ದೆಹಲಿ-ಮೀರತ್ ಇವೇನಲ್ಲಿ ಛಜರ್ಸಿ ಟೋಲ್ ಬಳಿ ಒವೈಸಿ ಮುಖ್ಯಸ್ಥ ಅಸಾದುದ್ದೀನ್ ಕಾರಿನ ಮೇಲೆ ಗುಂಡಿನ ದಾಳಿ ನಡೆದಿದೆ. ಉತ್ತರಪ್ರದೇಶದ ಮೀರತ್ ನಲ್ಲಿ ಚುನಾವಣಾ ಪ್ರಚಾರ ಮುಗಿಸಿ ಬರುವಾಗ ಈ ಘಟನೆ ನಡೆದಿದೆ.
ಘಟನೆ ನಡೆದ ಬಳಿಕ ಒಬ್ಬನನ್ನ ಬಂಧಿಸಲಾಗಿದೆ. ಇನ್ನು ಮೂರು ನಾಲ್ಕು ಸುತ್ತು ಗುಂಡಿನ ದಾಳಿ ನಡೆಸಲಾಗಿದೆ. ಆದ್ರೆ ಅದೃಷ್ಟವಶಾತ್ ಯಾವುದೇ ಪ್ರಾಣಾಯಾಮವಾಗಿಲ್ಲ. ಈ ಘಟನೆ ಬಳಿಕ ಎಲ್ಲರೂ ಸುರಕ್ಷಿತವಾಗಿರುವುದಾಗಿ ಒವೈಸಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
I was leaving for Delhi after a poll event in Kithaur, Meerut (UP). 3-4 rounds of bullets were fired upon my vehicle by 2 people near Chhajarsi toll plaza; they were a total of 3-4 people. Tyres of my vehicle (in pic) punctured, I left on another vehicle: Asaduddin Owaisi to ANI pic.twitter.com/ksV6OWb57h
— ANI (@ANI) February 3, 2022
ಗುಂಡು ಹಾರಿಸಿದ ಪರಿಣಾಮ ನನ್ನ ಕಾರು ಪಂಕ್ಚರ್ ಆಗಿದೆ. ಹೀಗಾಗಿ ನಾನು ಬೇರೆ ವಾಹನದಲ್ಲಿ ತೆರಳಿದ್ದೆ. ಮೀರತ್ ನಿಂದ ದೆಹಲಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಟೋಲ್ ಬಳಿ ಇಬ್ಬರು ದುಷ್ಕರ್ಮಿಗಳು ನನ್ನ ವಾಹನದ ಮೇಲೆ 4 ಸುತ್ತು ಗುಂಡು ಹಾರಿಸಿದ್ದಾರೆ. ಇವರ ಜೊತೆ ಇನ್ನೂ 3-4 ಮಂದಿ ಇದ್ದರು ಎಂದು ಟ್ವೀಟ್ ಮಾಡಿದೆ.