಳ ಪೈಕಿ ಕರ್ನಾಟಕ ದೇಶಕ್ಕೇ 2ನೇ ಸ್ಥಾನದಲ್ಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆರೋಗ್ಯ ಇಲಾಖೆಯಲ್ಲಿರುವ ಬೆರಳೆಣಿಕೆಯಷ್ಟು ನೌಕರರು ಅಪಾರ ಒತ್ತಡವನ್ನು ಅನುಭವಿಸುತ್ತಿದ್ದಾರೆ. ವಲ್ರ್ಡ್ ಹೆಲ್ತ್ ಆರ್ಗನೈಸೇಷನ್ ಶಿಫಾರಸ್ಸು ಮಾಡುವಂತೆ ಪ್ರತೀ 10 ಸಾವಿರ ಮಂದಿಗೆ 44.5ರಷ್ಟು ಆರೋಗ್ಯ ಕಾರ್ಯಕರ್ತರು ಇರಬೇಕು. ಆದರೆ ನಮ್ಮ ರಾಜ್ಯದಲ್ಲಿ ಪ್ರತೀ 10 ಸಾವಿರ ಮಂದಿಗೆ ಇರುವ ಆರೋಗ್ಯ ಕಾರ್ಯಕರ್ತರ ಸಂಖ್ಯೆ ಕೇವಲ 15.1 ಮಾತ್ರ. ಅಪಾರವಾದ ಸಿಬ್ಬಂದಿ ಕೊರತೆ ಇರುವುದರಿಂದ ನಾಲ್ಕೈದು ಸಿಬ್ಬಂದಿಯ ಕೆಲಸವನ್ನು ಒಬ್ಬರೇ ನಿರ್ವಹಿಸುವ ಸ್ಥಿತಿ ಬಂದಿದೆ. ಈ ಕಾರಣದಿಂದ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆಯದೆ ಅಸಂಖ್ಯಾತ ಸೋಂಕಿತರು ಅಸುನೀಗಿದ್ದಾರೆ.

ಮೂರನೇ ಅಲೆಯ ಬಗ್ಗೆ ಹಲವಾರು ವಿಜ್ಞಾನಿಗಳು, ವೈರಾಣು ತಜ್ಞರು ಈಗಾಗಲೇ ಸಾಕಷ್ಟು ಬಾರಿ ಎಚ್ಚರಿಕೆ ನೀಡಿದ್ದಾರೆ. ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ತಕ್ಷಣವೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಬೇಕು. ಆರೋಗ್ಯ ವ್ಯವಸ್ಥೆಯನ್ನು ಅದಕ್ಕಾಗಿ ಸಜ್ಜುಗೊಳಿಸಬೇಕು. ಆರೋಗ್ಯ ಇಲಾಖೆಯಲ್ಲಿ ಈಗಿರುವ ಸಿಬ್ಬಂದಿ ಯಾವುದಕ್ಕೂ ಸಾಲದು. ಹೆಚ್ಚಿನ ಸಂಖ್ಯೆಯಲ್ಲಿ ಸಿಬ್ಬಂದಿಯನ್ನು ಖಾಯಂ ನೇಮಕಾತಿ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಎಐಡಿವೈಓ ಜಿಲ್ಲಾ ಸಮಿತಿ ನಿಂಗರಾಜು ಇತರರಿದ್ದರು.

Click to comment

Leave a Reply

Your email address will not be published. Required fields are marked *

Latest

ಚಿತ್ರದುರ್ಗ

upper bhadra meeting in DS Hally, chitradurga ಡಿಎಸ್ ಹಳ್ಳಿಯಲ್ಲಿ ಭದ್ರಾ ಮೇಲ್ದಂಡೆ ಸಭೆ; ಗ್ರಾಮಸ್ಥರು ಭಾಗಿ ಸುದ್ದಿಒನ್, ಚಿತ್ರದುರ್ಗ, (ಆ.03) : ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಶಾಲೆ ಆವರಣದಲ್ಲಿ...

ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ, (ಆ.03) : ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಸ್ ಜೆ ಎಮ್ ಸಿ ಬಿ ಎಸ್ ಇ ರೆಸಿಡೆನ್ಷಿಯಲ್ ಶಾಲೆಯು 2020-21 ನೇ ಸಾಲಿನ ಸಿ ಬಿ ಎಸ್ ಇ...

ಪ್ರಮುಖ ಸುದ್ದಿ

ಬೆಂಗಳೂರು: ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆ ನಡೆಸೋದಕ್ಕಾಗಿಯೇ ಸಿಎಂ ಮೂರು ದಿನದಿಂದ ದೆಹಲಿಯಲ್ಲಿದ್ದಾರೆ. ಈಗಾಗಲೇ ಹೈಕಮಾಂಡ್ ಜೊತೆ ಈ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಅಷ್ಟೇ ಅಲ್ಲ ಸಂಪುಟದಲ್ಲಿ ಯಾರೆಲ್ಲಾ ಇರ್ಬೇಕು...

ಪ್ರಮುಖ ಸುದ್ದಿ

ಮುಂಬೈ: ಶಿಲ್ಲಾ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಎಷ್ಟು ಆ್ಯಕ್ಟೀವ್ ಆಗಿದ್ರೋ ಮಗ ವಿಹಾನ್ ಕುಂದ್ರಾ ಕೂಡ ಅಷ್ಟೇ ಆ್ಯಕ್ಟೀವ್ ಆಗಿದ್ದ. ಸದಾ ಸೋಷಿಯಲ್ ಮೀಡಿಯಾದಲ್ಲಿ ಒಂದಿಲ್ಲೊಂದು ಪೋಸ್ಟ್ ಹಾಕ್ತಾ ಇದ್ದ. ಆದ್ರೆ ರಾಜ್...

