Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಎಂ ಪಟ್ಟ ಸಿಗುತ್ತಿದ್ದಂತೆ ಡಿಕೆಶಿಗೆ ಅಜ್ಜಯ್ಯ ಎಚ್ಚರಿಕೆ!

---Advertisement---

 

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಹೆಸರು ಬಹುತೇಕ ಖಚಿತವಾಗುತ್ತಿರುವ ನಡುವೆಯೇ, ನೊಣವಿನಕೆರೆ ಅಜ್ಜಯ್ಯ ಮಠದಲ್ಲಿ ನಡೆದ ಘಟನೆಯೊಂದು ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.ಬಹುಕಾಲದಿಂದ ಮುಖ್ಯಮಂತ್ರಿ ಹುದ್ದೆಯ ಕನಸು ಕಂಡಿದ್ದ ಡಿಕೆ ಶಿವಕುಮಾರ್, ಅದಕ್ಕಾಗಿ ರಾಜ್ಯದ ಹಲವು ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆಗಳನ್ನು ಸಲ್ಲಿಸಿದ್ದರು.

ಅನೇಕ ಸ್ವಾಮೀಜಿಗಳ ಆಶೀರ್ವಾದವೂ ಪಡೆದಿದ್ದರು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬ್ರೇಕ್‌ಫಾಸ್ಟ್ ಸಭೆಯಲ್ಲಿ “ಮುಂದಿನ ಸಿಎಂ ಡಿಕೆ ಶಿವಕುಮಾರ್” ಎಂದು ಘೋಷಣೆ ಮಾಡಿದ ಬೆನ್ನಲ್ಲೇ ಡಿಕೆಶಿ ನೊಣವಿನಕೆರೆ ಅಜ್ಜಯ್ಯ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ ಎನ್ನಲಾಗಿದೆ.ಈ ವೇಳೆ ಅಜ್ಜಯ್ಯ ಸ್ವಾಮೀಜಿ ಡಿಕೆ ಶಿವಕುಮಾರ್ ಅವರಿಗೆ ಹಣ್ಣು-ಕಾಯಿ ನೀಡಿ ಆಶೀರ್ವಾದ ಮಾಡಿದ್ದು, ಜೊತೆಗೆ ಮಹತ್ವದ ಎಚ್ಚರಿಕೆಯೊಂದನ್ನೂ ನೀಡಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. “ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವವರೆಗೂ ಯಾವುದೇ ಹೇಳಿಕೆ ನೀಡಬೇಡಿ. ಹೆಚ್ಚು ಮಾತಾಡಿದರೆ ಸಮಸ್ಯೆ ಉಂಟಾಗಬಹುದು” ಎಂದು ಸ್ವಾಮೀಜಿ ಎಚ್ಚರಿಸಿದ್ದಾರೆ ಎನ್ನಲಾಗುತ್ತಿದೆ.

“ಮಾತು ಆಡಿದರೆ ಹೋಯ್ತು” ಎಂಬ ಸೂಚನೆ ನೀಡಿದ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸ್ಥಾನ ಕುರಿತು ಇದುವರೆಗೆ ಡಿಕೆ ಶಿವಕುಮಾರ್ ಮಾಧ್ಯಮಗಳ ಮುಂದೆ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡದೇ ಮೌನ ಕಾಪಾಡಿಕೊಂಡಿದ್ದಾರೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.ಇದೀಗ ಡಿಕೆ ಶಿವಕುಮಾರ್ ಅವರ ಪ್ರತಿಯೊಂದು ಹೆಜ್ಜೆಯೂ ಕುತೂಹಲ ಕೆರಳಿಸಿದ್ದು, ಮುಖ್ಯಮಂತ್ರಿ ಪಟ್ಟದ ಘೋಷಣೆಗೆ ಮುನ್ನ ಧಾರ್ಮಿಕ ಕೇಂದ್ರಗಳ ಭೇಟಿ ಹಾಗೂ ಸ್ವಾಮೀಜಿಗಳ ಸಲಹೆಗಳು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now