ನವ ದೆಹಲಿ, (ಸೆ.14) : ಒಮಾನ್ನ ಮಸ್ಕತ್ ವಿಮಾನ ನಿಲ್ದಾಣದಲ್ಲಿ ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಟೇಕ್-ಆಫ್ ಮಾಡುವ ಮೊದಲು ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದ್ದು ಸ್ವಲ್ಪದರಲ್ಲೇ ಬಾರಿ ಅನಾಹುತವೊಂದು ತಪ್ಪಿದೆ.
ಎಲ್ಲಾ ಸಿಬ್ಬಂದಿ ಸೇರಿದಂತೆ 145 ಪ್ರಯಾಣಿಕರನ್ನು(ಅವರಲ್ಲಿ ನಾಲ್ಕು ಶಿಶುಗಳು) ವಿಮಾನದಿಂದ ಸುರಕ್ಷಿತವಾದ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. 14 ಮಂದಿಗೆ ಚಿಕ್ಕ ಪುಟ್ಟ ಗಾಯಗಳಾಗಿವೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ ತಿಳಿಸಿದೆ.
ಮೊದಲು ಸರ್ಕಾರಿ ಒಡೆತನದಲ್ಲಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ಈಗ ಟಾಟಾ ಸಮೂಹದ ಒಡೆತನದಲ್ಲಿದೆ.