ಪ್ರಮುಖ ಸುದ್ದಿ

ರಾಜಸ್ಥಾನ : ಹಿಂದಿನ ಕಾಲದಿಂದಲೂ ಪಾರಿವಾಳ ಸಂದೇಶ ರವಾನಿಸುವ, ಬೇಹುಗಾರಿಕೆಯಲ್ಲೂ ತನ್ನ ಚಾಣಾಕ್ಯತನ ತೋರಿದೆ. ತಂತ್ರಜ್ಞಾನ ಮುಂದುವರೆದ ಕಾಲದಲ್ಲೂ ಪಾಕಿಸ್ತಾನದಿಂದ ಪತ್ರವೊಂದನ್ನ ಹೊತ್ತು ತಂದಿದೆ ಪಾರಿವಾಳ. ಹೌದು, ಈ ಘಟನೆ ನಡೆದಿರೋದು ರಾಜಸ್ಥಾನದ...

ಪ್ರಮುಖ ಸುದ್ದಿ

ಬೆಂಗಳೂರು :ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕೊನೆ ಕ್ಷಣದಲ್ಲಿ ತನ್ನ ಪಾಳಯದ ಬಸವರಾಜ್ ಬೊಮ್ಮಾಯಿ ಅವರಿಗೆ ಪಟ್ಟ ಕಟ್ಟಿ ಇದೀಗ ರಾಜ್ಯ ಪ್ರವಾಸಕ್ಕೆ ಮುಂದಾಗಿದ್ದಾರೆ ಬಿ.ಎಸ್.ಯಡಿಯೂರಪ್ಪ. ದೆಹಲಿಯಲ್ಲಿ ಸಚಿವ ಸಂಪುಟ ಕಸರತ್ತು...

You May Also Like

ಚಿತ್ರದುರ್ಗ

ಚಿತ್ರದುರ್ಗ, (ಜು.31): ಕೋಟೆನಾಡಿನಲ್ಲಿ ಮತ್ತೆ ಸರಗಳ್ಳತ ಹಾವಳಿ ಶುರುವಾಗಿದೆ. ಬೆಳಗಿ ಹೊತ್ತು ವಾಯು ವಿಹಾರಕ್ಕೆ ಬರುವ ಮಹಿಳೆಯರನ್ನು ಟಾರ್ಗೆಟ್ ಮಾಡುವ ಕಳ್ಳರು ಬೈಕ್ ನಲ್ಲಿ ಬಂದು ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದಾರೆ. ಶನಿವಾರ ಬೆಳಗ್ಗೆ...

ಪ್ರಮುಖ ಸುದ್ದಿ

ಅಭಿಮಾನಿಗಳು ತಮ್ಮ ಅಭಿಮಾನವನ್ನ ಒಂದೊಂದು ಬಾರಿ ಒಂದೊಂದು ರೀತಿಯಲ್ಲಿ ಅಭಿಮಾನ ತೋರಿಸ್ತಾರೆ. ಅದರಲ್ಲೂ ಅಭಿಮಾನಿಗಳು ತಮ್ಮ ನೆಚ್ಚಿನ ನಟ ನಟಿಯರ ಫೋಟೋಗಳಿಗೆ ಹಾರ ಹಾಕಿ, ಅಭಿಷೇಕ‌ ಮಾಡಿ ಎಂಜಾಯ್ ಮಾಡ್ತಾರೆ. ಇನ್ನು ಒಂದೆಜ್ಜೆ...

ಆರೋಗ್ಯ

ರಾಗಿ ತಿಂದೋನಿಗೆ ರೋಗವಿಲ್ಲ ಅನ್ನೋ ಮಾತು ಕೇಳಿರ್ತೀರಿ. ಆದ್ರೆ ಈ ಮಾತು ಯಾಕೆ ಹೇಳ್ತಾರೆ ಅಂತ ಗೊತ್ತಾಗ್ಬೇಕಂದ್ರೆ ರಾಗಿಯಿಂದ ಆರೋಗ್ಯಕ್ಕೆ ಅದೆಷ್ಟೆಲ್ಲ ಲಾಭಗಳಿವೆ ಎಂದು ತಿಳ್ಕೋಬೇಕು. ರಾಗಿಯಲ್ಲಿ ಸಾಕಷ್ಟು ಕ್ಯಾಲ್ಶಿಯಂ ಇದೆ. ಆಸ್ಟಿಯೋಪೋರೋಸಿಸ್...

ಆರೋಗ್ಯ

ಅರಳಿ ಮರ ಸಾಮಾನ್ಯವಾಗಿ ಎಲ್ಲೆಡೆ ಇರುತ್ತೆ. ಅದಕ್ಕೆ ನಗರ, ಗ್ರಾಮೀಣ ಅಂತೆಲ್ಲಾ ಏನಿಲ್ಲ. ನಗರ ಪ್ರದೇಶದಲ್ಲೂ ದೇವಾಲಯದ ಮುಂದೆ ಅರಳಿಮರವನ್ನ ಕಾಣಬಹುದು. ಈ ಅರಳಿ‌ಮರದ ಎಲೆಗಳಿಂದ ಸಾಕಷ್ಟು ಲಾಭಗಳಿವೆ. ಅದು ಅಷ್ಟಾಗಿ ಯಾರಿಗೂ...

Copyright © 2021 Suddione. Kannada online news portal

error: Content is protected !!